Lok Sabha Elections: ದಳಪತಿ-ಸುಮಲತಾ ನಡುವೆ ಮತ್ತೆ ಬಿಗ್ ಫೈಟ್?
Team Udayavani, Dec 30, 2023, 6:15 PM IST
ಮಂಡ್ಯ: ಸಾರ್ವತ್ರಿಕ ಲೋಕಸಭೆ ಚುನಾವಣೆ ಹತ್ತಿರವಾ ಗುತ್ತಿದ್ದಂತೆ ಜಿಲ್ಲೆಯ ರಾಜಕೀಯವೂ ಗರಿಗೆದರಿ ರಂಗು ಪಡೆಯುತ್ತಿದೆ. ಇದರಿಂದ ಮತ್ತೂಮ್ಮೆ ಮಂಡ್ಯ ಲೋಕಸಭಾ ಕ್ಷೇತ್ರ ಹೈ ವೋಲ್ಟೇಜ್ ಕದನವಾಗಿ ಮಾರ್ಪಡುವ ಸಾಧ್ಯತೆಗಳು ಹೆಚ್ಚಾಗಿದೆ.
ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಆಕಾಂಕ್ಷಿತರು ಹೆಚ್ಚಿದ್ದಾರೆ. ಮತ್ತೂಂದೆಡೆ ಸಂಸದೆ ಸುಮಲತಾ ಅಂಬರೀಷ್ ದಳಪತಿಗಳ ವಿರುದ್ಧ ಮತ್ತೆ ಸಮರ ಸಾರಲು ಸಜ್ಜಾಗುತ್ತಿದ್ದಾರೆ. ಇದರಿಂದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಚರ್ಚೆಯ ಜೊತೆಗೆ ಕಾಂಗ್ರೆಸ್ ಕೂಡ ಯಾವ ದಾಳ ಉರು ಳಿಸಲಿದೆ ಎಂಬ ಲೆಕ್ಕಚಾರಗಳು ಜೋರಾಗಿದೆ.
ಪಕ್ಷೇತರ ಸ್ಪರ್ಧೆಯ ಸುಳಿವು ನೀಡಿದ ಸಂಸದೆ: ಈಗಾಗಲೇ ಸಂಸದೆ ಸುಮಲತಾ ಅಂಬರೀಷ್ ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸುಳಿವು ನೀಡಿದ್ದಾರೆ. ಮದ್ದೂರಿನಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ ಬೆಂಬಲ ನೀಡಿದ್ದೇನೆಯೇ ಹೊರತು, ಪಕ್ಷದ ತೀರ್ಮಾನಗಳಲ್ಲಿ ಭಾಗವಹಿಸಿಲ್ಲ. ಇನ್ನೂ ನಾನು ಸ್ವತಂತ್ರವಾಗಿಯೇ ಇದ್ದೇನೆ ಎಂದು ಹೇಳುವ ಮೂಲಕ ಮಂಡ್ಯದಿಂದಲೇ ಮತ್ತೆ ಪಕ್ಷ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ ಎಂಬ ಸಂದೇಶ ನೀಡಿದ್ದಾರೆ. ಅಲ್ಲದೆ, ಇತ್ತೀಚೆಗೆ ನಟ ದರ್ಶನ್ ನಟಿಸಿರುವ ಕಾಟೇರ ಸಿನಿಮಾದ ಸಾಂಗ್ ಬಿಡುಗಡೆ ಸಮಾರಂಭದಲ್ಲೂ ನನಗೆ ಇನ್ನೂ ಇಷ್ಟೊಂದು ಜನರ ಬೆಂಬಲ ಇದೆ ಎಂಬುದು ಗೊತ್ತಿರಲಿಲ್ಲ. ಮಂಡ್ಯ ಜನ ನನ್ನ ಕೈಬಿ ಟ್ಟಿದ್ದಾರೆ. ನನ್ನ ಶಕ್ತಿ ಕಳೆದುಕೊಂಡಿದ್ದೆ ಎಂದುಕೊಂಡಿದ್ದೆ. ಇಷ್ಟೊಂದು ಜನರ ಪ್ರೀತಿ ಸಿಕ್ಕಿದ್ದು, ಮುಂದೆಯೂ ನನಗೆ ಶಕ್ತಿ ನೀಡಿ ಎಂದು ಮನವಿ ಮಾಡುವ ಮೂಲಕ ಮುಂದಿನ ಲೋಕಸಭೆ ಚುನಾವಣೆಗೂ ಬೆಂಬಲಿಸುವಂತೆ ಮನವಿ ಮಾಡಿದ್ದರು.
