ಕ್ಷೇತ್ರದ ಅಭಿವೃದ್ಧಿಯಾದರೆ ಸಂತೋಷ ಪಡೆಬೇಕು


Team Udayavani, Feb 23, 2019, 7:28 AM IST

ksetra.jpg

ಕೆ.ಆರ್‌.ಪೇಟೆ: ತಾಲೂಕಿನ ಒಬ್ಬ ಸಾಮಾನ್ಯ ವ್ಯಕ್ತಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಅನುದಾನ ಬಿಡುಗಡೆ ಮಾಡಿಸಿಕೊಂಡು ತಾಲೂಕನ್ನು ಅಭಿವೃದ್ಧಿ ಪಡಿಸಿದರೆ, ಆ ಕ್ಷೇತ್ರದ ಶಾಸಕ ಸಂತೋಷ ಪಡಬೇಕೆ ಹೊರತು ಅಸೂಯೆ ಪಡಬಾರದು ಎಂದು ದೇವೆಗೌಡರ ಮಾನಸ ಪುತ್ರ ಎಂದೆ ಕರೆಯಲ್ಪಡುವ ಜಿಪಂ ಸದಸ್ಯ ಬಿ.ಎಲ್‌.ದೇವರಾಜು ಅಸಮಾಧಾನ ವ್ಯಕ್ತಪಡಿಸಿದರು. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಪತ್ರ ಬರೆದು ಶ್ರಮವಹಿಸಿ ಅನುದಾನ ಬಿಡುಗಡೆ ಮಾಡಿಸಿರುವ ಕುರಿತು ದಾಖಲೆ ಬಿಡುಗಡೆ ಮಾಡಿ, ಶಾಸಕ ನಾರಾಯಣಗೌಡರು, ದೇವರಾಜು ಬೆಂಬಲಿಗರು ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿ ಪರವಾಗಿ ಕೆಲಸ ಮಾಡಲಿಲ್ಲ ಎಂದು ಹೇಳುತ್ತಿರುವುದಕ್ಕೆ ಹಾಗೂ ಅಕ್ಕಿಹೆಬ್ಟಾಳು ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರ 5 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದರ ವಿರುದ್ಧ ಶಾಸಕರ ಅಸಮಧಾನಕ್ಕೆ ಪ್ರತಿಕ್ರಿಯಿಸಿದರು. 

ತ್ರಿವೇಣ ಸಂಗಮದಲ್ಲಿ ಕುಂಭಮೇಳ ನಡೆಸುವ ಸಲುವಾಗಿ ರಸ್ತೆ ಸೇರಿದಂತೆ ಇತರೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ನಾನು ಸಚಿವ ಎಚ್‌.ಡಿ.ರೇವಣ್ಣ ಅವರಿಗೆ ಮನವಿ ಸಲ್ಲಿಸಿದ್ದೆ. ಅದರಂತೆ ಸಚಿವರು ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅವಶ್ಯವಿರುವೆಡೆ ಅಭಿವೃದ್ಧಿಗಾಗಿ 5 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ.

ನಾರಾಯಣಗೌಡರು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟು ಅನುದಾನ ಬಿಡುಗಡೆ ಮಾಡಿಸಿಕೊಂಡು ತಾಲೂಕು ಅಭಿವೃದ್ಧಿಪಡಿಸಲಿ. ಅದನ್ನು ಬಿಟ್ಟು ತಾಲೂಕಿನ ಅಭಿವೃದ್ಧಿಗೆ ದುಡಿಯುತ್ತಿರುವವರ ವಿರುದ್ಧ ಮಾತನಾಡಬಾರದು ಎಂದು ತಿಳಿಸಿದರು. ಗೋಷ್ಠಿಯಲ್ಲಿ ಜೆಡಿಎಸ್‌ ಮುಖಂಡ ಬಸ್‌ಕೃಷ್ಣೇಗೌಡ, ಜಿಪಂ ಸದಸ್ಯ ರಾಮದಾಸು, ವಕೀಲ ಸುರೇಶ್‌, ಕಂಠಿಕುಮಾರ್‌, ಹರೀಶ್‌ ಮತ್ತಿರರಿದ್ದರು.

ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ದಿಸಲು ಪಂಥಾಹ್ವಾನ: ಬಿ.ಎಲ್‌.ದೇವರಾಜ್‌ಗೆ ಹತ್ತು ವೋಟು ಪಡೆಯುವ ಸಾಮರ್ಥ್ಯ ಇಲ್ಲ ಎಂದಿರುವ ಶಾಸಕ ನಾರಾಯಣಗೌಡರು ಮೊದಲು ಅವರ ಸಾಮರ್ಥ್ಯ ಅರಿತುಕೊಳ್ಳಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಾಸಕರ ಹುಟ್ಟೂರಿನಲ್ಲೇ ಹಿನ್ನಡೆಯಾಗಿ, ನನ್ನ ಗ್ರಾಮದಲ್ಲಿ ಅತ್ಯಧಿಕ ಮತ ಪಡೆದುಕೊಂಡಿದ್ದರು. ಆ ಸತ್ಯ ಅರಿತು ಮಾತನಾಡಬೇಕು.

ಒಂದು ವೇಳೆ ನಾನು ಪಕ್ಷದ ವಿರುದ್ಧ ಕೆಲಸ ಮಾಡಿದ್ದರೆ ಪಕ್ಷದ ವರಿಷ್ಠರಿಗೆ ಸಾಕ್ಷ್ಯ ಸಹಿತ ವರದಿ ನೀಡಿ ನನ್ನ ಮೇಲೆ ಕ್ರಮ ಜರುಗಿಸಬೇಕು. ರಸ್ತೆಯಲ್ಲಿ ಮಾತನಾಡುವುದರಿಂದ ಪ್ರಯೋಜನವಿಲ್ಲ ದೇವರಾಜು ಹೇಳಿದರು. 40 ವರ್ಷದ ರಾಜಕೀಯ ಜೀವನದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಶಾಸಕ ನಾರಾಯಣಗೌಡರಿಗೆ ಅವರ ಮೇಲೆ ನಂಬಿಕೆ ಇದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ವರ್ಧಿಸಲಿ. ನಾನು ಅವರ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಪಂಥಾಹ್ವಾನ ನೀಡಿದರು.

ಟಾಪ್ ನ್ಯೂಸ್

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.