ಶ್ರೀರಂಗಪಟ್ಟಣ: ಕಾರಿಗೆ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಯುವಕನ ಬರ್ಬರ ಹತ್ಯೆ
Team Udayavani, Oct 23, 2020, 11:02 AM IST
ಮಂಡ್ಯ: ಕಾರಿನಲ್ಲಿ ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಣ್ಣಿಗೆ ಖಾರದ ಪುಡಿ ಎರಚಿ ಯುವಕನನ್ನು ಕೊಲೆಗೈದ ಘಟನೆ ಶ್ರೀರಂಗಪಟ್ಟಣದಲ್ಲಿ ಕಳೆದ ರಾತ್ರಿ ನಡೆದಿದೆ.
ಪಾಲಹಳ್ಳಿ ಗ್ರಾಮದ ಕಳಪಚ್ಚಿ ಹರೀಶ (30) ಕೊಲೆಯಾದ ವ್ಯಕ್ತಿ. ಶ್ರೀರಂಗಪಟ್ಟಣ ತಾಲೂಕಿನ ಪಶ್ಚಿಮವಾಹಿನಿ-ಕೆಆರ್ ಎಸ್ ರಸ್ತೆಯಲ್ಲಿ ತಡರಾತ್ರಿ ಘಟನೆ ನಡೆದಿದೆ.
ರಾತ್ರಿ ಹರೀಶ್ ಕಾರಿನಲ್ಲಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ಹೋಗುತ್ತಿದ್ದಾಗ ಅಡ್ಡಗಟ್ಟಿದ ದುಷ್ಕರ್ಮಿಗಳು, ಕಣ್ಣಿಗೆ ಖಾರದ ಪುಡಿ ಎರಚಿ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಸುರೇಂದ್ರ ಬಂಟ್ವಾಳ್ ಹತ್ಯೆ ಮಾಡಿದ್ದು ನಾನೇ; ಗೊಂದಲ ಸೃಷ್ಟಿಸಿದ ಆಪ್ತನ ವಾಯ್ಸ ರೆಕಾರ್ಡ್
ಹಳೇ ವೈಷ್ಯಮ್ಯದಿಂದ ವ್ಯಕ್ತಿಯನ್ನು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.