ನಾಳೆ ಬೃಹತ್ ಪ್ರತಿಭಟನೆ
Team Udayavani, Jul 19, 2020, 10:05 AM IST
ಕೆ.ಆರ್.ಪೇಟೆ: ಅಂಬೇಡ್ಕರ್ ನಿವಾಸ ರಾಜಗೃಹದ ಮೇಲಿನ ದಾಳಿ ಖಂಡಿಸಿ, ಜುಲೈ 20ರಂದು ಸೋಮವಾರ ಜಿಲ್ಲಾ ಕೇಂದ್ರವಾದ ಮಂಡ್ಯ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಎಂ.ಬಿ.ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ಪ್ರತಿಭಟನೆ ಕರಪತ್ರ ಬಿಡುಗಡೆ ಮಾಡಿ ಮಾತನಾಡಿ, ಅಂಬೇಡ್ಕರ್ ನೀಡಿದ ಮೀಸಲಾತಿ ವಿರುದ್ಧ ಧ್ವನಿಯೆತ್ತಲಾರದ ಶಕ್ತಿಗಳು ದೇಶದಲ್ಲಿ ಅಂಬೇಡ್ಕರ್ ಪ್ರತಿಮೆ, ಭಾವಚಿತ್ರ, ಅಂಬೇಡ್ಕರ್ ಬರೆದ ಸಂವಿಧಾನದ ಮೇಲೆ ದಾಳಿ ಮಾಡುತ್ತಲೇ ಬರುತ್ತಿವೆ. ಇದರ ಒಂದು ಭಾಗವಾಗಿ ಮುಂಬೈನಲ್ಲಿರುವ ಅಂಬೇಡ್ಕರ್ ರಾಜಗೃಹದ ಮೇಲೆ ದಾಳಿ ನಡೆಸಿ, ಅಲ್ಲಿದ್ದ ಪುಸ್ತಕಗಳು, ಪೀಠೊಪಕರಣಗಳು ಸೇರಿದಂತೆ ಎಲ್ಲಾ ವಸ್ತುಗಳನ್ನು ನಾಶ ಮಾಡಲಾಗಿದೆ. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಅಂಬೇಡ್ಕರ್ ರಾಜಗೃಹಕ್ಕೆ ವಿಶೇಷ ಭದ್ರತೆ ನೀಡಬೇಕು ಎಂದು ಆಗ್ರಹಿಸಿ ಜುಲೈ 20ರ ಬೆಳಗ್ಗೆ 11ಗಂಟೆಗೆ ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಗುವುದು. ಎಂದು ತಿಳಿಸಿದರು.
ಸಭೆಯಲ್ಲಿ ಚಿಂತಕರಾದ ಪ್ರೊ.ಹುಲ್ಕೆರೆ ಮಹಾದೇವು, ಪ್ರೊ.ಬಿ.ಎಸ್.ಚಂದ್ರ ಶೇಖರ್, ರೈತ ಮುಖಂಡ ಎಲ್.ಬಿ.ಜಗದೀಶ್, ತಾಲೂಕು ದಲಿತ ಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಬಸ್ತಿ ರಂಗಪ್ಪ, ಸೋಮಸುಂದರ್, ರಾಜಯ್ಯ, ಹುರು ಗಲವಾಡಿ ರಾಮಯ್ಯ, ಮಾಂಬಹಳ್ಳಿ ಜಯರಾಂ, ತಾಲೂಕು ಡಿಎಸ್‌ಎಸ್ ಸಂಚಾಲಕ ನಾಟನಹಳ್ಳಿ ಸೋಮರಾಜು, ಜಿಲ್ಲಾ ಸಂಘಟನಾ ಸಂಚಾಲಕರಾದ ಸಂತೋಷ್‌ಕುಮಾರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.