ಹರಳಕೆರೆ ಗ್ರಾಮದಲ್ಲಿ ಸೌಲಭ್ಯ ಮರೀಚಿಕೆ
Team Udayavani, Apr 8, 2023, 2:12 PM IST
ಮದ್ದೂರು: ತಾಲೂಕಿನ ಕೊಪ್ಪ ಹೋಬಳಿಯ ತಗ್ಗಹಳ್ಳಿ ಗ್ರಾಪಂ ವ್ಯಾಪ್ತಿಯ ಹರಳಕೆರೆ ಗ್ರಾಮವು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಎಲ್ಲೆಡೆ ಸ್ವಚ್ಛತೆ ಕಾಪಾಡಲು ಕ್ರಮವಹಿಸದ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ವಿರುದ್ಧ ಸ್ಥಳೀಯ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪ ಕೇಂದ್ರದಿಂದ 3 ಕಿ.ಮೀ. ಅಂತರದಲ್ಲಿರುವ ಹರಳಕೆರೆ ಗ್ರಾಮದಲ್ಲಿ 2 ಸಾವಿರಕ್ಕೂ ಅಧಿಕ ಜನಸಂಖ್ಯೆ ಯಿದ್ದು, 1300 ಮಂದಿ ಮತದಾರರನ್ನು ಹೊಂದಿರುವ ಗ್ರಾಮದಲ್ಲಿ ಕುಡಿಯುವ ನೀರು, ಬೀದಿದೀಪ, ರಸ್ತೆ, ಚರಂಡಿ ಅವ್ಯವಸ್ಥೆ ಹತ್ತು ಹಲವು ಸಮಸ್ಯೆಗಳನ್ನು ಹಾಸಿ ಮಲಗಿದ್ದರೂ, ಇದುವರೆವಿಗೂ ಕ್ರಮವಹಿಸದಿ ರುವುದು ಸ್ಥಳೀಯರ ಟೀಕೆಗೆ ಗುರಿಯಾಗಿದೆ.
ಮೌನಕ್ಕೆ ಶರಣಾದ ಅಧಿಕಾರಿಗಳು: ಗ್ರಾಮದಲ್ಲಿ 3 ಮಂದಿ ಚುನಾಯಿತ ಪ್ರತಿನಿಧಿಗಳಿದ್ದರೂ, ಕಳೆದ ಹಲ ವಾರು ವರ್ಷಗಳಿಂದಲೂ ಡಾಂಬರೀಕರಣ ಕಾಣದ ರಸ್ತೆಯಿಂದಾಗಿ ಸ್ಥಳೀಯರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಚರಂಡಿ ಉದ್ದಗಲಕ್ಕೂ ಆಳೆತ್ತರದ ಗಿಡಗಂಟೆಗಳು ಬೆಳೆದು, ವಿಷ ಜಂತುಗಳ ವಾಸಸ್ಥಾನವಾಗಿ ಮಾರ್ಪಟ್ಟಿದ್ದರೂ ಅಧಿಕಾರಿಗಳು ಕಂಡು ಕಾಣದಂತೆ ಮೌನಕ್ಕೆ ಶರಣಾಗಿದ್ದಾರೆ.
ಮನವಿ ಮಾಡಿದ್ದರು ಕ್ರಮವಹಿಸಿಲ್ಲ: ಗ್ರಾಮದೆಲ್ಲೆಡೆ ದುರಸ್ತಿಯಲ್ಲಿರುವ ವಿದ್ಯುತ್ ಕಂಬಗಳು, ಜೋತು ಬಿದ್ದ ತಂತಿಗಳು, ತ್ಯಾಜ್ಯ ನೀರು ರಸ್ತೆಯಲ್ಲಿ ಹರಿದಾಡುವ ಜತೆಗೆ ಆಳೆತ್ತರದ ಗುಂಡಿಗಳ ದರ್ಶನವಾಗುವ ಜತೆಗೆ ಗ್ರಾಮವು ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಸಂಬಂಧ ಅಧಿಕಾರಿಗಳಿಗೆ ಸ್ಥಳೀಯರು ಹಲವು ಭಾರಿ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗದೆ ನಿರ್ಲಕ್ಷ್ಯ ಅನುಸರಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
6 ತಿಂಗಳಿಗೊಮ್ಮೆ ಚರಂಡಿ ಸ್ವತ್ಛತೆಗೆ ಮುಂದಾಗುವು ದರಿಂದ ಇಷ್ಟು ಅದ್ವಾನಗಳಿಗೆ ಕಾರಣವಾಗಿದೆ. ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಹಲವು ಸೌಲಭ್ಯಗಳನ್ನು ಒದಗಿಸಿದ್ದರೂ, ಕೇವಲ ಕಡತಕಷ್ಟೇ ಮೀಸಲಾಗಿದೆ. ಇದುವರೆವಿಗೂ ಗ್ರಾಮಕ್ಕೆ ಸರ್ಕಾರ ನೀಡಿರುವ ಯಾವುದೇ ಸೌಲಭ್ಯಗಳು ಮನೆ ಬಾಗಿಲಿಗೆ ಆಗಮಿಸಿರುವ ಉದಾಹರಣೆಗಳು ಇಲ್ಲದಂತಾಗಿವೆ.