ಕಾಟೇರ ಸಿನಿಮಾದ ಇವೆಂಟ್‌ಗೆ ಲೋಕಾ ಸ್ಪರ್ಧೆ ಲಿಂಕ್: ಕಾಟೇರ ಸಿನಿಮಾದ ಇವೆಂಟ್ ಕಾರ್ಯಕ್ರಮದ ಆಯೋಜನೆಗೂ ಸುಮಲತಾ ಮುಂದಿನ ಲೋಕಸಭೆ ಚುನಾವಣೆ ಸ್ಪರ್ಧೆಗೂ ಲಿಂಕ್ ಇಟ್ಟುಕೊಂಡು ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ. ಅದರಲ್ಲೂ ರೈತ ದಿನಾಚರಣೆ ದಿನದಂದೇ ಕಾರ್ಯಕ್ರಮ ಆಯೋಜಿಸುವ ಮೂಲಕ ರೈತರ ಸೆಳೆಯುವ ಪ್ರಯತ್ನ ನಡೆದಿದೆ. ಮೊದಲೇ ಎಲ್ಲ ರೀತಿಯ ತಯಾರಿಗಳು ನಡೆದಿದ್ದವು. ಅದರಂತೆ ಕಾರ್ಯಕ್ರಮ ನಡೆಸಲಾಗಿದೆ. ಅಲ್ಲದೆ, ನಟ ದರ್ಶನ್ ಕೂಡ ಮುಂದೆಯೂ ಸುಮಲತಾ ಅಂಬರೀಷ್ ಅವರಿಗೆ ಬೆಂಬಲ ನೀಡಬೇಕು ಎಂದು ಹೇಳುವ ಮೂಲಕ ಮುಂದಿನ ಲೋಕಸಭೆ ಸ್ಪರ್ಧೆ ಖಚಿತ ಎಂಬ ಸಂದೇಶ ನೀಡಿದ್ದಾರೆ.
ಶಾಂಭವಿ, ರಮ್ಯಾ, ಧನಲಕ್ಷ್ಮೀ ಯಾರಿಗೆ ಅಭಯ ಹಸ್ತ?: ಮೈತ್ರಿ ಅಭ್ಯರ್ಥಿಯಾಗಿ ಪ್ರಭಾವಿ ರಾಜಕಾರಣಿ ಕಣಕ್ಕಿಳಿದರೆ ಅವರನ್ನು ಸಮರ್ಥವಾಗಿ ಎದುರಿಸುವ ಅಭ್ಯರ್ಥಿ ಸ್ಪರ್ಧೆಗಿಳಿಸುವುದು ಕಾಂಗ್ರೆಸ್‌ಗೆ ಅನಿವಾರ್ಯವಾಗಲಿದೆ. ಈಗಾಗಲೇ ಕಾಂಗ್ರೆಸ್‌ನಲ್ಲಿ ಮಾಜಿ ಸಿಎಂ ಎಸ್.ಎಂ.ಕೃಷ್ಣ ಪುತ್ರಿ ಶಾಂಭವಿ, ಮಾಜಿ ಸಂಸದೆ ನಟಿ ರಮ್ಯಾ, ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಪತ್ನಿ ಧನಲಕ್ಷ್ಮೀ ಹೆಸರು ಮುಂಚೂಣಿಯಲ್ಲಿದೆ. ಮೈತ್ರಿ ಅಭ್ಯರ್ಥಿ ವಿರುದ್ಧ ಗೆಲ್ಲಲು ಪ್ರಭಾವಿ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕಾಗಿದೆ.
ಕಾಂಗ್ರೆಸ್ ಸೇರುತ್ತಾರಾ ಹಾಲಿ ಸಂಸದೆ?: ಮತ್ತೂಂದೆಡೆ ಸಂಸದೆ ಸುಮಲತಾ ಅಂಬರೀಷ್ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಾಗಿರುವುದರಿಂದ ಸುಮಲತಾಗೆ ಬಿಜೆಪಿ ಟಿಕೆಟ್ ಕೈತಪ್ಪುವುದು ಬಹುತೇಕ ಖಚಿತವಾಗಲಿದೆ. ಆದ್ದರಿಂದ ಸುಮಲತಾ ಕಾಂಗ್ರೆಸ್ ಪಕ್ಷಕ್ಕೆ ಬರುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಸುಮಲತಾ ಕಾಂಗ್ರೆಸ್‌ಗೆ ಬಂದರೆ ಬಿಜೆಪಿಯ ಮೈತ್ರಿ ಅಸಮಾಧಾನಿತ ಕಾರ್ಯಕರ್ತರ ಮತಗಳನ್ನು ಸೆಳೆಯಬಹುದೆಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಆದರೆ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸುಮಲತಾ ಬಿಜೆಪಿಗೆ ಬೆಂಬಲ ನೀಡಿದ್ದು, ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಾಗುವಂತೆ ಮಾಡಿತ್ತು. ಇದು ಸುಮಲತಾ ಪಕ್ಷ ಸೇರ್ಪಡೆಯ ವಿರೋಧಕ್ಕೆ ಕಾರಣವಾಗಲಿದೆ.
