ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಖಂಡನೆ
Team Udayavani, Nov 11, 2020, 4:55 PM IST
ಮಂಡ್ಯ: ಗೋದಾಮುಗಳಲ್ಲಿ ಕೊಳೆಯುತ್ತಿರುವ ಆಹಾರ ಧಾನ್ಯಗಳ ರಕ್ಷಣೆಗೆ ಸೂಕ್ತ ಕ್ರಮ, ಬಿಸಿಯೂಟ ಫಲಾನುಭವಿಗಳಿಗೆ ಸಮರ್ಪಕ ಧಾನ್ಯ ವಿತರಣೆ ಹಾಗೂ ಅಗತ್ಯ ವಸ್ತುಗಳಬೆಲೆ ಏರಿಕೆ ಖಂಡಿಸಿ ಅಖೀಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಅಗತ್ಯವಸ್ತುಗಳಾದ ಈರುಳ್ಳಿ, ಬೆಳ್ಳುಳ್ಳಿ, ಟೊಮೆಟೋ, ಗ್ಯಾಸ್ ಸಿಲಿಂಡರ್ ಸೇರಿ ವಿವಿಧ ವಸ್ತುಗಳನ್ನಿಟ್ಟು ವಿನೂತನವಾಗಿ ಪ್ರತಿಭಟನೆ ನಡೆಸಿದರು. ಅಲ್ಲದೇ,ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಆಗಿರುವುದರಿಂದ ಹಿಂದೆ ಸೌದೆ ಒಲೆಯಲ್ಲಿ ಆಹಾರ ತಯಾರಿಸುವ ಸ್ಥಿತಿಗೆ ಕೇಂದ್ರ ಸರ್ಕಾರ ಬಡವರ ಮೇಲೆ ಪ್ರಹಾರ ನಡೆಸಲು ಮುಂದಾಗಿದೆ ಎಂದು ಒಲೆ ಹಚ್ಚಿ ಅಡುಗೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.
ಕ್ರಮ ಕೈಗೊಳ್ಳಿ: ಕೋವಿಡ್ ದಿಂದ ಲಾಕ್‌ಡೌನ್‌ಸಂದರ್ಭದಲ್ಲಿ ಸಾಕಷ್ಟು ಮಂದಿ ಉದ್ಯೋಗಕಳೆದು ಕೊಂಡರು. ಆರ್ಥಿಕವಾಗಿ ಸಂಕಷ್ಟ ಎದುರಾಯಿತು. ಅಲ್ಲದೆ, ಶಾಲಾ, ಅಂಗನವಾಡಿ ಕೇಂದ್ರಗಳನ್ನು ತೆರೆಯದ ಪರಿಣಾಮ ಮಕ್ಕಳು ಬಿಸಿಯೂಟದಿಂದ ವಂಚಿತವಾದವು. ಇದು ಸರ್ಕಾರಕ್ಕೆ ಗೊತ್ತಿದ್ದರೂ ಆಹಾರ ಧಾನ್ಯಗಳನ್ನು ಮನೆ ಪೂರೈಸದೆ ನಿಲ್ಲಿಸಿದೆ. ಇದರಿಂದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಗೋದಾಮುಗಳಲ್ಲಿ ಅಪಾರ ಪ್ರಮಾಣದ ಆಹಾರ ಧಾನ್ಯ ಕೊಳೆತುನಾರುತ್ತಿದೆ. ಹೀಗಾಗಿ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮಾನವೀಯತೆ ಇಲ್ಲ: 43258 ಟನ್ ಅಕ್ಕಿ, 1716ಟನ್ ಗೋಧಿ, 12,046 ಟನ್ ತೊಗರಿಬೇಳೆ, ಖಾದ್ಯ ತೈಲ ಮನುಷ್ಯರ ಬಳಕೆಗೆ ಯೋಗ್ಯವಲ್ಲದ ಸ್ಥಿತಿ ತಲುಪಿವೆ. ಇದು ಮಾನವ ನಿರ್ಮಿತ ದುರಂತ. ಗೋದಾಮುಗಳಲ್ಲಿ ಆಹಾರಧಾನ್ಯ ಸಂಗ್ರಹ ವಿದ್ದೂ ವಿತರಿಸದಂತೆ ತಡೆ ಹಿಡಿದ ಆರ್ಥಿಕ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಉಪಯೋಗಕ್ಕೆ ಬಳಸಬಹುದಾದ ಧಾನ್ಯಗಳನ್ನು ಅಗತ್ಯವಿರುವವರಿಗೆ ಹೆಚ್ಚುವರಿ ವಿತರಿಸಬೇಕು ಎಂದು ಒತ್ತಾಯಿಸಿದರು.
ಸುಗ್ರಿವಾಜ್ಞೆ ಹಿಂಪಡೆಯಿರಿ: ತಕ್ಷಣವೇ ಕೇರಳ ಮಾದರಿಯಲ್ಲಿ ಮಧ್ಯಾಹ್ನದ ಬಿಸಿಯೂಟದ ಎಲ್ಲಾ ಫಲಾನುಭವಿಗಳಿಗೂ ತಾರತಮ್ಯವಿಲ್ಲದೆ ಹಂಚ ಬೇಕು. ಘೋಷಣೆಗೆ ಮತ್ತು ಪ್ರಚಾರಕ್ಕೆ ಕೆಲವೆಡೆ ಹಂಚಿಬಿಟ್ಟ ಹಿಂದಿನ ಅನುಭವ ಮರುಕಳಿಸದಂತೆ ಎಚ್ಚರ ವಹಿಸಬೇಕು. ವಿದ್ಯುತ್‌ದರ, ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಬೇಕು. ಕೃಷಿ ಸುಗ್ರಿವಾಜ್ಞೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಅಖೀಲ ಭಾರತ ಜನವಾದಿ ಸಂಘಟನೆರಾಜ್ಯಾಧ್ಯಕ್ಷೆ ದೇವಿ, ಜಿಲ್ಲಾಧ್ಯಕ್ಷೆ ಶೋಭಾ, ಮಂಜುಳಾ, ಸುಶೀಲಾ, ಡಿ.ಕೆ.ಲತಾ, ಪ್ರೇಮಾ, ಜಯಶೀಲಾ, ಸುಮಿತ್ರಾ ಮತ್ತಿತರರಿದ್ದರು.
ಶಾಲೆ, ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿದ್ದರಿಂದ ಮಕ್ಕಳು ಬಿಸಿಯೂಟದಿಂದ ವಂಚಿತರಾಗಿವೆ. ಇತ್ತ ಆಹಾರ ಧಾನ್ಯ ಗೋದಾಮುಗಳಲ್ಲಿ ಹುಳು ಹಿಡಿಯುತ್ತಿವೆ.ಕೂಡಲೇ ಸರ್ಕಾರ ಎಚ್ಚೆತ್ತು ಬಿಸಿಯೂಟಯೋಜನೆ ಫಲಾನುಭವಿಗಳಿಗೆ ಆಹಾರವಿತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು. – ದೇವಿ, ರಾಜ್ಯಾಧ್ಯಕ್ಷೆ, ಅಖೀಲ ಭಾರತ ಜನವಾದಿ ಸಂಘಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
MUST WATCH
ಹೊಸ ಸೇರ್ಪಡೆ
Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್ ಶುರು?
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.