ಮನೆಗಳು ಬಿರುಕು: ಪರಿಹಾರಕ್ಕೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ
Team Udayavani, Jul 20, 2021, 12:42 PM IST
ಮದ್ದೂರು: ಕಲ್ಲು ಗಣಿಗಾರಿಕೆಯಿಂದ ಬಿರುಕು ಬಿಟ್ಟಿರುವ ಮನೆಗಳಿಗೆ ಡಿಬಿಎಲ್ ಕಂಪನಿ ವಿರುದ್ಧ ಪರಿಹಾರ ನೀಡುತ್ತಿಲ್ಲ ಎಂದು ಆರೋಪಿಸಿ ಚಂದಹಳ್ಳಿದೊಡ್ಡಿ ಗ್ರಾಮಸ್ಥರು ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಶಿರಸ್ತೇದಾರ್ ರೂಪಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಗ್ರಾಮದಮಹಿಳೆಯರು ತಾಲೂಕು ಆಡಳಿತ ಹಾಗೂ ದಿಲೀಪ್ ಬಿಲ್ಡ್ ಖಾನ್ ಕಂಪನಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ಹಾನಿಗೊಳಗಾದ ಮನೆಗಳಿಗೆ ಪರಿಹಾರ ನೀಡುವಂತೆ ಆಗ್ರಹಿಸಿದರು.
ಬೆಳೆ ಬೆಳೆಯಲು ಕಷ್ಟ: ಮೈಸೂರು, ಬೆಂಗಳೂರು ರಸ್ತೆ ಅಗಲೀಕರಣ ಕಾಮಗಾರಿ ಸಂಬಂಧ ಚಂದಹಳ್ಳಿದೊಡ್ಡಿ ಗ್ರಾಮದಲ್ಲಿ ಪ್ರತಿನಿತ್ಯ ಸ್ಫೋಟಕ ವಸ್ತುಗಳನ್ನು ಸಿಡಿಸಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು,ಇದರಿಂದಾಗಿ 150ಕ್ಕೂ ಹೆಚ್ಚು ಮನೆಗಳು ಹಾನಿಗೊಳಗಾಗಿ ಬಿರುಕುಬಿಟ್ಟಿರುವ ಜತೆಗೆ ಗ್ರಾಮವು ದೂಳಿನಿಂದ ಆವೃತ್ತವಾಗಿ ಜಮೀನುಗಳಲ್ಲಿ ಬೆಳೆ ಬೆಳೆಯಲು ಕಷ್ಟಕರವಾಗಿದೆ ಎಂದು ದೂರಿದರು.
ಕಳೆದ ಹಲವು ತಿಂಗಳ ಹಿಂದೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಗ್ರಾಮಸ್ಥರ ಜತೆಗೂಡಿ ನಿರಂತರ ಪ್ರತಿಭಟನೆ ನಡೆಸಿದಪರಿಣಾಮ ಡಿಬಿಎಲ್ ಕಂಪನಿ 180 ಕುಟುಂಬಗಳ ಪೈಕಿ ಕೇವಲ 70 ಮಂದಿಗೆ ಮಾತ್ರಪರಿಹಾರ ನೀಡುವಮೂಲಕ ತಾತ್ಸಾರಮನೋಭಾವ ತೋರುತ್ತಿರುವುದಾಗಿ ಆರೋಪಿಸಿದರು.
ಅನ್ಯಾಯ: ಗ್ರಾಮಸ್ಥರಿಗೆ ಇಲ್ಲಸಲ್ಲದ ನೆಪವೊಡ್ಡಿ ಪ್ರತಿನಿತ್ಯ ದಿನ ದೂಡುತ್ತಿದ್ದು, ಇದರಿಂದಾಗಿ ಕೂಲಿ ಕಾರ್ಮಿಕರು, ಬಡವರ್ಗದ ಕುಟುಂಬದವರಿಗೆ ಅನ್ಯಾಯಾವಾಗಿದ್ದು ಕೂಡಲೇ ಪರಿಹಾರ ವಿತರಿಸುವಂತೆ ಆಗ್ರಹಿಸಿದರು.
ತಹಶೀಲ್ದಾರ್ ಎಚ್.ಬಿ.ವಿಜಯಕುಮಾರ್, ಪೊಲೀಸ್ ಇಲಾಖೆ ಅಧಿಕಾರಿಗಳು ಗ್ರಾಮಸ್ಥರಿಗೆ ಪರಿಹಾರ ಕೊಡಿಸುವ ಭರವಸೆ ನೀಡಿದ್ದರೂ ಇದುವರೆಗೂ ಪರಿಹಾರ ವಿತರಿಸದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಾದಿ ಹಿಡಿದಿದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಹಾನಿಗೊಳಗಾದ ಮನೆಯ ಕುಟುಂಬದವರಿಗೆ ಪರಿಹಾರ ವಿತರಿಸುವಂತೆ, ತಪ್ಪಿದಲ್ಲಿ ಜು.22ರಂದು ಗ್ರಾಪಂ ಆಡಳಿತಮಂಡಳಿ ಹಾಗೂ ಸ್ಥಳೀಯ ಗ್ರಾಮಸ್ಥರ ಜತೆಗೂಡಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿ ಪ್ರತಿಭಟನೆ ಹಿಂಪಡೆದರು.
ಪ್ರತಿಭಟನೆ ವೇಳೆ ಗ್ರಾಪಂ ಸದಸ್ಯರಾದ ಚಿಕ್ಕಕರಿಯಪ್ಪ, ಗೌರಮ್ಮ, ಸ್ಥಳೀಯ ನಿವಾಸಿಗಳಾದ ಜಯರಾಮು, ಆನಂದ, ಶಿವಮ್ಮ, ಲಕ್ಷ್ಮಮ್ಮ,ಜಯಮ್ಮ, ಮಂಗಳಮ್ಮ, ಚನ್ನಮ್ಮ, ನರಸಮ್ಮ, ಗಂಗಮ್ಮ, ಶೋಭಾ, ಸವಿತಾ, ಸುನಂದಮ್ಮ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.