ಕುಮಾರಸ್ವಾಮಿಗೆ ಕೆಟ್ಟದ್ದನ್ನು ಬಯಸಿಲ್ಲ
Team Udayavani, Feb 15, 2018, 6:25 AM IST
ನಾಗಮಂಗಲ (ಮಂಡ್ಯ): “ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ನಾವೆಂದೂ ಕೆಡುಕನ್ನು ಬಯಸಿಲ್ಲ ಎಂದು ಶಾಸಕ ಚೆಲುವರಾಯಸ್ವಾಮಿ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ತಿಳಿಸಿದರು.
ಶಿವರಾತ್ರಿ ಪ್ರಯುಕ್ತ ಬುಧವಾರ ಆದಿಚುಂಚನಗಿರಿಯಲ್ಲಿ ಕಾಲಭೈರವೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿ,ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರನ್ನು ಕೆಳಗಿಳಿಸುವ ಕೆಲಸವನ್ನು ನಾವು ಮಾಡಿಲ್ಲ. ಅವರಿಗೆ ಯಾವುದೇ ಕಾರಣಕ್ಕೂ ಕೇಡನ್ನು ಬಯಸಿಲ್ಲ. ಈ ಬಗ್ಗೆ ಕಾಲ ಭೈರವೇಶ್ವರನ ಸನ್ನಿಧಿಯಲ್ಲಿ ಪ್ರಮಾಣ ಮಾಡುವುದಾಗಿ ತಿಳಿಸಿದ್ದೆ. ಆದರೆ, ಕುಮಾರಸ್ವಾಮಿ ಪ್ರಮಾಣ ಮಾಡಲು ಒಪ್ಪಿಲ್ಲ. ಹಾಗಾಗಿ ನಾನೇ ಈ ಸಂದರ್ಭದಲ್ಲಿ ಈ ವಿಚಾರವನ್ನು ದೇವರ ಸನ್ನಿಧಿಯಲ್ಲಿ ಹೇಳುತ್ತಿದ್ದೇನೆ ಎಂದರು.
ನಾವು ಕುಮಾರಸ್ವಾಮಿಗೆ ಕೆಟ್ಟದ್ದನ್ನು ಬಯಸಿದ್ದಲ್ಲಿ ದೇವರು ನಮಗೆ ಶಿಕ್ಷೆ ನೀಡಲಿ. ಇಲ್ಲವೆ, ನಮ್ಮ ಎಲ್ಲಾ ಪ್ರಯತ್ನಗಳಿಗೆ ಯಶಸ್ಸು ನೀಡಲಿ. ಕುಮಾರಸ್ವಾಮಿಗೆ ಒಳ್ಳೆಯ ಬುದ್ದಿ ಕೊಡಲಿ. ನಾವು ಏಳು ಶಾಸಕರು ಚುನಾವಣೆಯಲ್ಲಿ ಗೆದ್ದು ಬರಲು ದೇವರು ಆಶೀರ್ವಾದ
ಮಾಡಲಿ. ಮುಂದಿನ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಜನಸಾಮಾನ್ಯರಿಗೆ ಉತ್ತಮ ಆಡಳಿತ ನೀಡಲಿ
ಎಂದು ಹೇಳಿದರು. ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ ಕುಟುಂಬದವರು ಪೂಜೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.