ಕೆಲಸ ನಿರಾಕರಣೆ ವಿರೋಧಿಸಿ ಧರಣಿ
ಹೈಕೋರ್ಟ್ ತೀರ್ಪಿನನ್ವಯ ಕನಿಷ್ಠ ವೇತನ ಜಾರಿಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ
Team Udayavani, May 22, 2019, 4:15 PM IST
ಮಂಡ್ಯ: ಕಾನೂನು ಬಾಹಿರವಾಗಿ ಕಾರ್ಮಿಕರಿಗೆ ಕೆಲಸ ನಿರಾಕರಣೆ ಮಾಡಿರುವುದನ್ನು ವಿರೋಧಿಸಿ ಮತ್ತು ಹೈಕೋರ್ಟ್ ತೀರ್ಪಿನನ್ವಯ ಕನಿಷ್ಠ ವೇತನ ಜಾರಿಗೆ ಅಗ್ರಹಿಸಿ ಮೆ.ಮೆಗ್ನೀಷಿಯಂ ಅಂಡ್ ಅಲೈಡ್ ಪ್ರಾಡಕ್ಟ್ ಕಾರ್ಮಿಕರ ಸಂಘ ಮಂಗಳವಾರ ಪ್ರತಿಭಟನೆ ನಡೆಸಿತು.
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ನಲ್ಲಿ ಜಮಾವಣೆಗೊಂಡ ಮೆ.ಮೆಗ್ನೀಷಿಯಂ ಅಂಡ್ ಅಲೈಡ್ ಪ್ರಾಡಕ್ಟ್ ಕಾರ್ಮಿಕರ ಸಂಘದ ಪದಾಧಿ ಕಾರಿಗಳು, ಜಿಲ್ಲಾ ಕಾರ್ಮಿಕ ಇಲಾಖೆಯವರೆಗೆ ಮೆರವಣಿಗೆಯಲ್ಲಿ ತೆರಳಿ ಧರಣಿ ಕುಳಿತು, ಮದ್ದೂರು ತಾಲೂಕು ಹುರುಗಲವಾಡಿ ಕೈಗಾರಿಕಾ ಪ್ರದೇಶ ದಲ್ಲಿರುವ ಕಾರ್ಖಾನೆಯ ಆಡಳಿತ ಮಂಡಳಿಯು ಸುಮಾರು ಎರಡು ತಿಂಗಳಿನಿಂದ ಕಾರ್ಮಿಕರಿಗೆ ಯಾವುದೇ ಸೂಚನೆ ನೀಡದೆ ಕೆಲಸ ನಿರಾಕರಣೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾರ್ಮಿಕರ ವಿರೋಧಿ ನೀತಿ: ಎರಡು ತಿಂಗಳಿನಿಂದ ವೇತನ ನೀಡದೆ ಕಾರ್ಖಾನೆಯ ಬಾಗಿಲು ಮುಚ್ಚಿದೆ. ಆಡಳಿತ ಮಂಡಳಿಯ ಈ ಕ್ರಮ ಕಾರ್ಮಿಕರ ವಿರೋಧಿ ನೀತಿಯಾಗಿದ್ದು, ಕಾರ್ಮಿಕರ ಜೀವನ ನಡೆಸುವುದು ಬಹಳ ದುಸ್ತರವಾಗಿದೆ. ಹಲವಾರು ವರ್ಷಗಳಿಂದ ಕಾನೂನು ಪ್ರಕಾರ ನೀಡಬೇಕಾಗಿರುವ ಬೋನಸ್ ನೀಡಿಲ್ಲ. ಮೂಲ ಸೌಕರ್ಯಗಳನ್ನು ನೀಡದೆ ಕಾರ್ಮಿಕರಿಗೆ ಬಹಳ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ಅವರು, ಆದ್ದರಿಂದ ಕಾರ್ಮಿಕ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ಅಕ್ರಮ ಬೀಗ ಮುದ್ರೆಯನ್ನು ತೆರವುಗೊಳಿಸಿ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಬೇಕು. ಹೈಕೋರ್ಟ್ ತೀರ್ಪಿನನ್ವಯ ಕನಿಷ್ಠ ವೇತನ ಕೊಡಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾರ್ಮಿಕರ ಸಂಘದ ಅಧ್ಯಕ್ಷ ರಾಜು, ಉಪಾಧ್ಯಕ್ಷ ಮಾಯಣ್ಣಘಿ, ಸಹ ಕಾರ್ಯದರ್ಶಿ ರಾಮು, ಪ್ರಧಾನ ಕಾರ್ಯದರ್ಶಿ ಪಿ.ತಿಮ್ಮೇಶ್, ಸಿಐಟಿಯು ಸಿ.ಕುಮಾರಿ, ಜಿ. ರಾಮಕೃಷ್ಣ, ಚಂದ್ರಶೇಖರ್, ಚಲುವರಾಜು ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.