KRS Dam: ಶೀಘ್ರ ಕೆಆರ್‌ಎಸ್ ಡ್ಯಾಂ ಭರ್ತಿ 92 ಗ್ರಾಮಗಳಲ್ಲಿ ಪ್ರವಾಹ ಭೀತಿ
, Jul 20, 2024, 7:00 AM IST
ಮಂಡ್ಯ/ಹಾಸನ/ಮೈಸೂರು: ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆ ಕಾವೇರಿ ಆಶ್ರಿತ ಜಲಾಶಯಗಳು ಭರ್ತಿಯಾಗುವ ಹಂತದಲ್ಲಿವೆ. ಈಗಾಗಲೇ ಕಬಿನಿ ಜಲಾಶಯ ಭರ್ತಿಯಾಗಿದ್ದು ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ನದಿಗೆ ಹರಿಯಬಿಡಲಾಗುತ್ತಿದೆ.
ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯಕ್ಕೆ ಪ್ರಸ್ತುತ 45 ಸಾವಿರಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಜಲಾಶಯ ಶೀಘ್ರವೇ ಭರ್ತಿಯಾಗುವ ಸಾಧ್ಯತೆ ಇದೆ. ಹಾಸನದ ಗೊರೂರು ಹೇಮಾವತಿ ಜಲಾಶಯ ಭರ್ತಿಯಾಗುವ ಹಂತದಲ್ಲಿದ್ದು, ಡ್ಯಾಂನಿಂದ ನದಿಗೆ ನೀರು ಬಿಡಲಾಗುತ್ತಿದೆ. ಬೇಲೂರು ಸಮೀಪ ನಿರ್ಮಾಣವಾಗಿರುವ ಯಗಚಿ ಜಲಾಶಯವೂ ಬಹುಪಾಲು ಭರ್ತಿಯಾಗಿದೆ.
92 ಗ್ರಾಮಗಳಲ್ಲಿ ಪ್ರವಾಹ ಭೀತಿ
ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ 120 ಅಡಿ ದಾಟುತ್ತಿದ್ದಂತೆ ಕಾವೇರಿ ನದಿಗೆ ನೀರು ಬಿಡಲಾಗುವುದು. ಆದ್ದರಿಂದ, ಮುಂಜಾಗ್ರತೆಗೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಡಿಸಿ ಡಾ| ಕುಮಾರ ಎಚ್ಚರಿಕೆ ನೀಡಿದ್ದಾರೆ. ಈಗಾಗಲೇ ಕಾವೇರಿ ನದಿ ಪಾತ್ರದ ಗ್ರಾಮಗಳನ್ನು ಗುರುತಿಸಲಾಗಿದೆ. ಒಟ್ಟು 92 ಗ್ರಾಮಗಳಲ್ಲಿ ಪ್ರವಾಹ ಉಂಟಾಗಿ ತೊಂದರೆಯಾಗಬಹುದೆಂದು ಅಂದಾಜಿಸಲಾಗಿದೆ. ಈ ಗ್ರಾಮಗಳಿಗೆ ಖುದ್ದು ಅಧಿಕಾರಿಗಳು ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿಶೀಲಿಸಬೇಕೆಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.