ಟಿಕೆಟ್ ರೇಸ್‌ನಲ್ಲಿ ತಮ್ಮಣ್ಣ, ಪುಟ್ಟರಾಜು, ಸುರೇಶ್‌ಗೌಡ : ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಲು ಘಟಾನುಘಟಿ ನಾಯಕರ ಹೆಸರು ಕೇಳಿಬರುತ್ತಿದೆ. ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು ಹಾಗೂ ಮಾಜಿ ಶಾಸಕ ಕೆ.ಸುರೇಶ್‌ಗೌಡ ಸಹ ರೇಸ್‌ನಲ್ಲಿದ್ದಾರೆ. ಇದರ ನಡುವೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ನಿಖೀಲ್‌ಗೂ ಆಫರ್ ನೀಡುತ್ತಿದ್ದಾರೆ. ಜಿಲ್ಲೆಯ ಜೆಡಿಎಸ್‌ನಲ್ಲಿ ನಾಯಕರ ನಡುವಿನ ಭಿನ್ನಾಭಿಪ್ರಾಯಕ್ಕೆ ಮುಲಾಮು ಹಚ್ಚಲು ವರಿಷ್ಟರೇ ಕಣಕ್ಕಿಳಿಯಬೇಕೆಂಬ ಮಾತುಗಳು ಕೇಳಿಬರುತ್ತಿವೆ.
ದಾಳ ಉರುಳಿಸಲಿದ್ದಾರಾ ದಳಪತಿಗಳು? ; ಸುಮಲತಾ ಒಂದು ವೇಳೆ ಪಕ್ಷೇತರರಾಗಿ ಕಣಕ್ಕಿಳಿದರೆ ದಳಪತಿಗಳು ಯಾವ ದಾಳ ಉರುಳಿಸಲಿದ್ದಾರೆ ಎಂಬ ಕುತೂಹಲ ಹೆಚ್ಚಿಸಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಕೈ-ದಳ ಮೈತ್ರಿ ಅಭ್ಯರ್ಥಿಯಾಗಿದ್ದರೂ ದಳಪತಿಗಳು ಸೋಲಬೇಕಾಯಿತು. ಈ ಬಾರಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಆದರೆ, ಕ್ಷೇತ್ರದಲ್ಲಿ ಸ್ಥಳೀಯ ಮಟ್ಟದ ದಳ-ಬಿಜೆಪಿ ಕಾರ್ಯಕರ್ತರಲ್ಲಿ ಮೈತ್ರಿಗೆ ಅಪಸ್ವರಗಳು ಕೇಳಿಬರುತ್ತಿವೆ. ಇದು ಮತ್ತೂಮ್ಮೆ ಉಲ್ಟಾ ಹೊಡೆದು ಕಳೆದ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ ಮರುಕಳುಹಿಸಿದಂತೆ ತಡೆಯಲು ದಳಪತಿಗಳು ರಾಜಕೀಯ ರಣತಂತ್ರವನ್ನೇ ಹೆಣೆಯಬೇಕಾಗಿದೆ.
ಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಎಚ್.ಡಿ.ಕುಮಾರಸ್ವಾಮಿ : ಜೆಡಿಎಸ್ ಹಾಗೂ ಬಿಜೆಪಿ ಈಗಾಗಲೇ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಪಾಲಾಗುವುದು ಖಚಿತವಾಗಿದೆ. ಅದರಂತೆ ಇಲ್ಲಿ ದಳಪತಿಗಳ ದರ್ಬಾರ್ ಮುಂದುವರಿಯಲಿದೆ. ಲೋಕಸಭೆ ಚುನಾವಣೆಗೆ ಎರಡು ಪಕ್ಷಗಳ ಒಮ್ಮತದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲ ಹೆಚ್ಚಿದ್ದು, ಈಗಾಗಲೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರೇ ಅಭ್ಯರ್ಥಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಅದಕ್ಕೆ ಪೂರಕವೆಂಬ ಕುಮಾರಸ್ವಾಮಿ ಕ್ಷೇತ್ರ ಸಂಚರಿಸುತ್ತಿದ್ದಾರೆ. ಕಾರ್ಯಕರ್ತರ ಮದುವೆ, ಶುಭ, ಸಮಾರಂಭಗಳಿಗೆ ಭೇಟಿ ನೀಡುತ್ತಿದ್ದಾರೆ. ಜೊತೆಗೆ ಕಾರ್ಯಕರ್ತರ ಮನೆಗಳಿಗೂ ಎಡತಾಕುತ್ತಿದ್ದಾರೆ.
– ಎಚ್.ಶಿವರಾಜು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.