ನೀರು ಹರಿಸದಿದ್ದರೆ ಇಂದೇ ಕೆಆರ್‌ಎಸ್‌ ಮುತ್ತಿಗೆ

ಬೆಳಗ್ಗೆ 11 ಗಂಟೆಯವರೆಗೆ ಸರ್ಕಾರಕ್ಕೆ ರೈತ ಸಂಘ ಗಡುವು • ಸಚಿವ ಸಂಪುಟ ಸಭೆ ತೀರ್ಮಾನ ಆಧರಿಸಿ ನಿರ್ಧಾರ

Team Udayavani, Jun 28, 2019, 8:39 AM IST

mandya-tdy-1..

ಕೃಷ್ಣರಾಜಸಾಗರ ಜಲಾಶಯದಿಂದ ನಾಲೆಗಳಿಗೆ ನೀರು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಂಡ್ಯದ ಕಾವೇರಿ ನೀರಾವರಿ ನಿಗಮದ ಕಚೇರಿ ಎದುರು ರೈತಸಂಘದ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿರುವುದು.

ಮಂಡ್ಯ: ನೀರಿಲ್ಲದೆ ಒಣಗುತ್ತಿರುವ ಬೆಳೆಗಳಿಗೆ ನೀರು ಹರಿಸುವ ಬಗ್ಗೆ ಶುಕ್ರವಾರ (ಜೂ.28) ಬೆಳಗ್ಗೆ 11 ಗಂಟೆಯವರೆಗೆ ಕರ್ನಾಟಕ ರಾಜ್ಯ ರೈತ ಸಂಘ ಸರ್ಕಾರಕ್ಕೆ ಗಡುವು ನೀಡಿದೆ. ನಿಗದಿತ ಗಡುವಿನೊಳಗೆ ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಪ್ರಕಟಿಸದಿದ್ದರೆ ಸಾವಿರಾರು ರೈತರೊಂದಿಗೆ ಕೆಆರ್‌ಎಸ್‌ ಮುತ್ತಿಗೆ ಹಾಕಲು ನಿರ್ಧರಿಸಿದೆ.

ಬೆಳೆಗಳನ್ನು ಸಂರಕ್ಷಣೆ ಮಾಡಿಕೊಳ್ಳಲು ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತಸಂಘದ ಕಾರ್ಯಕರ್ತರು ಕಳೆದೊಂದು ವಾರದಿಂದ ಕಾವೇರಿ ನೀರಾವರಿ ನಿಗಮದ ಎದುರು ರೈತ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿರುವ ರೈತಸಂಘದ ಕಾರ್ಯಕರ್ತರು ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ನೀರು ಹರಿಸುವ ಬಗ್ಗೆ ಸ್ಪಷ್ಟ ತೀರ್ಮಾನ ಪ್ರಕಟಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆಗೆ ಉಗ್ರ ಸ್ವರೂಪ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ರೈತರ ತಾಳ್ಮೆಯನ್ನು ಪರೀಕ್ಷಿಸಬೇಡಿ. ನೀರಿನ ಕೊರತೆಯಿಂದ ಬೆಳೆಗಳು ಒಣಗುತ್ತಿರುವುದರಿಂದ ಅವರ ಹೊಟ್ಟೆಗೆ ಬೆಂಕಿ ಬಿದ್ದಿದೆ. ನೀರು ಬಿಡುಗಡೆ ಮಾಡುವ ಜವಾಬ್ದಾರಿಯನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮೇಲೆ ಹಾಕಿ ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನ ಬೇಡ. ಪ್ರಾಧಿಕಾರಕ್ಕೆ ಇಲ್ಲಿನ ವಸ್ತುಸ್ಥಿತಿ ಹಾಗೂ ರೈತರು ಎದುರಿಸುತ್ತಿರುವ ಸಂಕಷ್ಟ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟು ನೀರು ಬಿಡುಗಡೆಗೆ ಸರ್ಕಾರ ಕೂಡಲೇ ಮುಂದಾಗಬೇಕು ಎಂದು ರೈತ ಮುಖಂಡ ದರ್ಶನ್‌ ಪುಟ್ಟಣ್ಣಯ್ಯ ಹೇಳಿದರು.

