ಕೆಬಿಸಿ ಕೈ ಶಾಸಕರಲ್ಲ, ಬಿಜೆಪಿ ಏಜೆಂಟ್
Team Udayavani, Jul 20, 2018, 1:03 PM IST
ಕೆ.ಆರ್.ಪೇಟೆ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ನಾಯಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿರುವ ಕೆ.ಬಿ.ಚಂದ್ರಶೇಖರ್ ಕಾಂಗ್ರೆಸ್ ಮುಖಂಡರಲ್ಲ. ಅವರೊಬ್ಬ ಬಿಜೆಪಿ ಪಕ್ಷದ ಏಜೆಂಟ್ ಆಗಿದ್ದಾರೆ ಎಂದು ಶಾಸಕ ನಾರಾಯಣಗೌಡ ಗಂಭೀರ ಆರೋಪ ಮಾಡಿದರು.
ಗುರುವಾರ ಪಟ್ಟಣದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದೆರಡು ವಿಧಾನಸಭಾ ಚುನಾವಣೆಗಳಲ್ಲಿ ಜನರಿಂದ ತಿರಸ್ಕರಿಸಲ್ಪಟ್ಟಿರುವ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಬುದ್ಧಿ ಭ್ರಮಣೆಯಾದವರಂತೆ ಹತಾಶೆಯಿಂದ ಮಾತನಾಡಿ ತಮ್ಮ ಸಣ್ಣತನ ಪ್ರದರ್ಶನ ಮಾಡುತ್ತಿದ್ದಾರೆ. ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿರುವ ಇವರಿಗೆ ಕಾಂಗ್ರೆಸ್ ಮುಖಂಡರು ಸೂಕ್ತ ಚಿಕಿತ್ಸೆ ಕೊಡಿಸಿ ಸರಿದಾರಿಗೆ ತರಬೇಕು. ಇಲ್ಲದಿದ್ದರೆ ನಾವೇ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಸೂಯೆ ಪ್ರದರ್ಶನ: ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಚಂದ್ರಶೇಖರ್ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಬಾಲಿಷತನದ ಮಾತುಗಳನ್ನಾಡಿದ್ದಾರೆ. ಕುಮಾರಸ್ವಾಮಿ ಅವರನ್ನು ಏಕವಚನದಲ್ಲಿ ನಿಂದಿಸುವ ಮೂಲಕ ತಮ್ಮೊಳಗಿನ ಕೆಟ್ಟತನ, ದ್ವೇಷ, ಅಸೂಯೆ ಪ್ರದರ್ಶಿಸಿದ್ದಾರೆ. ತಾಲೂಕಿನಲ್ಲಿ ಗೂಂಡಾಗಿರಿ ರಾಜಕಾರಣ ಅಂತ್ಯವಾಗಿದೆ. 18 ಸಾವಿರ ಮತಗಳ ಅಂತರದಲ್ಲಿ ಜೆಡಿಎಸ್ ಅಭ್ಯರ್ಥಿಯಾದ ತನ್ನನ್ನು ಗೆಲ್ಲಿಸಿ ವಿಜಯಮಾಲೆ ತೊಡಿಸಿದ ತಾಲೂಕಿನ ಪ್ರಜ್ಞಾವಂತ ಮತದಾರರು ದುಷ್ಟ ರಾಜಕಾರಣಿ ಗೂಂಡಾ ಚಂದ್ರಶೇಖರ್‌ಗೆ ಮನೆಯ ದಾರಿ ತೋರಿಸಿದ್ದಾರೆ. ಆದರೂ ಇನ್ನೂ ಅವರಿಗೆ ಬುದ್ಧಿ ಬಂದಿಲ್ಲ ಎಂದು ದೂಷಿಸಿದರು.
ರಾಹುಲ್ ಬೆಂಬಲ: ಅಖೀಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್‌ಗಾಂಧಿ ಅವರೇ ಕುಮಾರಸ್ವಾಮಿ ಅವರ ದಕ್ಷ
ಆಡಳಿತ ಮೆಚ್ಚಿ ಐದು ವರ್ಷಗಳ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅವಕಾಶ ನೀಡಿ ಬೇಷರತ್ ಬೆಂಬಲ ಘೋಷಿಸಿದ್ದಾರೆ. ಇನ್ನು ಚಂದ್ರಶೇಖರ್ ಮಾತಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂದು ಆಕ್ರೋಶದಿಂದ ನುಡಿದರು.
