ಪತ್ನಿ ಗರ್ಭಿಣಿಯಾಗಿದ್ದಕ್ಕೆ ಮನೆ ಬಿಟ್ಟು ಹೋದ!
Team Udayavani, Nov 6, 2018, 7:00 AM IST
ಮಧುಗಿರಿ: ಹೆಂಡತಿ ಗರ್ಭಿಣಿಯಾಗಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಪತಿ ಮನೆ ಬಿಟ್ಟು ಪರಾರಿಯಾದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಬುಳ್ಳಸಂದ್ರದಲ್ಲಿ ನಡೆದಿದೆ.
ತಾಲೂಕಿನ ದೊಡ್ಡೇರಿ ಹೋಬಳಿಯ ಬುಳ್ಳಸಂದ್ರದ ಸಿದ್ದಲಿಂಗಪ್ಪ ಪರಾರಿಯಾದ ಪತಿರಾಯ. ಈತ 2 ವರ್ಷದ ಹಿಂದೆ
ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ ಚನ್ನಪಟ್ಟಣದ ಸರಸ್ವತಿ ಎಂಬಾಕೆಯನ್ನು ಮದುವೆಯಾಗಿದ್ದ. ಬೆಂಗಳೂರಲ್ಲಿ ಕೆಲಸ ಮಾಡುವಾಗ ಫೇಸ್‌ಬುಕ್‌ನಲ್ಲಿ ಆಕೆಯನ್ನು ಪರಿಚಯ ಮಾಡಿಕೊಂಡು, ಪ್ರೀತಿಸಿ, ಆಕೆಗೆ ನಿಗದಿಯಾಗಿದ್ದ ಮದುವೆಯನ್ನು ರದ್ದು ಪಡಿಸಿ, ತಾನೇ ವಿವಾಹವಾಗಿದ್ದ. ಕೆಲ ಕಾಲ ಬೆಂಗಳೂರಿನ ಹೆಗ್ಗೆರೆಯಲ್ಲಿ ವಾಸವಿದ್ದ. ಪತ್ನಿ, ಸರಸ್ವತಿ ಗರ್ಭಿಣಿಯಾದಾಗ ಆಕೆಯನ್ನು ಮಧುಗಿರಿಗೆ ಕರೆ ತಂದು ಗರ್ಭಪಾತಕ್ಕೆ ಒತ್ತಾಯಿಸಿದ. ಇದಕ್ಕೆ ಆಕೆ ಆಕ್ಷೇಪ ವ್ಯಕ್ತಪಡಿಸಿ ಗಲಾಟೆ ಮಾಡಿದಳು.
ಇದರಿಂದ ಬೇಸರ ಗೊಂಡು ಸಿದ್ದಲಿಂಗ ಪರಾರಿಯಾಗಿದ್ದಾನೆ. ಈ ಸಂಬಂಧ ಆಕೆ ಬಡವನಹಳ್ಳಿ ಹಾಗೂ ಬೆಂಗಳೂರಿನ ಅಕ್ಕೂರು ಪೋಲಿಸ್ ಠಾಣೆ ಗಳಿಗೆ ದೂರು ನೀಡಿದ್ದಾಳೆ. ಕಳೆದ ತಿಂಗಳಿಂದಲೂ ಬೆಂಗಳೂರಿನಲ್ಲಿನ ಕೆಲಸಕ್ಕೂ ಹಾಜರಾ ಗದ ಪತಿ, ನನಗೆ ಅನ್ಯಾಯ ಮಾಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಅಲ್ಲದೆ, ಬುಳ್ಳಸಂದ್ರದ ಪತಿ ಮನೆಯ ಮುಂದೆ ನ್ಯಾಯಕ್ಕಾಗಿ ಧರಣಿ ಕುಳಿತಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.