ಕೆ.ಆರ್.ನಗರ: ಎಲ್ಲೆಲ್ಲೂ ಮತ ಲೆಕ್ಕಾಚಾರ
Team Udayavani, Apr 22, 2019, 5:53 PM IST
ಕೆ.ಆರ್.ನಗರ: ಬೇಸಿಗೆಯ ಬಿರು ಬಿಸಿಲಿಗಿಂತ ಹೆಚ್ಚು ಕಾವು ಪಡೆದುಕೊಂಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಇದೀಗ ಮತದಾನದ ನಂತರ ಸೋಲು ಗೆಲುವಿನ ಲೆಕ್ಕಾಚಾರ ಮತ್ತು ಬಾಜಿ ರಾಜಕೀಯ ಬಿರುಸಿನಿಂದ ನಡೆಯುತ್ತಿದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟದ ಅಭ್ಯರ್ಥಿ ನಿಖೀಲ್ಕುಮಾರಸ್ವಾಮಿ ಹಾಗೂ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿರುವ ಕ್ಷೇತದಲ್ಲಿ ಯಾರು ಗೆಲ್ಲುತ್ತಾರೆ?, ಕೆ.ಆರ್.ನಗರದಲ್ಲಿ ಎಷ್ಟು ಮತಗಳ ಮುನ್ನಡೆ ಪಡೆಯುತ್ತಾರೆ ಎಂಬ ಚರ್ಚೆಗಳು ನಡೆಯುತ್ತಿವೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿವೃದ್ಧಿ ಕಾರ್ಯಗಳು ಮತ್ತು ಕ್ಷೇತ್ರದ ಶಾಸಕರೂ ಆಗಿರುವ ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಜನಪರ ಕೆಲಸಗಳು ಜೆಡಿಎಸ್‌ಗೆ ಆಸರೆಯಾಗಿದ್ದರೆ, ಪಕ್ಷೇತರ ಅಭ್ಯರ್ಥಿ ಸುಮಲತಾ ಕಾಂಗ್ರೆಸ್ ಮತಗಳು, ಅಂಬರೀಶ್, ದರ್ಶನ್, ಯಶ್ ಅಭಿಮಾನಿಗಳು ಹಾಗೂ ಮಹಿಳಾ ಮತದಾರರನ್ನು ನೆಚ್ಚಿಕೊಂಡಿದ್ದಾರೆ.
ಕಾಂಚಾಣ ಸದ್ದು: ಚುನಾವಣೆ ಘೋಷಣೆಯಾದ ಆರಂಭದಲ್ಲಿ ಸ್ವಲ್ಪ ಹಿಂದಿದ್ದ ಜೆಡಿಎಸ್ ಪಕ್ಷ ಮತದಾನಕ್ಕೆ ಎರಡು ದಿನ ಬಾಕಿ ಇರುವಂತೆ ಕಾಂಚಾಣದ ಸದ್ದು ಮಾಡಿದ್ದರಿಂದ ಮೋಲ್ನೋಟಕ್ಕೆ ಸುಮಲತಾ ಅವರಿಗಿಂತ ಹೆಚ್ಚು ಮತಗಳನ್ನು ತನ್ನ ಬುಟ್ಟಿಗೆ ಹಾಕಿಕೊಳ್ಳುವ ಸಾಧ್ಯತೆ ಕಾಣುತ್ತಿದೆ.
ನಿಖೀಲ್ಕುಮಾರಸ್ವಾಮಿಗೆ ಕ್ಷೇತ್ರದಲ್ಲಿ ಹೆಚ್ಚು ಮತ ಕೊಡಿಸಬೇಕು ಎಂದು ಸಚಿವ ಸಾ.ರಾ.ಮಹೇಶ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡು ಕೆಲಸ ಮಾಡಿರುವುದು ಅವರಿಗೆ ವರದಾನವಾಗಲಿದ್ದು, ಇದರ ಜತೆಗೆ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚು ಶ್ರಮ ವಹಿಸಿರುವುದು ಗಮನಾರ್ಹ.
