Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
Team Udayavani, Mar 25, 2024, 9:56 PM IST
ಮಂಡ್ಯ: ಕಾಂಗ್ರೆಸ್ ಅಭ್ಯರ್ಥಿಗೆ ಸಂಸದೆ ಸುಮಲತಾ ಬೆಂಬಲ ಕೊಡುತ್ತೇನೆ ಎಂದರೆ ನಾವು ಬೇಡ ಎನ್ನುವುದಿಲ್ಲ. ಸುಮಲತಾ ಜತೆ ರಾಜಕೀಯವಾಗಿ ನಾವು ಮಾತನಾಡಿಲ್ಲ. ಅವರ ನಿಲುವುಗಳ ಬಗ್ಗೆ ನಾನು ಯಾವತ್ತೂ ಪ್ರಶ್ನೆ ಮಾಡಿಲ್ಲ. ಅವರು ನಮಗೆ ಬೆಂಬಲ ಕೊಡುತ್ತೇನೆ ಅಂದರೆ ಕೊಡಲಿ. ನಾವು ಸ್ವಾಗತಿಸುತ್ತೇವೆ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡರ ಮಗ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ನಾಯಕ. ಎಚ್.ಡಿ.ಕುಮಾರಸ್ವಾಮಿ ಮಧುಗಿರಿಗೆ ಹೋದಾಗ ಇದು ನನ್ನ ಕರ್ಮಭೂಮಿ ಅಂತಾರೆ. ಅದೇ ರೀತಿ ರಾಮನಗರ, ಚನ್ನಪಟ್ಟಣವನ್ನು ಕರ್ಮಭೂಮಿ ಎನ್ನುತ್ತಾರೆ. ನಮ್ಮ ಜಿಲ್ಲೆಯ ಇತಿಹಾಸದಲ್ಲಿ ಹೊರ ಜಿಲ್ಲೆಯವರಿಗೆ ಭಾವನಾತ್ಮಕವಾಗಿ ಅವಕಾಶ ನೀಡಿಲ್ಲ. ಕುಮಾರಸ್ವಾಮಿ ರಾಮನಗರವನ್ನು ಪೂರ್ತಿ ತಿರಸ್ಕರಿಸುತ್ತಾರೋ ಅಥವಾ ಅರ್ಧಕ್ಕೆ ಬಿಟ್ಟು ಇಲ್ಲಿಗೆ ಬರುತ್ತಾರೋ ಗೊತ್ತಿಲ್ಲ. ಅಥವಾ ಕೊನೆ ಘಳಿಗೆಯಲ್ಲಿ ಬೇರೆ ಯಾರನ್ನಾದರೂ ನಿಲ್ಲಿಸುತ್ತಾರೋ ಗೊತ್ತಿಲ್ಲ ಎಂದರು.
ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ ಶೀಘ್ರ ಕಾಂಗ್ರೆಸ್‌ಗೆ: ಚಲುವರಾಯಸ್ವಾಮಿ
ಮಂಡ್ಯ: ಮಾಜಿ ಸಚಿವ ಕೆ.ಸಿ.ನಾರಾಯಣ ಗೌಡ ನಮ್ಮ ಸಂಪರ್ಕದಲ್ಲಿದ್ದು, ಶೀಘ್ರದಲ್ಲಿ ಕೆ.ಆರ್.ಪೇಟೆ ಭಾಗದ ಮುಖಂಡರೊಂದಿಗೆ ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ತಿಳಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾರಾಯಣ ಗೌಡರು ಕಾಂಗ್ರೆಸ್ ಸೇರುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಯಾವುದೇ ಷರತ್ತುಗಳಿಲ್ಲದೆ ಅವರು ಶೀಘ್ರ ಕಾಂಗ್ರೆಸ್ ಸೇರಲಿದ್ದಾರೆ. ಪಕ್ಷ ಸೇರ್ಪಡೆಯಾದ ಬಳಿಕ ಅವರನ್ನು ಗೌರವಯುತವಾಗಿ ನಡೆಸಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್.ಎಸ್.ಬಲ್ಲಾಳ್
Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್ ಸಿ. ಡಿ’ಸೋಜಾ ಇನ್ನಿಲ್ಲ
Brahmavara: ಲಾಕ್‌ಅಪ್ ಡೆತ್ ಪ್ರಕರಣ: ಮರಣೋತ್ತರ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.