ಮೈಷುಗರ್ ಆರಂಭಕ್ಕೆ ಪ್ರಭಾವಿಗಳ ಅಡ್ಡಿ
Team Udayavani, May 31, 2020, 4:43 AM IST
ನಾಗಮಂಗಲ: ಕೆಲ ರಾಜಕೀಯ ಪ್ರಭಾವಿಗಳಿಂದ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗದಂತೆ ಸಂಚು ನಡೆಯುತ್ತಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಆರೋಪಿಸಿದರು.
ಪಟ್ಟಣದಲ್ಲಿ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಪೂರ್ವಭಾವಿ ಸಭೆ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಮೈಷುಗರ್ ಮತ್ತು ಪಿಎಸ್ ಎಸ್‌ಕೆ ಸಕ್ಕರೆ ಕಾರ್ಖಾನೆಗಳು ಜಿಲ್ಲೆಯ ರೈತರ ಜೀವನಾಡಿಯಾಗಿವೆ. ಆದರೆ, ಕೆಲ ಪ್ರಭಾವಿಗಳ ಒಳಸಂಚಿನಿಂದಾಗಿ ಎರಡೂ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುವುದಕ್ಕೆ ವಿಳಂಬವಾಗುತ್ತಿದೆ ಎಂದು ಹೇಳಿದರು.
ರೈತರಿಗೆ ಅನುಕೂಲವಾಗಲಿ: ಜನಪ್ರತಿನಿಧಿಗಳು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಗಳ ಆರಂಭಕ್ಕೆ ಪ್ರೋತ್ಸಾಹಿಸಬೇಕೆ ಹೊರತು ಅದನ್ನು ತಡೆಯುವ ಕೆಲಸ ಮಾಡಬಾರದು. ಅದು ಅವರಿಗೆ ಶೋಭೆ ತರುವುದಿಲ್ಲ. ಯಾರೆ ಕಾರ್ಖಾನೆ ಪ್ರಾರಂಭಿ ಸಲಿ ಅದು ರೈತರಿಗೆ ಅನುಕೂಲವಾದರೆ ಸಂತೋಷ ಪಡಬೇಕು ಎಂದು ಪರೋಕ್ಷವಾಗಿ ಜೆಡಿಎಸ್ ನಾಯಕರ ಕಾಲೆಳೆದರು.
ಜನಪ್ರತಿನಿಧಿಗಳು ಕೇವಲ ಐದು ವರ್ಷ ಮಾತ್ರ ಅಧಿಕಾರದಲ್ಲಿರುತ್ತಾರೆ. ಈ ಅವಧಿಯಲ್ಲಿ ರೈತರಿಗೆ ಹಾಗೂ ಮತ ನೀಡಿದ ಜನ ರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಳ್ಳೆಯ ಕೆಲಸ ಮಾಡಬೇಕು. ವೈಯಕ್ತಿಕ ಹಿತದೃಷ್ಟಿಯಿಂದ ಜನಜೀವನದ ಜೊತೆ ಚೆಲ್ಲಾಟವಾಡ ಬಾರದು ಎಂದು ಟೀಕಿಸಿದರು.
ಜೂ.7ಕ್ಕೆ ಡಿಕೆಶಿ ಪದಗ್ರಹಣ: ಪ್ರದೇಶ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆ ಯಾಗಿ ರುವ ಮಾಜಿ ಸಚಿವ ಡಿ.ಕೆ.ಶಿವ ಕುಮಾರ್ ಪದಗ್ರಹಣ ಜೂ.7ರಂದು ಬೆಂಗಳೂರಿ ನಲ್ಲಿ ನಡೆಯಲಿದೆ. ಕೊರೊನಾ ಸೋಂಕಿನ ನಿಯಂತ್ರಣಾ ದೃಷ್ಟಿಯಿಂದ ಅದೂರಿ ಸಮಾರಂಭ ಆಯೋಜಿಸಲು ಸಾಧ್ಯವಾಗುತ್ತಿ ಲ್ಲ. ಬೆಂಗಳೂರಿನ ಕೆಪಿಸಿಸಿ ಕಚೇರಿ ಯಲ್ಲಿ ಸರಳ ಸಮಾರಂಭ ಆಯೋಜಿಸಲಾಗಿದೆ.
ಈ ಸಮಾರಂಭದ ದೃಶ್ಯಗಳನ್ನು ಗ್ರಾಪಂ ಮಟ್ಟದಲ್ಲಿ ಎಲ್‌ಇಡಿ ಪರದೆಗಳ ಮೂಲಕ ನೇರ ಪ್ರಸಾರ ಮಾಡಿಸಲಾಗು ವುದು. ಪಕ್ಷದ ಕಾರ್ಯಕರ್ತರು, ಡಿಕೆಶಿ ಅಭಿ ಮಾನಿಗಳು ಸಾಮಾಜಿಕ ಅಂತರ ಕಾಯ್ದು ಕೊಂಡು ಸಮಾರಂಭವನ್ನು ವೀಕ್ಷಿಸಬೇಕೆಂದು ಮನವಿ ಮಾಡಿದರು. ಕೆಪಿಸಿಸಿ ಪ್ರಧಾನ ಕಾರ್ಯìದರ್ಶಿ ಸಂಪಂಗಿ, ಕೆಪಿಸಿಸಿ ವೀಕ್ಷಕ ಜಯರಾಮ್, ವಿಜಯಕುಮಾರ್‌ಸಿಂಹ, ಜಿಲ್ಲಾ ಕಾಂಗ್ರೆಸ್ ವೀಕ್ಷಕಿ ರಶ್ಮಿ, ಜಿಲ್ಲಾಧ್ಯಕ್ಷ ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ, ಕೃಷ್ಣೇಗೌಡ, ರಾಜೇಶ್ ಹಾಜರಿದ್ದರು.
ಮನವಿಗೆ ಸ್ಪಂದಿಸಿರುವ ಸಿಎಂ: ನಾನು ಪ್ರಸ್ತುತ ಚುನಾಯಿತ ಪ್ರತಿನಿಧಿ ಯಲ್ಲದಿದ್ದರೂ ಜಿಲ್ಲೆಯ ಜನರ ಋಣ ನನ್ನ ಮೇಲಿರುವುದಲ್ಲದೆ ರೈತರ ಹಿತದೃಷ್ಟಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಸುಧೀರ್ಘವಾಗಿ ಚರ್ಚಿಸಿ, ಕಾರ್ಖಾನೆಗಳನ್ನು ಪುನರಾರಂಭಿಸುವಂತೆ ಮನವಿ ಮಾಡಿದ್ದೇನೆ. ನನ್ನ ಮನವಿಗೆ ಸ್ಪಂದಿಸಿರುವ ಸಿಎಂ ಜಿಲ್ಲೆಯ ಎರಡೂ ಕಾರ್ಖಾನೆಗಳನ್ನು ಶೀಘ್ರದಲ್ಲಿಯೇ ಪ್ರಾರಂಭ ಮಾಡುವು ದಾಗಿ ಭರವಸೆ ನೀಡಿದ್ದಾರೆ ಎಂದು ಮಾಜಿ ಸಚಿವ ಚಲುವನಾರಾಯಣ ಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.