ಹಲ್ಲೆ: ಕ್ರಮವಹಿಸದ ಪೊಲೀಸರ ವಿರುದ್ದ ಪ್ರತಿಭಟನೆ


Team Udayavani, Apr 4, 2023, 11:03 AM IST

tdy-11

ಶ್ರೀರಂಗಪಟ್ಟಣ: ದಲಿತರು, ಹಿಂದೂಗಳ ಮನೆಗೆ ಮುಸ್ಲಿಂ ಯುವಕರು ದಾಳಿ ನಡೆಸಿ, ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದರೂ ಪೊಲೀಸರು ಯಾವುದೇ ಕಾನೂನು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ, ವಿಶ್ವ ಹಿಂದೂಪರಿಷತ್‌ ಹಾಗೂ ಭಜರಂಗದಳದ ಕಾರ್ಯಕರ್ತರು ಪಟ್ಟಣದ ಡಿವೈಎಸ್‌ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಿದರು.

ತಾಲೂಕಿನ ಹೊಸ ಆನಂದೂರು ಗ್ರಾಮದ ದಲಿತ ಸೋಮಶೇಖರ್‌ ಎಂಬುವವರ ಮನೆಗೆ ಮುಸ್ಲಿಮರು ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದು, ಈ ಸಂಬಂಧ ದೂರು ನೀಡಿ 3-4 ದಿನಗಳು ಕಳೆದಿದ್ದರೂ ಆರೋ ಪಿಗಳನ್ನು ಬಂಧಿಸದ ಕ್ರಮವನ್ನು ಖಂಡಿಸಿ, ಹಿಂದೂ ಸಂಘಟನೆ ಕಾರ್ಯಕರ್ತರು ಸಂತ್ರಸ್ಥರ ಜೊತೆಗೂಡಿ ಪ್ರತಿಭಟಿಸಿದರು.

ದಲಿತ ಸೋಮಶೇಖರ್‌ ಅವರಿಗೆ ಸೇರಿದ್ದ ಮಾವಿನ ಮರವಿದ್ದು, ಪಕ್ಕದಲ್ಲಿರುವ ಮದರಸದ ಲ್ಲಿರುವ ಮುಸ್ಲಿಂ ಯುವಕರು ಹಲವು ಬಾರಿ ಮಾವಿನ ಕಾಯಿಗಳನ್ನು ಕದ್ದು ಕೀಳುತ್ತಿದ್ದು, ಈ ಬಗ್ಗೆ ಸೋಮಶೇಖರ್‌ ಗದರಿಸಿ ಕಳುಹಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಮುಸ್ಲಿಂ ಯುವಕನ ಕುಟುಂಬಸ್ಥರು ಸೋಮಶೇಖರ್‌ ಮನೆಗೆ ಆಗಮಿಸಿ, ಮಾತುಕತೆ ನಡೆಸಿ ತೆರಳಿದ್ದರು ಎಂದು ತಿಳಿದು ಬಂದಿದೆ.

ಭಯದ ವಾತಾವರಣ ಸೃಷ್ಟಿ: ನಂತರ ಸಂಜೆ ವೇಳೆಗೆ 30ರಿಂದ 40 ಮಂದಿ ಮುಸ್ಲಿಂ ಸಮುದಾ ಯದವರು ಏಕಾಏಕಿ ಸೋಮಶೇಖರ್‌ ಮನೆಗೆ ನುಗ್ಗಿ ಅವರನ್ನು ಹಾಗೂ ಅವರ ಹೆಣ್ಣು ಮಕ್ಕಳಿಬ್ಬರ ಮೇಲೆ ಹಲ್ಲೆ ನಡೆಸಿ, ನಿಂದಿಸಿ ಕೊಲೆ ಬೆದರಿಕೆ ಒಡ್ಡಿರುವುದಾಗಿ ಕೆಆರ್‌ಎಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ. ಅದಾಗ್ಯೂ ಮುಸ್ಲಿಂ ಯುವಕರು ಬೈಕ್‌ಗಳಲ್ಲಿ ಸೋಮ ಶೇಖರ್‌ ಮನೆ ಮುಂದೆ ಗಸ್ತು ತಿರಿಗಿ, ಮಹಿಳೆ ಯರು ಮನೆಯಿಂದ ಈಚೆಗೆ ಬಾರದಂತೆ ಭಯದ ವಾತಾವರಣ ಸೃಷ್ಟಿಸಿರುವುದಾಗಿ ಸೋಮಶೇಖರ್‌ ತಿಳಿಸಿದ್ದಾರೆ.

