ಖಾಸಗಿ ಶಾಲೆಗಳಲ್ಲಿ ಅಧಿಕ ಶುಲ್ಕ ವಸೂಲಿ
ನಿಗದಿತ ಶುಲ್ಕ ಪ್ರಕಟಿಸಲು ಜನಪರ ವೇದಿಕೆ ಆಗ್ರಹ • ಕ್ಷೇತ್ರ ಸಮನ್ವಯಾಧಿಕಾರಿ ಗೆ ಮನವಿ
Team Udayavani, Jun 21, 2019, 1:40 PM IST
ಖಾಸಗಿ ಶಾಲೆಗಳ ಹೆಚ್ಚು ಶುಲ್ಕ ವಸೂಲಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ಕ್ಷೇತ್ರ ಸಮನ್ವಯ ಅಧಿಕಾರಿ ಯೋಗೇಶ್‌ರವರಿಗೆ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಮಳವಳ್ಳಿ: ತಾಲೂಕಿನ ಖಾಸಗಿ ಶಾಲೆಗಳು ಪೋಷಕರಿಂದ ಅಧಿಕ ಶುಲ್ಕ ವಸೂಲಿ ಮಾಡಿ ಅದಕ್ಕೆ ಯಾವುದೇ ರಶೀದಿ ನೀಡದೆ ವಂಚಿಸುತ್ತಿರುವುದರಿಂದ ಎಲ್ಲಾ ಖಾಸಗಿ ಶಾಲೆಗಳು ನಿಗದಿತ ಶುಲ್ಕವನ್ನು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಕ್ಷೇತ್ರ ಸಮನ್ವಯ ಅಧಿಕಾರಿ ಯೋಗೇಶ್ ಅವರಿಗೆ ಕರ್ನಾಟಕ ಜನಪರ ವೇದಿಕೆಯ ಕಾರ್ಯಕರ್ತರು ಮನವಿ ಸಲ್ಲಿಸಿದರು.
ಕರ್ನಾಟಕ ಜನಪರ ವೇದಿಕೆಯ ಯುವ ಘಟಕ ರಾಜ್ಯಾಧ್ಯಕ್ಷ ಶ್ರೀನಿವಾಸ್ ಮಾತನಾಡಿ, ತಾಲೂಕಿನಲ್ಲಿ ಖಾಸಗಿ ಶಾಲೆಗಳು ನಾಯಿ ಕೊಡೆಗಳಂತೆ ತಲೆ ಎತ್ತುತ್ತಿವೆ. ಪೋಷಕರಿಂದ ಹೆಚ್ಚು ಹಣ ವಸೂಲಿ ಮಾಡುತ್ತಾ ಸುಲಿಗೆ ಮಾಡುತ್ತಿವೆ. ಸರ್ಕಾರದಿಂದ ನಿಗದಿಪಡಿಸಿರುವ ಶುಲ್ಕದ ಮಾಹಿತಿಯನ್ನು ಪ್ರಕಟಣಾ ಫಲಕದಲ್ಲಿ ಪ್ರದರ್ಶಿಸುವಂತೆ ಸೂಚಿಸಿದ್ದರೂ ಕೇವಲ ಸರ್ಕಾರಕ್ಕೆ ಮಾಹಿತಿ ನೀಡುವುದಕ್ಕೆ ಮಾತ್ರ ಫೋಟೋ ಹೊಡೆದು ಕಳುಹಿಸಿ ನಂತರ ತೆರವುಗೊಳಿಸಿವೆ. ಪೋಷಕರಿಗೂ ಸರ್ಕಾರದ ನಿಖರ ಶುಲ್ಕ ಮಾಹಿತಿ ತಿಳಿಯುವಂತೆ ಪ್ರದರ್ಶಿಸಬೇಕೆಂದು ತಾಕೀತು ಮಾಡಿದರು.
ಶಾಲೆಗಳ ನವೀಕರಣ ರದ್ದುಪಡಿಸಿ: ಆರ್‌ಟಿಇ ವಿದ್ಯಾರ್ಥಿಗಳಿಂದಲೂ ಹೆಚ್ಚು ಹಣ ವಸೂಲಿ ಮಾಡಲಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು, ತಾಲೂಕಿನ ಹಲವಾರು ಖಾಸಗಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳು ಇಲ್ಲದಿದ್ದರೂ ಮಾನ್ಯತೆ ನೀಡಲಾಗಿದೆ. ಪ್ರತಿವರ್ಷವೂ ಕೂಡ ನವೀಕರಣ ಮಾಡುವ ಸಂದರ್ಭದಲ್ಲಿ ಅಧಿಕಾರಿಗಳು ಶಾಲೆಯ ಸೌಲಭ್ಯಗಳ ಬಗ್ಗೆ ಪರಿಶೀಲನೆ ಮಾಡುತ್ತಿಲ್ಲ. ಮೂಲ ಸೌಕರ್ಯವಿಲ್ಲದ ಶಾಲೆಗಳ ನವೀಕರಣವನ್ನು ತಕ್ಷಣದಿಂದಲೇ ರದ್ದುಪಡಿಸುವಂತೆ ಆಗ್ರಹಿಸಿದರು.
ಅರ್ಹ ಶಿಕ್ಷಕರನ್ನು ನೇಮಿಸಿ:
ಖಾಸಗಿ ಶಾಲೆಗಳಲ್ಲಿ ಅರ್ಹತೆ ಇಲ್ಲದವರೂ ಕೂಡ ಪಾಠ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಿಂದ ಹೆಚ್ಚು ಹಣ ವಸೂಲಿ ಮಾಡಿಕೊಂಡು ಪಿಯುಸಿಯಲ್ಲಿಯೂ ಫೇಲಾಗಿರುವವನ್ನು ಶಿಕ್ಷಕರಾಗಿ ನೇಮಕ ಮಾಡಿಕೊಂಡಿರುವ ಉದಾಹರಣೆಗಳು ಸಾಕಷ್ಟಿವೆ. ಅರ್ಹ ಶಿಕ್ಷಕರನ್ನು ನೇಮಿಸಿಕೊಂಡು ವಿದ್ಯಾರ್ಥಿಗಳಿಗೆ ಪಾಠ ಮಾಡಲು ಅದೇಶ ಹೊರಡಿಸಬೇಕೆಂದು ಒತ್ತಾಯಿಸಿದ ಅವರು, ತಾವು ಸಲ್ಲಿಸಿರುವ ಮನವಿಗೆ ಸ್ಪಂದಿಸಿ ಆಗತ್ಯ ಕ್ರಮ ಕೈಗೊಳ್ಳದಿದ್ದರೆ ಜೂ 25ರಂದು ಆಮರಣಾಂತ ಉಪವಾಸವನ್ನು ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.
ಈ ವೇಳೆ ಕರ್ನಾಟಕ ಜನಪರ ವೇದಿಕೆಯ ಸುರೇಶ, ಮಹದೇವು, ವೀರಸ್ವಾಮಿ, ಶಿವಮೂರ್ತಿ, ರಮೇಶ್, ನಾಗರಾಜು, ಮಲ್ಲಿಕಾರ್ಜುನಸ್ವಾಮಿ, ವೇದಾವತಿ, ತಮ್ಮಯ್ಯ, ಕೃಷ ಚಂದ್ರಶೇಖರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ
Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ
Pegasus spyware ಬಗ್ಗೆ ಸುಪ್ರೀಂಕೋರ್ಟ್ ತನಿಖೆ ನಡೆಸಲಿ: ಸುರ್ಜೇವಾಲಾ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.