ಪೊಲೀಸ್ ಸರ್ಪಗಾವಲಲ್ಲಿ ಜನಜೀವನ
Team Udayavani, Apr 9, 2020, 5:06 PM IST
ಸಾಂದರ್ಭಿಕ ಚಿತ್ರ
ಮಳವಳ್ಳಿ: ಪಟ್ಟಣದಲ್ಲಿ ಕೋವಿಡ್ 19 ಸೋಂಕು ದೃಢ ಪಟ್ಟ ಹಿನ್ನೆಲೆಯಲ್ಲಿ ಮೂರು ಕಿಲೋ ಮೀಟರ್ ವ್ಯಾಪ್ತಿ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಬಿಗಿ ಭದ್ರತೆಯಲ್ಲಿ ಜನಜೀವನ ಸಾಗಿದೆ.
ತಾಲೂಕಿನಲ್ಲಿ ಒಟ್ಟು 4 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಇನ್ನೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಪಟ್ಟಣದ ಮೂರು ಕಿ.ಮೀ. ವ್ಯಾಪ್ತಿಯನ್ನು “ನಿಯಂತ್ರಿತ ವಲಯ’ವಾಗಿ ಘೋಷಿಸಿದೆ. ಹೀಗಾಗಿ ಹೆಚ್ಚಿನ ಬಿಗಿ ಭದ್ರತೆ ಕಲ್ಪಿಸಿದ್ದು, ಯಾವುದೇ ವ್ಯಕ್ತಿಯೂ ಅನಗತ್ಯವಾಗಿ ಓಡಾಟ ನಡೆಸುವಂತಿಲ್ಲ. ಆದರೂ ಕೆಲವರು ರಸ್ತೆಗಿಳಿದಿದ್ದರಿಂದ ಅನಿರ್ವಾಯವಾಗಿ ಡಿವೈಎಸ್‌ಪಿ ಎಂ.ಜೆ.ಪೃಥ್ವಿ ಹಾಗೂ ಸಿಪಿಐ ರಮೇಶ್ ಜಂಟಿ ಕಾರ್ಯಾಚರಣೆ ನಡೆಸಿ ಲಾಠಿ ರುಚಿ ತೋರಿಸಬೇಕಾಯಿತು.
6 ಝೋನ್: ಅಗತ್ಯ ಸೇವೆಗಳನ್ನು ಜನರ ಮನೆ ಬಳಿಗೆ ತಲುಪಿಸಲು ಪುರಸಭೆ ಪಟ್ಟಣವನ್ನು 6 ಝೊàನ್‌ಗಳಾಗಿ ವಿಂಗಡಿಸಿ 38 ಅಂಗಡಿಗಳ ಮೂಲಕ ದಿನಸಿ ಸಾಮಗ್ರಿ ದೂರವಾಣಿ ಕರೆ ಮೂಲಕ ಸಾರ್ವಜನಿಕರು ಪಡೆದುಕೊಳ್ಳಬಹುದು. ತರಕಾರಿ ಜನರ ಮನೆ ಬಾಗಿಲಿಗೆ ತೆಗೆದುಕೊಂಡು ಹೋಗಲು 11 ಮಂದಿಗೆ ಅನುಮತಿ ನೀಡಲಾಗಿದೆ. ಪಟ್ಟಣದ ಜನರು ಮನೆಯಿಂದ ಹೊರ ಬರದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಚೆಕ್ ಪೋಸ್ಟ್‌ಗಳು ಬಿಗಿ:ಪಟ್ಟಣದ ಈದ್ಗಾ ಮೊಹಲ್ಲಾ ಪ್ರದೇಶದ ಸುತ್ತಮುತ್ತಲಿನ 3 ಕಿ.ಮೀ.ವ್ಯಾಪ್ತಿಯನ್ನು ಪಟ್ಟಣದ ಪೊಲೀಸರು ಬ್ಯಾರಿಕೇಟ್‌ಗಳನ್ನು ಅಳವಡಿಸಿ ಯಾವುದೇ ವಾಹನ ಮತ್ತು ವ್ಯಕ್ತಿಯು ಓಡಾಟ ನಡೆಸದಂತೆ ಭದ್ರತೆ ಕಲ್ಪಿಸಿದೆ. ಚೆಕ್‌ಪೋಸ್ಟ್ ಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜಿಸಿದ್ದು, ಅನು ಮತಿ ಪಡೆದಂತಹವವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.