10 ಸಾವಿರ ಜನರು ಭಾಗಿ: ಮಂಡ್ಯದಲ್ಲಿ ನಡೆಯಲಿರುವ ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆಯುತ್ತಿರುವ ಜೆಡಿಎಸ್ ಕೃತಜ್ಞತಾ ಸಮಾವೇಶಕ್ಕೆ ತಾಲೂಕಿನಿಂದ 10 ಸಾವಿರಕ್ಕೂ ಹೆಚ್ಚಿನ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದರು.
ಕೃಷ್ಣರಾಜ ಸಾಗರದಲ್ಲಿ ಕಾವೇರಿ ಮಾತೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಕಾರ್ಯಕರ್ತರು ಅಲ್ಲಿಂದ ನೇರವಾಗಿ ಮಂಡ್ಯ ನಗರದಲ್ಲಿ ನಡೆಯುವ ಕೃತಜ್ಞತಾ ಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದರು.
ಸಭೆಯಲ್ಲಿ ತಾಲೂಕು ಜೆಡಿಎಸ್ ಅಧ್ಯಕ್ಷ ವೆಂಕಟಸುಬ್ಬೇಗೌಡ, ಪುರಸಭೆ ಮಾಜಿ ಅಧ್ಯಕ್ಷ ಕೆ.ಟಿ.ಗಂಗಾಧರ್, ಜಿಪಂ ಮಾಜಿ ಅಧ್ಯಕ್ಷೆ ಜೆ.ಪ್ರೇಮಕುಮಾರಿ, ಜಿಪಂ ಸದಸ್ಯ ಎಚ್.ಟಿ.ಮಂಜು, ತಾಪಂ ಉಪಾಧ್ಯಕ್ಷ ಜಾನಕೀರಾಂ, ಕೆ.ಶ್ರೀನಿವಾಸ್, ಎಪಿಎಂಸಿ ಅಧ್ಯಕ್ಷ ಲೋಕೇಶ್, ಮಾಜಿ ಅಧ್ಯಕ್ಷ ಕೆ.ಎನ್.ಕೃಷ್ಣ, ರಾಮಚಂದ್ರನ್, ಕಿಕ್ಕೇರಿ ಹೋಬಳಿ ಜೆಡಿಎಸ್ ಅಧ್ಯಕ್ಷ ಕೆ.ಜೆ. ತಮ್ಮಣ್ಣ, ಬೂಕನಕೆರೆ ಹೋಬಳಿ ಅಧ್ಯಕ್ಷ ನಂದೀಶ್, ಶೀಳನೆರೆ ಹೋಬಳಿ ಅಧ್ಯಕ್ಷ ಸ್ವಾಮಿಗೌಡ, ಸಂತೇಬಾಚಹಳ್ಳಿ ಹೋಬಳಿ ಅಧ್ಯಕ್ಷ ಗೊರವಿ ಮಂಜೇಗೌಡ, ಅಕ್ಕಿಹೆಬ್ಟಾಳು ಹೋಬಳಿ ಅಧ್ಯಕ್ಷ ಸುಬ್ಬೇಗೌಡ, ಕಸಬಾ ಹೋಬಳಿಯ ಅಧ್ಯಕ್ಷ ವಸಂತಕುಮಾರ್ ಸೇರಿದಂತೆ ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.
ಪುರಸಭೆ ಆಡಳಿತವನ್ನು ತನ್ನ ತೆಕ್ಕೆಯಲ್ಲಿಟ್ಟುಕೊಂಡು ಬಡಜನರನ್ನು ಹಿಂಸಿಸುತ್ತಿರುವ ಮಾಜಿ ಶಾಸಕ ಚಂದ್ರಶೇಖರ್‌ಗೆ ಮುಂಬರುವ ಪುರಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತೇನೆ. ಪುರಸಭೆ ಕಟ್ಟಡದ ಮೇಲೆ ಜೆಡಿಎಸ್ ಬಾವುಟ ಹಾರಿಸುತ್ತೇನೆ.
ನಾರಾಯಣಗೌಡ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.