2 ಟಿಎಂಸಿ ನೀರು ಹರಿಸಿ ಸಾಕು: ಕೆಆರ್‌ಎಸ್‌ ಜಲಾಶಯದಲ್ಲಿ ಹತ್ತು ಟಿಎಂಸಿ ನೀರಿದೆ. ಬೆಳೆಗಳಿಗೆ ಅವಶ್ಯಕತೆ ಇರುವುದು ಕೇವಲ ಎರಡು ಟಿಎಂಸಿ ಮಾತ್ರ. ಅಗತ್ಯವಿರುವಷ್ಟು ನೀರು ಬಿಡುಗಡೆ ಮಾಡಿದರೆ ರೈತರನ್ನು ಬದುಕನ್ನು ರಕ್ಷಣೆ ಮಾಡಿದಂತಾಗುವುದು. ಅದಕ್ಕಾಗಿ ರಾಜ್ಯಸರ್ಕಾರ ಶೀಘ್ರ ತೀರ್ಮಾನ ಕೈಗೊಂಡು ನಾಲೆಗಳಿಗೆ ನೀರು ಹರಿಸುವ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ ಕೆಆರ್‌ಎಸ್‌ಗೆ ಮುತ್ತಿಗೆ ಹಾಕಿ ನೀರನ್ನು ರೈತರೇ ಬಿಡುಗಡೆ ಮಾಡಿಕೊಳ್ಳುವುದಕ್ಕೆ ಮುಂದಾಗಬೇಕಾಗುತ್ತದೆ. ಅದರಿಂದ ಉಂಟಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಜವಾಬ್ದಾರಿಯಾಗಲಿದೆ ಎಂದು ಎಚ್ಚರಿಸಿದರು.

ಸಿಎಂ ದ್ವೇಷದ ರಾಜಕಾರಣ: ನಾಲೆಗಳಿಗೆ ನೀರು ಬಿಡುಗಡೆ ಮಾಡುವ ವಿಚಾರದಲ್ಲಿ ಮೈತ್ರಿ ಸರ್ಕಾರದ ನೇತೃತ್ವ ವಹಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪುತ್ರನ ಚುನಾವಣಾ ಸೋಲನ್ನೇ ಮುಂದಿಟ್ಟುಕೊಂಡು ರೈತರ ಸಂಕಷ್ಟಕ್ಕೆ ಸ್ಪಂದಿಸದೆ ಹಠ ಸಾಧಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ನೀರಿಲ್ಲದೆ ಬೆಳೆಗಳು ಒಣಗುವ ಹಂತದಲ್ಲಿದ್ದರೂ ನೀರು ಹರಿಸದೆ ರೈತರ ಬದುಕಿಗೆ ಕೊಳ್ಳಿ ಇಡುತ್ತಿದ್ದಾರೆ. ಈ ಕೂಡಲೇ ನಾಲೆಗಳಿಗೆ ನೀರೊದಗಿಸುವ ನಿರ್ಧಾರ ಪ್ರಕಟಿಸುವ ಮೂಲಕ ರೈತರನ್ನು ಸಂಕಷ್ಟದಿಂದ ಪಾರು ಮಾಡುವಂತೆ ರೈತ ಮುಖಂಡ ಶಂಭೂನಹಳ್ಳಿ ಸುರೇಶ್‌ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಎ.ಎಲ್.ಕೆಂಪೂಗೌಡ, ದಸಂಸ ಮುಖಂಡ ಗುರುಪ್ರಸಾದ್‌ ಕೆರಗೊಡು, ಜಿ.ಎಸ್‌.ಲಿಂಗಪ್ಪಾಜಿ, ಬಿ.ಬೊಮ್ಮೇಗೌಡ, ಶೆಟ್ಟಹಳ್ಳಿ ರವಿಕುಮಾರ್‌, ಪಿ.ಕೆ.ನಾಗಣ್ಣ, ಸಿದ್ದೇಗೌಡ, ಲತಾ ಶಂಕರ್‌, ಶಿವಾರ ಚಂದ್ರು, ಪಿ.ನಾಗರಾಜು, ಜಿ.ಎ.ಶಂಕರ್‌, ಪಾಂಡು, ಎಸ್‌.ಸಿ.ಮರಿಚನ್ನೇಗೌಡ, ಸಿದ್ದೇಗೌಡ ಇತರರಿದ್ದರು.

ಟಾಪ್ ನ್ಯೂಸ್

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Koppal-Bjp

Overview: ಕೊಪ್ಪಳ ಜಿಲ್ಲಾಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.