ಕೀಳಾಗಿ ಮಾತನಾಡಿದರೆ ಸುಮ್ಮನಿರಲ್ಲ
Team Udayavani, Mar 10, 2019, 7:47 AM IST
ಶ್ರೀರಂಗಪಟ್ಟಣ: ಮಹಿಳಾ ದಿನಾಚರಣೆಯಂದು ಮಹಿಳೆಯರಿಗೆ ಗೌರವ ನೀಡುವ ಬದಲು ಸುಮಲತಾ ಅವರ ಬಗ್ಗೆ ಕೇವಲವಾಗಿ ಮಾತನಾಡಿರುವ ಸಚಿವ ರೇವಣ್ಣ ಅವರಿಂದ ಸ್ತ್ರೀಕುಲಕ್ಕೆ ಅವಮಾನ ಮಾಡಿದಂತಾಗಿದೆ ಎಂದು ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ಆಕ್ರೋಶ ವ್ಯಕ್ತಪಡಿಸಿದರು.
ಯಾರೇ ರಾಜಕೀಯ ಮಾಡಲು ಬಂದರೂ ಎಲ್ಲರಿಗೂ ಸಮಾನವಾದ ಹಕ್ಕಿದೆ, ಭಾರತ ಸುಸಂಸ್ಕೃತ ದೇಶ. ಅದರಲ್ಲಿ ಇಂದು ಮಹಿಳಾ ದಿನಾಚರಣೆ ಹಲವಾರು ಕಡೆ ಆಚರಿಸಲಾಗುತ್ತಿದೆ. ಮಹಿಳೆಯರ ಮೇಲೆ ಶೋಷಣೆ ಮಾಡಬಾರದು ಎಂದು ಹೇಳುವ ಜನ ಸೇವೆಗೆ ಬಂದಿರುವ ಜವಾಬ್ದಾರಿಯುತ ಸ್ಥಾನದಲ್ಲಿರುವ ಮಂತ್ರಿಯೊಬ್ಬರು ಓರ್ವ ಮಹಿಳೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, ಗಂಡ ಸತ್ತು ಒಂದು ತಿಂಗಳಾಗಲಿಲ್ಲ ಆಗಲೆ ರಾಜಕೀಯಕ್ಕೆ ಬಂದಿದ್ದಾರೆ ಎಂದು ಉತ್ತರಿಸುವುದು ಅವರ ಘನತೆಗೆ ತಕ್ಕುದಲ್ಲ ಎಂದು ಮಾತನಾಡಿರುವುದು ಸರಿಯಲ್ಲ ಎಂದು ಖಂಡಿಸಿದರು.
ನಟ ಅಂಬರೀಶ್ ಇದ್ದಾಗ ಇವರು ಹೀಗೆ ಮಾತಾಡುತ್ತಿರಲಿಲ್ಲ. ಸಚಿವರ ಮನೆ ಹೆಣ್ಣು ಮಕ್ಕಳೂ ರಾಜಕೀಯಕ್ಕೆ ಬಂದಿದ್ದಾರೆ ಎಂಬುದನ್ನು ಮರೆಯಬಾರದು. ಹೆಣ್ಣು ಮಕ್ಕಳ ಗೌರವ ಕಾಪಾಡಬೇಕು. ದೇಶ ಆಳಿದ ಮಾಜಿ ಪ್ರಧಾನಿ ದೇವೇಗೌಡರು ಇಲ್ಲಿವರೆಗೆ ಇಂತಹ ಕೀಳುಮಟ್ಟದ ಮಾತನಾಡಿರುವ ಬಗ್ಗೆ ಎಲ್ಲೂ ಕೇಳಿಲ್ಲ. ಅವರ ಪುತ್ರ ಹೀಗೆ ಮಾತನಾಡುವುದು ಸರಿಯಲ್ಲ. ಸುಮಲತಾ ಪರವಾಗಿ ನಾವಿದ್ದೇವೆ. ಕೂಡಲೇ ಸಚಿವರು ಕ್ಷಮೆ ಯಾಚಿಸದಿದ್ದರೆ ಶನಿವಾರ ಸಚಿವ ರೇವಣ್ಣ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್ ಆಯುಕ್ತರಿಗೆ ದೂರು
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.