31ರಂದು ಕನ್ನಡ ಜಾಗೃತಿ ಸಮಾವೇಶ
Team Udayavani, Oct 22, 2019, 4:11 PM IST
ಶ್ರೀರಂಗಪಟ್ಟಣ: ಜಿಲ್ಲೆಯಲ್ಲಿ ಪಿಎಸ್‌ಎಸ್ಕೆ ಹಾಗೂ ಮೈಷುಗರ್ ಕಾರ್ಖಾನೆಗಳು ಆರಂಭಿಸ ದಿದ್ದರೆ ರೈತರು ಮತ್ತಷ್ಟು ಸಂಕಷ್ಟಕ್ಕೆ ಗುರಿಯಾ ಗುತ್ತಾರೆ ಎಂದು ಕನ್ನಡಸೇನೆ ಜಿಲ್ಲಾಧ್ಯಕ್ಷ ಹೆಚ್. ಸಿ.ಮಂಜುನಾಥ್ ತಿಳಿಸಿದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಮ್ಮಿ ಕೊಂಡಿರುವ ಸಮಾವೇಶದ ಭಿತ್ತಿ ಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಜಿಲ್ಲೆಯ ಎರಡು ಸಕ್ಕರೆ ಕಾರ್ಖಾನೆಗಳು ಪುನರಾ ರಂಭಗೊಳ್ಳದೆ ರೈತರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದನದಲ್ಲಿ ಜಿಲ್ಲೆಯ ಶಾಸಕರು ಈ ಬಗ್ಗೆ ಮಾತನಾಡುತ್ತಿಲ್ಲ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೆರೆ ಹಾನಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಜಿಲ್ಲೆ ಹಾಗೂ ರಾಜ್ಯದ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕನ್ನಡ ಸೇನೆ ಹತ್ತಾರು ವರ್ಷಗಳಿಂದ ಹೋರಾಟ ನಡೆಸಿ ಕೊಂಡು ಬರುತ್ತಿದೆ.
ಇದೇ ಮೊದಲ ಬಾರಿಗೆ ಮಂಡ್ಯ ಜಿಲ್ಲೆಯಲ್ಲಿ ಕನ್ನಡ ಸೇನೆ ಅ.31ರಂದು ಮಂಡ್ಯದಲ್ಲಿ ಕನ್ನಡ ಸೇನೆಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಂಡ್ಯದ ನಾಲ್ವಡಿ ಕೃಷ್ಣರಾಜ ಒಡೆಯರ್ ವೇದಿಕೆಯಲ್ಲಿ ಕನ್ನಡ ಜಾಗೃತಿ ಸಮಾವೇಶ ಹಮ್ಮಿಕೊಂಡಿದೆ. ಜಿಲ್ಲೆಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕಾಗಿ ಸಮಾವೇಶಕ್ಕೆ ಹೆಚ್ಚು ಮಂದಿ ಭಾಗವಹಿಸಬೇಕು ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ಕೋರಿದರು.
ಕನ್ನಡ ಸೇನೆ ತಾಲೂಕು ಅಧ್ಯಕ್ಷ ಶಿವರಾಮು, ಜಿಲ್ಲಾ ಕಾರ್ಯದರ್ಶಿ ಪಾಂಡು, ಪ್ರಧಾನ ಕಾರ್ಯ ದರ್ಶಿ ಮಂಜುನಾಥ್, ಸಂಘಟನಾ ಕಾರ್ಯದರ್ಶಿ ಬಿ.ಎಸ್ ಮಂಜು ನಾಥ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕಾಬೂಲ್, ಸಿದ್ದೇಗೌಡ ಇತರರು ಹಾಜರಿದ್ದು ವಿವಿಧಗ್ರಾಮಗಳ ಮುಖಂಡರು ಸಂಘಟನ ಕಾರರಿಗೆ ಬಿತ್ತಿಪತ್ರಗಳನ್ನು ವಿತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.