ಚೂರಿಯಿಂದ ಇರಿದು, ಆ್ಯಸಿಡ್ ಎರಚಿ ಬರ್ಬರ ಹತ್ಯೆ: ಹಳೆಯ ದ್ವೇಷದ ಶಂಕೆ
Team Udayavani, Oct 7, 2021, 2:25 PM IST
ಮಳವಳ್ಳಿ: ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯನ್ನು ಅಡ್ಡಿಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಆಸಿಡ್ ಎರಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪಟ್ಟಣದಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಆಟೋ ಚಾಲಕ ಶ್ರೀನಿವಾಸ ಅಲಿಯಾಸ್ ಚೈನಶ್ರೀನ(40) ಕೊಲೆಯಾದ ವ್ಯಕ್ತಿ. ಪಟ್ಟಣದ ಗಂಗಾಮತ ಬೀದಿಯ ಸುಣ್ಣದಕೇರಿಯ ಬಳಿ ತಮ್ಮ ದ್ವಿಚಕ್ರ ವಾಹನದಲ್ಲಿ ಶ್ರೀನಿವಾಸ ಹೋಗುತ್ತಿದ್ದ ಸಂದರ್ಭದಲ್ಲಿ ಅಡ್ಡಿಗಟ್ಟಿದ ದುಷ್ಕರ್ಮಿಗಳು ಖಾರದಪುಡಿ ಎರಚಿ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಆಸಿಡ್ ಎರಚಿ ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಸಾಧ್ಯತೆ ಇದ್ದು, ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದ್ದು, ಸದ್ಯದಲ್ಲಿಯೇ ಆರೋಪಗಳನ್ನು ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬಿಎಸ್ ವೈ ಆಪ್ತನ ನಿವಾಸದ ಮೇಲಿನ ಐಟಿ ದಾಳಿ ಬಗ್ಗೆ ರಾಜಕೀಯ ಬಣ್ಣ ಸರಿಯಲ್ಲ: ಸಚಿವ ಸೋಮಣ್ಣ
ಘಟನಾ ಸ್ಥಳಕ್ಕೆ ಡಿವೈಎಸ್ಪಿ ಎಚ್.ಲಕ್ಷ್ಮೀನಾರಾಯಣ ಪ್ರಸಾದ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಪಟ್ಟಣದ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.