ಕಾಂಗ್ರೆಸ್‌ ಪಕ್ಷದಿಂದಲೇ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ

Team Udayavani, Feb 22, 2019, 7:25 AM IST

cong-sum.jpg

ಪಾಂಡವಪುರ: ನಾನು ಕಾಂಗ್ರೆಸ್‌ ಪಕ್ಷದಲ್ಲಿ ಇದ್ದೇನೆ, ಹಾಗಾಗಿ ಕಾಂಗ್ರೆಸ್‌ ಪಕ್ಷದಿಂದಲೇ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ ಎಂದು ಸುಮಲತಾ ಅಂಬರೀಶ್‌ ಹೇಳಿದರು. ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಕೆ.ಎಸ್‌.ಪುಟ್ಟಣ್ಣಯ್ಯನವರ ಮನೆಗೆ ಭೇಟಿ ನೀಡಿ ಸುನೀತಾಪುಟ್ಟಣ್ಣಯ್ಯ ಹಾಗೂ ದರ್ಶನ್‌ಪುಟ್ಟಣ್ಣಯ್ಯರೊಂದಿಗೆ ಚೆರ್ಚಿಸಿ ನಂತರ ಮಾತನಾಡಿ, ನಮಗೆ ರಾಜಕೀಯದಲ್ಲಿ ಅಷ್ಟೊಂದು ಆಸಕ್ತಿ ಇರಲಿಲ್ಲ.

ಆದರೆ, ಮಂಡ್ಯ ಜಿಲ್ಲೆಯ ಜನರು, ಅಂಬರೀಶ್‌ ಅಭಿಮಾನಿಗಳು ನೀವು ರಾಜಕೀಯಕ್ಕೆ ಬರಬೇಕು. ಲೋಕಸಭಾ ಚುನಾವಣೆಯಲ್ಲಿ ಸ್ವರ್ಧೆಮಾಡಬೇಕು ಎಂದು ಒತ್ತಡ ತಂದ ಹಿನ್ನೆಲೆಯಲ್ಲಿ ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದಾಗಿದ್ದೇನೆ ಎಂದರು.

ಅಂಬರೀಶ್‌ ಕಾಂಗ್ರೆಸ್‌ ಪಕ್ಷದಲ್ಲಿಯೇ ಇದ್ದು ರಾಜಕೀಯ ಮಾಡಿದ್ದಾರೆ. ಹಾಗಾಗಿ ನಾವು ಸಹ ಕಾಂಗ್ರೆಸ್‌ ಪಕ್ಷದಿಂದಲೇ ಸ್ಪರ್ಧೆ ಮಾಡೋದಕ್ಕೆ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ. ಸಿದ್ದರಾಮಯ್ಯರನ್ನು ಭೇಟಿ ನೀಡಿ ಚರ್ಚೆ ನಡೆಸಿದ್ದೇನೆ ಅವರು ಕಾಂಗ್ರೆಸ್‌ ಪಕ್ಷದ ಹೈಕಮಾಂಡ್‌ನೊಂದಿಗೆ ಚೆರ್ಚಿಸಿ ತಿಳಿಸುವುದಾಗಿ ಹೇಳಿದ್ದಾರೆ. ಅವರು ಸಹ ಕಡಾಖಂಡಿತವಾಗಿ ಟಿಕೆಟ್‌ ಕೋಡೋದಿಲ್ಲ ಎಂದು ಹೇಳಿಲ್ಲ ಎಂದು ತಿಳಿಸಿದರು.

ಕಾಂಗ್ರೆಸ್‌ ಪಕ್ಷದ ತೀರ್ಮಾನಕ್ಕಾಗಿ ನಾನು ಕಾಯುತ್ತೇನೆ.  ಪಕ್ಷ ನನಗೆ ಟಿಕೆಟ್‌ ನೀಡಿದರೆ ಕಾಂಗ್ರೆಸ್‌ನಿಂದಲೇ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ದರೆ ಅಂತಿಮ ತೀರ್ಮಾನವನ್ನು  ಜನರಿಗೆ ಬಿಡುತ್ತೇನೆ. ಜಿಲ್ಲೆಯ ಜನರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ಅದೇ ನನ್ನ ಅಂತಿಮ ತೀರ್ಮಾನ ಜನತೆ ಪಕ್ಷೇತರವಾಗಿ ಸ್ಪರ್ಧಿಸಿ ಎಂದರೆ ಪಕ್ಷೇತರವಾಗಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಹೇಳುವ ಮೂಲಕ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ ಎನ್ನುವುದನ್ನು ಸ್ಪಷ್ಟಪಡಿಸಿದರು.