ಚುನಾವಣೆ ಬಳಿಕ ಇತ್ತ ತಲೆ ಹಾಕದ ನಾಯಕರು: ಕೇವಲ ಚುನಾವಣೆ ಸಂದರ್ಭದಲ್ಲಿ ಆಗಮಿಸುವ ರಾಜಕೀಯ ಮುಖಂಡರು ತಮ್ಮ ಗ್ರಾಮದ ಹಲವು ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿ, ತೆರಳುವ ನಾಯಕರು ಚುನಾವಣೆ ಮುಗಿದ ಬಳಿಕ ಇತ್ತ ತಲೆ ಹಾಕದೆ ಕೇವಲ ಕಾಟಾಚಾರಕಷ್ಟೇ ಬಂದು ಹೋಗುವ ಪ್ರವೃತ್ತಿ ಮೈಗೂಡಿಸಿಕೊಂಡಿದ್ದಾರೆ. ಕೇವಲ ಮುಖಂಡರಿಗಷ್ಟೇ ಮಾತಿಗೆ ಮಣೆಹಾಕಿ, ಸ್ಥಳದಿಂದ ತೆರಳುತ್ತಿರುವ ಪ್ರಸಂಗಗಳು ಕಳೆದ ಹಲವು ವರ್ಷಗಳಿಂದಲೂ ನಿರಂತರವಾಗಿ ನಡೆಯುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಸೌಲಭ್ಯಕ್ಕೆ ಅಲೆದಾಡುವ ಸ್ಥಿತಿ ನಿರ್ಮಾಣ: ಕರ್ತವ್ಯ ನಿರತ ಪಿಡಿಒ ಗ್ರಾಮಕ್ಕೆ ಭೇಟಿ ನೀಡಿ, ಸ್ಥಳೀಯ ಸಾರ್ವಜನಿಕರ ಮತ್ತು ಗ್ರಾಮದ ಸ್ವತ್ಛತೆಗೆ ಆದ್ಯತೆ ನೀಡದೆ, ಕೇವಲ ಕಚೇರಿಗಷ್ಟೇ ಸೀಮಿತವಾಗಿದ್ದು, ಗ್ರಾಮದಲ್ಲಿ ಕೂಲಿ ಕಾರ್ಮಿಕರಿದ್ದು ಪ್ರತಿನಿತ್ಯ ಕೂಲಿಗೆ ತೆರಳಿದರಷ್ಟೇ ದಿನದ ಬದುಕನ್ನು ದೂಡಬೇಕಾದ ಅನಿವಾರ್ಯವಿದೆ. ಈ ನಿಟ್ಟಿನಲ್ಲಿಯೂ ಸರ್ಕಾರದ ಸವಲತ್ತುಗಳನ್ನು ಪಡೆಯಲು ಗ್ರಾಪಂ ಕಚೇರಿಗೆ ಅಲೆದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಗ್ರಾಮದೆಲ್ಲೆಡೆ ಕಂಡು ಬಂದಿರುವ ಹತ್ತು ಹಲವು ಸಮಸ್ಯೆಗಳನ್ನು ಪಿಡಿಒ ಮತ್ತು ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಚರ್ಚಿಸಿ, ಸರ್ಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಮಾದರಿ ಗ್ರಾಮ ವನ್ನಾಗಿಸಬೇಕೆಂಬುದೇ ಸ್ಥಳೀಯರ ಆಗ್ರಹವಾಗಿದೆ.
ಹಲವು ವರ್ಷದಿಂದ ಗ್ರಾಮ ಮೂಲ ಸೌಲಭ್ಯಗಳಿಂದ ವಂಚಿತವಾಗಿದೆ. ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಸರ್ಕಾರದಿಂದ ಬಿಡುಗಡೆಯಾಗುವ ಅನುದಾನ ಬಳಕೆ ಮಾಡಿಕೊಂಡು ಗ್ರಾಮಾಭಿವೃದ್ಧಿಗೆ ಆದ್ಯತೆ ನೀಡಬೇಕಿದೆ. ರಸ್ತೆ ಡಾಂಬರೀಕರಣಕ್ಕೆ ಕ್ರಮವಹಿಸಬೇಕಾಗಿದೆ. ● ರಾಜು, ಹರಳಕೆರೆ
ತಗ್ಗಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಒತ್ತು ನೀಡಿ, ಈಗಾಗಲೇ ಪ್ರತಿ ಗ್ರಾಮಕ್ಕೂ ಭೇಟಿ ನೀಡಿ ಗ್ರಾಮದ ಸ್ವತ್ಛತೆ ಮತ್ತು ಮೂಲ ಸೌಲಭ್ಯಗಳನ್ನು ಕಲ್ಪಿಸಿ, ಅಭಿವೃದ್ಧಿ ಕಾಮಗಾರಿ ಕೈಗೊಂಡು ಪ್ರಸಕ್ತ ವರ್ಷ ನರೇಗಾ ಅನುದಾನವನ್ನು ಬಳಕೆ ಮಾಡಿಕೊಂಡು ಗ್ರಾಮಾಭಿವೃದ್ಧಿಗೆ ಕ್ರಮವಹಿಸಲಾಗಿದೆ. – ಸಚಿನ್, ಪಿಡಿಒ, ತಗ್ಗಹಳ್ಳಿ ಗ್ರಾಪಂ
-ಎಸ್.ಪುಟ್ಟಸ್ವಾಮಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.