ಟ್ಯೂಷನ್‌ಗೆ ಹೋಗಿದ್ದಾಕೆ ನಿರ್ಮಾಣ ಹಂತದ ಸಂಪ್‌ನಲ್ಲಿ ಪತ್ತೆ
Team Udayavani, Oct 12, 2022, 3:19 PM IST
ಮಳವಳ್ಳಿ: ಪಟ್ಟಣದ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗದ ನಿರ್ಮಾಣ ಹಂತದ ಮನೆ ಕಟ್ಟಡದ ನೀರಿನ ಸಂಪ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಬಾಲಕಿ ಶವ ಪತ್ತೆಯಾಗಿದೆ.
ಪಟ್ಟಣದ ಎನ್‌ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ಎಂಬವರ ದಂಪತಿ ಪುತ್ರಿ ದಿವ್ಯಾ(10) ಶವವಾಗಿ ಪತ್ತೆಯಾಗಿರುವ ಬಾಲಕಿ. ಬೆಳಗ್ಗೆ 11 ಗಂಟೆಗೆ ಟ್ಯೂಷನ್‌ಗೆ ಎಂದು ಮನೆಯಿಂದ ಹೋದ ಬಾಲಕಿ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದಾಗ ಬಾಲಕಿ ಪತ್ತೆಯಾಗಿಲ್ಲ.
ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬವರ ನಿರ್ಮಾಣ ಹಂತದ ಮನೆ ಕಟ್ಟಡದ ಸಮೀಪದಲ್ಲಿದ್ದ ಯಾರೋ ನೀಡಿದ ಮಾಹಿತಿ ಮೇರೆಗೆ ನೀರಿನ ಸಂಪ್‌ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿ ಶವ ಪತ್ತೆಯಾಗಿದೆ.
ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದು, ಸ್ಥಳಕ್ಕೆ ಡಿವೈಎಸ್ ಪಿ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಳದೊಂದಿಗೆಪರಿಶೀಲನೆ ನಡೆಸಿದರು. ಈ ಸಂಬಂಧ ಪಟ್ಟಣದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.