ಸುಮಲತಾ ಪರವಾಗಿ ತಾಲೂಕು ಕುರುಬರ ಸಂಘದ ಅಧ್ಯಕ್ಷ ಜೆ.ಶಿವಣ್ಣ ಮತ್ತು ಅವರ ಬೆಂಬಲಿಗರ ಪಡೆ ಹಗಲಿರುಳು ದುಡಿದಿದ್ದು, ಜೆಡಿಎಸ್ ಪಕ್ಷಕ್ಕಿಂತ ಹೆಚ್ಚು ಮತ ಪಡೆಯುವ ಉಮೇದಿಯಲ್ಲಿದ್ದಾರೆ. ಇದರ ಜತೆಗೆ ಅವರಿಗೆ ಮಹಿಳೆಯರ ಮತಗಳು ಹೆಚ್ಚಾಗಿ ಬಂದಿವೆ ಎಂಬ ನಿರೀಕ್ಷೆ ಇದೆ.
ಬೆಟ್ಟಿಂಗ್ ಭರಾಟೆ: ನಿಖೀಲ್ಕುಮಾರಸ್ವಾಮಿ ಮತ್ತು ಸುಮಲತಾ ಅಂಬರೀಶ್ ನಡುವೆ ಯಾರು ಗೆಲ್ಲುತ್ತಾರೆ ಮತ್ತು ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಲೀಡ್ ಪಡೆಯವವರಾರು ಎಂದು ಅಲ್ಲಲ್ಲಿ ಚರ್ಚೆ ನಡೆಯುತ್ತಿರುವುದರೊಟ್ಟಿಗೆ ಸಣ್ಣ ಪುಟ್ಟದಾಗಿ ಬಾಜಿ ನಡೆಯುತ್ತಿದ್ದು ಮೇ 23ರೊಳಗೆ ಮತ್ತಷ್ಟು ಬಾಜಿ ಹೆಚ್ಚಾಗಿ ನಡೆಯುವ ಸಾಧ್ಯತೆ ಇದೆ.
ಫಲಿತಾಂಶದ್ದೇ ಚರ್ಚೆ: ತಾಲೂಕಾದ್ಯಂತ ಈಗ ಟೀ ಅಂಗಡಿ, ಹೋಟೆಲ್, ಸಾರ್ವಜನಿಕ ಸ್ಥಳಗಳು ಮತ್ತು ಹಳ್ಳಿಗಳ ಅರಳಿ ಕಟ್ಟೆಗಳ ಮೇಲೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಭವನೀಯ ಫಲಿತಾಂಶದ ಬಿಸಿಬಿಸಿ ಚರ್ಚೆಗಳು ನಡೆಯುತ್ತಿವೆ.
ಮತದಾನದ ವಿವರ: ಕೆ.ಆರ್.ನಗರ ವಿಧಾನ ಸಭಾ ಕ್ಷೇತ್ರದಲ್ಲಿ ಒಟ್ಟು 2,06,222 ಮಂದಿ ಮತದಾರರಿದ್ದು, ಈ ಪೈಕಿ 1,63,547 ಮಂದಿ ಮತ ಚಲಾಯಿಸಿದ್ದು, ಶೇ.79.31ರಷ್ಟು ಮತದಾನವಾಗಿದೆ.
ಅದರಲ್ಲಿ 82,716 ಪುರುಷರು, 80,829 ಮಹಿಳಾ ಮತದಾರರು. ಇದು ಕಳೆದ ಲೋಕಸಭಾ ಚುನಾವಣೆಗಿಂತ ಶೇ.6ರಷ್ಟು ಹೆಚ್ಚು ಮತದಾನದ ದಾಖಲೆ ಮಾಡಿದೆ.
ಜಿ.ಕೆ.ನಾಗಣ್ಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.