ಜಾಮೀನು ರಹಿತ ಸಾಲಕ್ಕೆ ಒತ್ತಾಯ
Team Udayavani, Jul 7, 2019, 12:44 PM IST
ಸ್ವಂತ ಉದ್ದಿಮೆ ಹೊಂದುವವರಿಗೆ ಜಾಮೀನು ರಹಿತ ಸಾಲ ನೀಡುವಂತೆ ಒತ್ತಾಯಿಸಿ ಮಂಡ್ಯದ ಬ್ಯಾಂಕ್ ಆಫ್ ಇಂಡಿಯಾ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯ: ಭಾರತಿಯ ರಿಸರ್ವ್ ಬ್ಯಾಂಕ್ ನಿರ್ದೇಶನದಂತೆ ಗ್ರಾಮಿಣ ಪ್ರದೇಶದ ಜನರಿಗೆ ಸ್ವಂತ ಉದ್ದಿಮೆ ಪ್ರಾರಂಭಿಸಲು 1 ಲಕ್ಷ ರೂ.ವರೆಗೆ ಜಾಮೀನು ರಹಿತ ಸಾಲ ನೀಡಬೇಕು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ನಗರದ ಬ್ಯಾಂಕ್ ಆಫ್ ಇಂಡಿಯಾ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ದೇಶದಲ್ಲಿ ಬಡವರ್ಗದ ಯುವಜನತೆ ಹಾಗೂ ಮಹಿಳೆಯರಿಗೆ ಹೈನುಗಾರಿಕೆ, ಕುರಿ ಸಾಕಾಣಿಕೆ ಹಾಗೂ ಕೋಳಿ ಸಾಕಾಣಿಕೆ ಮೂಲಕ ಸ್ವಂತ ಉದ್ದಿಮೆ ಮಾಡಬಹುದು. ಭಾರತೀಯ ರಿಸರ್ವ್ ಬ್ಯಾಂಕ್ ಸ್ವಂತ ಉದ್ದಿಮೆ ಪ್ರಾರಂಭಿಸಲು ಅರ್ಹರಿಗೆ ಜಾಮೀನು ರಹಿತವಾಗಿ 1 ಲಕ್ಷ ರೂ.ಗಳವರೆಗೆ ಸಾಲ ನೀಡುವಂತೆ ಎಲ್ಲಾ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿದೆ. ಆದರೂ ಬ್ಯಾಂಕುಗಳು ಅರ್ಜಿ ಸಲ್ಲಿಸಿದ ಅರ್ಹ ಸಾರ್ವಜನಿಕರಿಗೆ ಸಾಲ ನೀಡದೆ ಆರ್‌ಬಿಐ ನಿರ್ದೇಶನವನ್ನು ಗಾಳಿಗೆ ತೂರುತ್ತಿವೆ. ಈ ಮೂಲಕ ಯುವಜನರು ಹಾಗೂ ಬಡಜನರನ್ನು ಬಡವರಾಗಿಯೇ ಸಾಯುವಂತೆ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಬೀರಗೌಡನಹಳ್ಳಿ ಕೃಷಿ ಕಾರ್ಮಿಕರು ಆರ್ಥಿಕವಾಗಿ ಹಿಂದುಳಿದಿದ್ದು, ಸರ್ಕಾರದ ಸೌಲಭ್ಯ ಸಿಗದೆ ವಂಚಿತರಾಗಿದ್ದಾರೆ. ತಾಲೂಕಿನ ವಿವಿಧ ಬ್ಯಾಂಕ್‌ಗಳಲ್ಲಿ ಸ್ವಂತ ಉದ್ದಿಮೆ ಸಾಲ ನೀಡುವಂತೆ ಅರ್ಜಿ ಸಲ್ಲಿಸಿದ್ದರೂ, ಜಾಮೀನು ರಹಿತವಾಗಿ ಯಾವುದೇ ಬ್ಯಾಂಕ್‌ಗಳು ಸಾಲ ನೀಡುತ್ತಿಲ್ಲ. ಕೂಡಲೆ ಸಾಲಕ್ಕೆ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ಸಾಲ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದರು.
ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಹನುಮೇಶ್, ಮುಖಂಡರಾದ ನಾಗರಾಜು, ರಾಜು, ತಿಮ್ಮೇಗೌಡ, ಅವಿನಾಶ್, ರೂಪ, ಸವಿತಾ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.