ಪೊಲೀಸರು ಮೀನಮೇಷ: ವಿಷಯ ತಿಳಿದ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳ ಕಾರ್ಯಕರ್ತರು ಸಂತ್ರಸ್ಥ ಸೋಮಶೇಖರ್‌ ಅವರ ಮನೆಗೆ ತೆರಳಿ ನಿಮ್ಮೊಂದಿಗೆ ನಾವಿರು ವುದಾಗಿ ಧೈರ್ಯ ತುಂಬಿದ್ದಲ್ಲದೆ, ಠಾಣೆಗೆ ತೆರಳಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಮುಸ್ಲಿಂ ಪರ ನಿಂತಿದ್ದು, ಮುಸ್ಲಿಂ ಸಮುದಾಯದಿಂದಲೂ ಪ್ರತಿ ದೂರು ಕೊಡಿಸಿರುವುದರಿಂದ ಪೊಲೀಸರು ಮೀನಮೇಷ ಎಣಿಸುತ್ತಿದ್ದಾರೆ ಎಂದು ಸಂತ್ರಸ್ಥರು ಹಾಗೂ ಕಾರ್ಯಕರ್ತರು ಆರೋಪಿಸಿದರು.

ಡಿವೈಎಸ್‌ಪಿಗೆ ಮನವಿ ಸಲ್ಲಿಕೆ: ಈ ಹಿನ್ನಲೆಯಲ್ಲಿ ಪಟ್ಟಣದ ಡಿವೈಎಸ್‌ಪಿ ಕಚೇರಿ ಎದುರು ಸಂತ್ರಸ್ಥರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ತಪ್ಪಿದಲ್ಲಿ ಏ.7ರ ಶುಕ್ರವಾರ ಸ್ವಯಂ ಘೋಷಿತ ಶ್ರೀರಂಗಪಟ್ಟಣ ಬಂದ್‌ಗೆ ಕರೆ ನೀಡುತ್ತಿದ್ದು, ಮುಂದಿನ ಎಲ್ಲಾ ಆಗುಹೋಗುಗಳಿಗೆ ಪೊಲೀಸರೇ ನೇರ ಹೊಣೆ ಎಂದು ಡಿವೈಎಸ್‌ಪಿ ಮುರಳಿ ಅವರಿಗೆ ಮನವಿ ಸಲ್ಲಿಸಿ ಎಚ್ಚರಿಕೆ ನೀಡಿದರು.

ವಿಶ್ವ ಹಿಂದೂ ಪರಿಷತ್‌ ಜಿಲ್ಲಾ ಕಾರ್ಯದರ್ಶಿ ಹೊಸಆನಂದೂರು ಬಸವರಾಜು, ಭಜರಂಗದಳ ವಿಭಾಗ ಸಂಚಾಲಕ ಬಾಲಕೃಷ್ಣ, ಜಿಲ್ಲಾ ಸಂಚಾಲಕ ಪುನೀತ್‌, ಹಿಂದು ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಚಂದನ್‌, ತಾಲೂಕು ಕಾರ್ಯದರ್ಶಿ ಸುನೀಲ್‌, ಸಂಚಾಲಕ ಶಂಕರ್‌, ಸಹ ಸಂಚಾಲಕ ಸಂತೋಷ್‌, ವಕೀಲ ರವೀಶ್‌ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.