ಆಹಾರ ಸಿಗದೇ ಚಿರತೆ ಸಾವು
Team Udayavani, May 1, 2022, 3:11 PM IST
ಕೆ.ಆರ್.ಪೇಟೆ: ಆಹಾರ ಸಿಗದೇ ಹಸಿವಿನಿಂದ ನರಳಿ ಚಿರತೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿ ಚಿಕ್ಕಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿಕ್ಕಸೋಮನಹಳ್ಳಿ ಗ್ರಾಮದ ಸರ್ವೆ ನಂ. 39ರಲ್ಲಿ ಚಿರತೆ ಶವ ಬೇಲಿಯೊಳಗೆ ಪತ್ತೆಯಾಗಿತ್ತು. ಸಾರ್ವಜನಿಕರು ಈ ವಿಷಯವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸಿದ ಹಿನ್ನೆಲೆ ಘಟನಾ ಸ್ಥಳಕ್ಕೆ ತಾಲೂಕಿನ ವಲಯ ಅರಣ್ಯಾಧಿಕಾರಿ ಗಂಗಾಧರ್, ನಾಗಮಂಗಲ ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಂಕರೇಗೌಡ, ಉಪವಲಯಾರಣ್ಯಾಧಿಕಾರಿ ಭರತ್, ಅರಣ್ಯ ರಕ್ಷಕ ಶಿವಮೂರ್ತಿ, ಮಹೇಶ್, ಮಂಜು, ಪಶು ವೈದ್ಯಾಧಿಕಾರಿ ರವಿಕುಮಾರ್ ಸೇರಿದಂತೆ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಲ್ಲದೇ, ಚಿರತೆ ಯಾವ ಕಾರಣಕ್ಕಾಗಿ ಸಾವನ್ನಪ್ಪಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ನಿಯಮಾನುಸಾರ ವಿಧಿ ವಿಧಾನ ನಡೆಸಿ ನಂತರ ಚಿರತೆಯ ಕಳೆಬರವನ್ನು ಸಾರ್ವಜನಿಕರ ಸಮಕ್ಷಮದಲ್ಲಿ ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಿದರು.
ಇತ್ತಿಚೆಗೆ ತಾಲ್ಲೂಕಿನಾದ್ಯಂತ ಕಬ್ಬು ಕಟಾವು ಮಾಡಲಾಗಿದ್ದು ಚಿರತೆಗಳು ವಾಸಿಸಲು ಕಷ್ಟವಾಗಿದೆ ಹಾಗೂ ಆಹಾರ ಹುಡುಕಾಟ ಒಂದು ದೊಡ್ಡ ಸವಾಲಿನ ಕೆಲಸವಾಗಿದೆ. ಇದರಿಂದಾಗಿ ಚಿರತೆಗಳು ಪದೇ ಪದೇ ಆಹಾರಕ್ಕಾಗಿ ಕಾಡಿನಂಚಿನ ಗ್ರಾಮಗಳಿಗೆ ಭೇಟಿ ನೀಡಿ ಹಸು, ಕರು, ನಾಯಿ, ಕುರಿ, ಮೇಕೆ ಮುಂತಾದವುಗಳನ್ನು ಬೇಟೆಯಾಡುವುದು ಸಹಜವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.