ಕಾಯಂ ತಹಶೀಲ್ದಾರ್ ನೇಮಕಕ್ಕೆ ಒತ್ತಾಯ
Team Udayavani, Nov 18, 2019, 4:35 PM IST
ಮದ್ದೂರು: ತಾಲೂಕು ಕಚೇರಿಯಲ್ಲಿ ಸಮರ್ಪಕವಾದ ಕೆಲಸ ಕಾರ್ಯಗಳಾಗದೆ ಸಾರ್ವಜನಿಕರು ಪ್ರತಿನಿತ್ಯ ಅಲೆದಾಡುವ ಪ್ರವೃತ್ತಿ ಮುಂದುವರಿದಿದ್ದರೂ ಸಂಬಂಧಿಸಿದ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮೌನಕ್ಕೆ ಶರಣಾಗಿರುವುದು ಸಾರ್ವಜನಿಕರ ಟೀಕೆಗೆ ಕಾರಣವಾಗಿದೆ.
ಆಡಳಿತ ಶಕ್ತಿ ಕೇಂದ್ರವಾಗಬೇಕಾಗಿದ್ದ ತಾಲೂಕು ಕಚೇರಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು ಸಾರ್ವಜನಿಕ ಕೆಲಸ ಕಾರ್ಯಗಳು ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದೆ ದೂರದ ಗ್ರಾಮ ಗಳಿಂದ ಆಗಮಿಸುವ ಸಾರ್ವಜನಿಕರು, ರೈತರು, ಮಹಿಳೆಯರು ಪರದಾಡುವ ಸ್ಥಿತಿ ಬಂದೊದಗಿದೆ. ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಿಸದ ಕಾರಣ ಇಷ್ಟೆಲ್ಲಾ ಅದ್ವಾನಗಳಿಗೆ ಕಾರಣವಾಗಿದ್ದು ಜತೆಗೆ ಕಾಯಂ ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿ ಮತ್ತಷ್ಟು ಕಳೆಗುಂದಿದೆ.
ಜಾತಿ, ಆದಾಯ ಪ್ರಮಾಣ ಪತ್ರ, ಖಾತೆ ಬದಲಾವಣೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ಸೇರಿದಂತೆ ಇನ್ನಿತರೆ ಸರ್ಕಾರಿ ಯೋಜನೆಗಳನ್ನು ಪಡೆಯಲು ಸಾವಿರಾರು ಅರ್ಜಿಗಳನ್ನು ಅರ್ಹ ಫಲಾನುಭವಿಗಳು ತಾಲೂಕು ಕಚೇರಿಗೆ ಸಲ್ಲಿಸಿದ್ದರೂ ತಹಶೀಲ್ದಾರ್ ಇಲ್ಲದ ಕಾರಣ ಅರ್ಜಿಗಳು ವಿಲೇವಾರಿಯಾಗದೆ ಧೂಳು ಹಿಡಿಯುತ್ತಿವೆ. ಖಾತೆ ಬದಲಾವಣೆ, ಪೋಡಿ ಪ್ರಕರಣ, ಆರ್‌ಟಿಸಿ ಒಗ್ಗೂಡಿವಿಕೆ, ಹದ್ದುಬಸ್ತು ನಿಗಧಿಪಡಿಸುವುದು, ಸ್ಕೆಚ್ ಸೇರಿದಂತೆ ಇನ್ನಿತರೆ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದು ಕೆಲ ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾದರೂ ಹಾಜರಾತಿ ಪುಸ್ತಕಕ್ಕೆ ಸಹಿ ಹಾಕಿ ಹೊರ ಹೋಗುವ ಅಧಿಕಾರಿಗಳೇ ಹೆಚ್ಚಾಗಿ ಕಂಡು ಬರುತ್ತಿರುವುದು ವಿಪರ್ಯಾಸವಾಗಿದೆ.
ರೈತ ಸಂಘ ಹಾಗೂ ಪ್ರಗತಿಪರ ಸಂಘಟನೆಗಳು ಕಾಯಂ ತಹಶೀಲ್ದಾರ್ ಅವರನ್ನು ನೇಮಿಸುವಂತೆ ಹಲವಾರು ಬಾರಿ ಪ್ರತಿಭಟನೆಗಳಾದರೂ ಯಾವುದೇ ಪ್ರಯೋಜನವಾಗಿಲ್ಲ. ವರ್ಷಕ್ಕೆ 9ಕ್ಕೂ ಹೆಚ್ಚು ತಹಶೀಲ್ದಾರ್‌ಗಳು ಕಾರ್ಯನಿರ್ವಹಿಸಿ ವರ್ಗಾವಣೆಗೊಂಡಿದ್ದರೂ ಕೇವಲ ಪ್ರಭಾರ ತಹಶೀಲ್ದಾರ್‌ಗಳೇ ಕರ್ತವ್ಯ ನಿರ್ವ ಹಿಸುತ್ತಿದ್ದು, ಮರಳು ದಂಧೆ, ನ್ಯಾಯಾಲಯದ ಪ್ರಕರಣ ಹಾಗೂ ಇನ್ನಿತರೆ ಸಮಸ್ಯೆಗಳಿಂದಾಗಿ ಮದ್ದೂರಿಗೆ ಬರುವ ತಹಶೀಲ್ದಾರ್ ಅವರನ್ನು ಕಾಡುತ್ತಿದ್ದು ಈಗಾಗಿಯೇ ಒತ್ತಡವಿರುವ ಜತೆಗೆ ರಾಜಕಾರಣಿಗಳ ಹಸ್ತಕ್ಷೇಪವು ತಹಶೀಲ್ದಾರ್ ಮೇಲಿನ ಒತ್ತಡ ಹೆಚ್ಚಾಗಿಸಿದೆ. ಆದ್ದರಿಂದ ಸರ್ಕಾರ ಕಾಯಂ ತಹಶೀಲ್ದಾರ್ ಅವರನ್ನು ನೇಮಕ ಮಾಡುವ ರೈತರ ಹಾಗೂ ಸಾರ್ವಜನಿಕರ ಕೆಲಸಕ್ಕೆ ಅನುವು ಮಾಡಿಕೊಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.