ವಧು-ವರರಿಂದ ವಿನೂತನ ಪರಿಸರ ಜಾಗೃತಿ
Team Udayavani, Dec 2, 2019, 4:36 PM IST
ಮಳವಳ್ಳಿ: ವಿವಾಹ ಸಮಾರಂಭಕ್ಕೆ ಆಶೀರ್ವದಿಸಲು ಬಂದವರಿಗೆ ನೂತನ ವಧು–ವರರು ಸಸಿ ವಿತರಿಸುವ ಮೂಲಕ ಪರಿಸರ ಪ್ರೇಮ ಮೆರೆದರು.
ಹಲಗೂರು ಗ್ರಾಪಂ ಅಧ್ಯಕ್ಷೆ ಮಂಗಳಮ್ಮ ತಮ್ಮ ಮಗಳ ಮದುವೆ ಸಮಾರಂಭ ನಡೆಯುತ್ತಿದ್ದ ಸಂದರ್ಭದಲ್ಲಿ ವಧು–ವರರಿಗೆ ಶುಭ ಹಾರೈಸಲು ಬಂದಿದ್ದ ಗಣ್ಯರಿಗೆ ತಾಂಬೂಲ ನೀಡುವುದರ ಬದಲು ಸಸಿ ನೀಡಿ ನಿಮ್ಮ ಮನೆಯಂಗಳದಲ್ಲಿ ಸಸಿ ನೆಟ್ಟು ಪರಿಸರ ರಕ್ಷಿಸುವಂತೆ ಮನವಿ ಮಾಡಿದರು.
ಸುಮಾರು ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೀಡಿ ಪರಿಸರ ಜಾಗೃತಿ ಸಂದೇಶ ಸಾರಿದರು. ಇತ್ತೀಚಿನ ದಿನಗಳಲ್ಲಿ ವಾಯುಮಾಲಿನ್ಯ ಹೆಚ್ಚುತ್ತಿದೆ. ಇದರಿಂದ ಹೆಚ್ಚು ಆರೋಗ್ಯ ಸಮಸ್ಯೆ ಎಲ್ಲರನ್ನೂ ಕಾಡುತ್ತಿದ್ದು, ಮೊದಲು ನಮಗೆ ಉತ್ತಮ ಆಮ್ಲಜನಕ ದೊರಕಬೇಕು. ಇತ್ತೀಚಿನ ದಿನಗಳಲ್ಲಿರಸ್ತೆ ಅಗಲೀಕರಣ ಮತ್ತಿತರ ಕಾರಣಗಳಿಂದ ಮರ ಕಡಿಯಲಾಗುತ್ತಿದೆ. ಇದರಿಂದ ಸಕಾಲಕ್ಕೆ ಮಳೆಯಾಗದೆ ತುಂಬಾ ತೊಂದರೆಯಾಗುತ್ತಿದೆ. ಮಳೆ ಬರಬೇಕಾದರೆ ಹೆಚ್ಚು ಹೆಚ್ಚು ಗಿಡ–ಮರ ಬೆಳೆಸಬೇಕು. ಆದ್ದರಿಂದ ತನ್ನ ಮಗಳ ಮದುವೆಯಲ್ಲಿ ತಾಂಬೂಲ ನೀಡುವುದರ ಬದಲಾಗಿ ಸಸಿ ನೀಡಿ ಅದನ್ನು ಸಂರಕ್ಷಿಸುವಂತೆ ತಿಳಿಸಲಾಗುತ್ತಿದೆ ಎಂದು ಮಂಗಳಮ್ಮ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ
Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.