ಜಿಲ್ಲೆಯ ಜನತೆ ಅಂಬರೀಶ್‌ ಅವರನ್ನು ಮೂರು ಬಾರಿ ಸಂಸದರಾಗಿ, ಒಮ್ಮೆ ಹೆಚ್ಚು ಮತಗಳ ಅಂತರದೊಂದಿಗೆ ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದಾರೆ. ಜಿಲ್ಲೆಯ ಜನರ ಋಣ ಸಾಕಷ್ಟು ನಮ್ಮ ಕುಟುಂಜದ ಮೇಲಿದೆ, ನಾನು ಆ ಋಣ ತೀರಿಸಬೇಕಿದೆ ಹಾಗಾಗಿ ನಾನು ಸ್ಪರ್ಧೆ ಮಾಡುವುದಾದರೆ ಅದು ಮಂಡ್ಯದಿಂದಲೇ ಎಂದು ತೀರ್ಮಾನಿಸಿದ್ದೇನೆ ಎಂದು ತಿಳಿಸಿದರು.

ಸುನೀತಾ ಪುಟ್ಟಣ್ಣಯ್ಯ ಮಾತನಾಡಿ, ಲೋಕಸಭೆ ಚುನಾವಣೆಗೆ ಅಭ್ಯರ್ಥಿ ಕಣಕ್ಕಿಳಿಸುವ ಸಂಬಂಧ ಫೆ.26ರಂದು ರೈತಸಂಘ ಮುಖಂಡರ ಸಭೆ ಇದೆ. ಸಭೆಯಲ್ಲಿ ಚೆರ್ಚಿಸಿ ತೀರ್ಮಾನ  ತೆಗೆದುಕೊಳ್ಳುತ್ತೇವೆ. ಬೇರೆ ಪಕ್ಷದವರು ಯಾರನ್ನು ಅಭ್ಯರ್ಥಿಯನ್ನಾಗಿ ಮಾಡುತ್ತಾರೋ ನೋಡೋಣ ಆ ನಂತರ ನಾವು ಬೆಂಬಲ ಕೊಡೋದೋ ಬೇಡವೋ ತೀರ್ಮಾನಿಸುತ್ತೇವೆ ಎಂದರು.

ಇದಕ್ಕೂ ಮುನ್ನ ಸುಮಲತಾ ಹಾಗೂ ಪುತ್ರ ಅಭಿಷೇಕ್‌ ದಿ.ಕೆ.ಎಸ್‌.ಪುಟ್ಟಣ್ಣಯ್ಯ ಅವರ ಸಮಾಧಿ ಬಳಿ ತೆರಳಿ ಪುಷ್ಪಾರ್ಚನೆ ಸಲ್ಲಿಸಿದರು. ಕೆಪಿಸಿಸಿ ಸದಸ್ಯರಾದ ಎಲ್‌.ಡಿ.ರವಿ  ಸಚ್ಚಿದಾನಂದ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಕೃಷ್ಣೇಗೌಡ, ಮಾಜಿ ಅಧ್ಯಕ್ಷ ಎಲ್‌.ಸಿ.ಮಂಜುನಾಥ್‌, ಮಹಿಳಾ ಘಟಕದ ಅಧ್ಯಕ್ಷೆ ಜಿ.ಕೆ.ಕೋಮಲಚನ್ನಪ್ಪ,

ಕಿಸಾನ್‌ ಘಟಕದ ಅಧ್ಯಕ್ಷ ಸಿ.ಆರ್‌.ರಮೇಶ್‌, ಕಾಂಗ್ರೆಸ್‌ ಅಹಿಂದ ಘಟಕದ ಅಧ್ಯಕ್ಷ ಶ್ರೀನಿವಾಸ್‌, ಯುವ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರ್‌, ಅಂಬರೀಶ್‌ ಅಭಿಮಾನಿ ಬಳಗದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್‌, ಮುಖಂಡರಾದ ದೇವೇಗೌಡ, ಹಾರೋಹಳ್ಳಿ ನಂಜುಂಡೇಗೌಡ, ಕೆ.ಕುಬೇರ, ಬಿ.ಕೆ.ರೇವಣ್ಣ, ಬಿ.ಜೆ.ಸ್ವಾಮಿ ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Boxing legend Mike Tyson hints at retirement

Mike Tyson: ವಿದಾಯದ ಸುಳಿವು ನೀಡಿದ ಬಾಕ್ಸಿಂಗ್‌ ದಿಗ್ಗಜ ಮೈಕ್‌ ಟೈಸನ್

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ರೋಗಿಯ ಕಣ್ಣೇ ಮಾಯಾ… ಇಲಿ ತಿಂದಿದೆ ಎಂದ ವೈದ್ಯರು

Tilak Varma broke Virat Kohli’s T20I record

Team India: ವಿರಾಟ್‌ ಕೊಹ್ಲಿ ದಾಖಲೆ ಮುರಿದ ತಿಲಕ್‌ ವರ್ಮಾ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.