ಲೋಕ ಅದಾಲತ್: 2,055 ಪ್ರಕರಣ ಇತ್ಯರ್ಥ
Team Udayavani, Dec 16, 2019, 4:59 PM IST
ಮಂಡ್ಯ: ಜಿಲ್ಲೆಯ ನ್ಯಾಯಾಲಯಗಳಲ್ಲಿ ನಡೆದ ಲೋಕ ಅದಾಲತ್ ಕಾರ್ಯಕ್ರಮದಲ್ಲಿ 2,055 ಪ್ರಕರಣಗಳನ್ನು ರಾಜಿ- ಸಂಧಾನದ ಮೂಲಕ ಇತ್ಯರ್ಥಗೊಳಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಎಚ್.ಜಿ.ವಿಜಯಕುಮಾರಿ ಹೇಳಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಆಯೋಜಿಸಿದ್ದ ಲೋಕ ಅದಾಲತ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಜಿಲ್ಲಾದ್ಯಂತ ಒಟ್ಟು 8,328 ಪ್ರಕರಣಗಳಲ್ಲಿ 2,055 ಪ್ರಕರಣಗಳನ್ನು ಪರಿಹರಿಸಲಾಗಿದೆ.ಒಟ್ಟು ಪ್ರಕರಣಗಳಲ್ಲಿ 27.77 ಕೋಟಿ ರೂ ರಾಜಿಯಾಗಿದ್ದು, ಮಂಡ್ಯದಲ್ಲೇ ಎಂಇಸಿ ಪ್ರಕರಣ ಸೇರಿದಂತೆ ಒಟ್ಟು 16.69 ಕೋಟಿ ರೂ.ರಾಜಿಯಾಗಿದೆ. ಇದಲ್ಲದೆ ಪ್ರೀ-ಲಿಟಿಗೇಷನ್ ಪ್ರಕರಣದಲ್ಲಿ ಎಸ್‌ಬಿಐ, ಸಿಂಡಿಕೇಟ್, ಇಂಡಿಯನ್, ಕಲ್ಪತರು ಕಾವೇರಿ ಗ್ರಾಮೀಣ ಬ್ಯಾಂಕ್‌ಗಳ ಅಧಿಕಾರಿಗಳೂ ಹಾಜರಾಗಿ ಕೆಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರು. ಕೆ.ಆರ್.ಪೇಟೆ ತಾಲೂಕಿನಲ್ಲಿ 170, ಮದ್ದೂರು 442, ನಾಗಮಂಗಲ 133, ಶ್ರೀರಂಗಪಟ್ಟಣ 269, ಪಾಂಡವಪುರ 175, ಮಂಡ್ಯ 758, ಮಳವಳ್ಳಿ 86 ಪ್ರಕರಣ ರಾಜಿಯಾಗಿದೆ ಎಂದರು.
ಜನಜಂಗುಳಿ: ಲೋಕ ಅದಾಲತ್ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ನ್ಯಾಯಾಲಯ ಎದುರು ನೂರಾರು ಜನರು ಹಾಜರಾಗಿದ್ದರು. ಮಧ್ಯಸ್ಥಿಕೆ ವಹಿಸುವ ಮೂಲಕ ತಮ್ಮ ಪ್ರಕರಣಗಳ ಇತ್ಯರ್ಥ ಪಡಿಸಿಕೊಂಡರು. ಕೋರ್ಟ್, ಕೇಸು ಎಂದು ವರ್ಷಗಟ್ಟಲೇ ಅಲೆಯುವ ಬದಲು ಒಂದೇ ದಿನದಲ್ಲಿ ರಾಜಿ ಮಾಡಿಕೊಂಡು ಇತ್ಯರ್ಥಪಡಿಸಿಕೊಳ್ಳಲು ದೂರದ ಊರು ಗಳಿಂದ ಬಂದಿದ್ದರು. ಗಂಟೆಗಟ್ಟಲೆ ಕಾಯ್ದು ತಮ್ಮ ಸರದಿ ಬಂದಾಗ ಮಧ್ಯಸ್ಥಿಕೆ ವಹಿಸಿ ಒಪ್ಪಿತವಾದ ನಂತರ ರಾಜಿ ಮಾಡಿ ಕೊಂಡು ತಮ್ಮ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.