Loksabha Election: ಲೋಕ ಚುನಾವಣೆ; ಮೈತ್ರಿ ಟಿಕೆಟ್‌ ಯಾರಿಗೆ?


Team Udayavani, Feb 10, 2024, 6:40 PM IST

Loksabha Election: ಲೋಕ ಚುನಾವಣೆ; ಮೈತ್ರಿ ಟಿಕೆಟ್‌ ಯಾರಿಗೆ?

ಮಂಡ್ಯ: ಲೋಕಸಭೆ ಚುನಾವಣೆ ಇನ್ನೆರಡು ತಿಂಗಳು ಬಾಕಿ ಇದೆ. ಮಂಡ್ಯ ಮೈತ್ರಿ ಟಿಕೆಟ್‌ಗೆ ಸಮರ ಆರಂಭಗೊಂಡಿದೆ. ಇದರ ನಡುವೆ ಮೈತ್ರಿ ಅಭ್ಯರ್ಥಿಯಾಗಿ ಪುಟ್ಟರಾಜು ಹೆಸರನ್ನು ಜೆಡಿಎಸ್‌ ವರಿಷ್ಠರು ಅಂತಿ ಮಗೊಳಿಸಿದ್ದಾರೆ ಎಂದು ಆ ಪಕ್ಷದ ನಾಯಕರೇ ಹೇಳುತ್ತಿದ್ದಾರೆ.

ಇತ್ತ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು)ಅವರ ಒಬ್ಬರ ಹೆಸರು ಅಂತಿಮಗೊಳಿಸಿ ಸ್ಥಳೀಯ ನಾಯಕರು ಹೈಕಮಾಂಡ್‌ಗೆ ಕಳುಹಿಸಿದ್ದಾರೆ. ಹೀಗಾಗಿ ಮಂಡ್ಯದಲ್ಲಿ ಪುಟ್ಟರಾಜು ಮತ್ತು ವೆಂಕಟರಮಣೇಗೌಡ ನಡುವೆ ಸೆಣೆಸಾಟ ನಡೆಯಲಿದೆ ಎಂಬ ಮಾತು ಜಿಲ್ಲೆಯ ರಾಜಕೀಯವಲಯದಲ್ಲಿ ಕೇಳಿ ಬರುತ್ತಿದೆ.

ಈ ಮಧ್ಯೆ ಮುಂದಿನ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆ ಸ್‌ ಸೋಲಿಸಬೇಕು ಎಂದು ಬಿಜೆಪಿ ಹಾಗೂ ಜೆಡಿ ಎಸ್‌ ಮೈತ್ರಿ ಮಾಡಿಕೊಂಡಿದೆ. ಆದರೆ, ಜಿಲ್ಲೆಯಲ್ಲಿ ಮೈತ್ರಿ ಯಾಗಿ ಮೊದಲ ಲೋಕಸಭೆ ಚುನಾವಣೆಯ ಲ್ಲಿಯೇ ಟಿಕೆಟ್‌ಗಾಗಿ ಬಿರುಕು ಮೂಡುವಂತೆ ಮಾಡಿದೆ.

ಬಿಜೆಪಿ ನಾಯಕರು ಪಟ್ಟು: ಮೈತ್ರಿಯಾದ ಮೊದ ಮೊದಲು ಜಿಲ್ಲೆಯಲ್ಲಿ ಜೆಡಿಎಸ್‌ ಪ್ರಾಬಲ್ಯ ಹೆಚ್ಚುವಂತೆ ಮಾಡಿತ್ತು. ಮೈತ್ರಿ ಟಿಕೆಟ್‌ ನಿರ್ಧಾರವೂ ಜೆಡಿಎಸ್‌ ವರಿಷ್ಠರದ್ದೇ ಎಂದು ಬಿಜೆಪಿ ನಾಯಕರು ಹಲವು ಬಾರಿ ಉತ್ತರಿಸಿದ್ದರು. ಆದರೆ, ಇದೀಗ ಜಿಲ್ಲೆಯ ಬಿಜೆಪಿ ನಾಯಕರು ಜೆಡಿಎಸ್‌ಗೆ ಕ್ಷೇತ್ರ ಬಿಟ್ಟುಕೊಡದಂತೆ ಪಟ್ಟು ಹಿಡಿದಿರುವುದು ಮೈತ್ರಿ ಬಿರುಕಿಗೆ ಪ್ರಮುಖ ಕಾರಣವಾಗಿದೆ.

ಧ್ವಜ ವಿವಾದದ ನಂತರ ಹೆಚ್ಚಿದ ಒತ್ತಡ: ಕೆರಗೋಡು ಗ್ರಾಮದ ಕೇಸರಿ ಹನುಮ ಧ್ವಜ ವಿವಾದದ ನಂತರ ಬಿಜೆಪಿ ನಾಯಕರು ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಜ.29ರಂದು ನಡೆದ ಪಾದಯಾತ್ರೆಗೆ ಜೆಡಿಎಸ್‌ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿತ್ತು. ಅಂದು ನಡೆದ ಪಾದಯಾತ್ರೆಯಲ್ಲೂ ಇಡೀ ಕೇಸರಿ ಶಾಲುಗಳದ್ದೇ ಸದ್ದು ಮಾಡಿತ್ತು. ಅಲ್ಲದೆ, ಜೆಡಿಎಸ್‌ ನಾಯಕ ಹಾಗೂ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಬಿಜೆಪಿಯ ಕೇಸರಿ ಶಾಲು ಧರಿಸುತ್ತಿದ್ದಂತೆ ಬೇರೆ ಸಂದೇಶವೇ ರವಾನೆಯಾಗಿತ್ತು. ಜೆಡಿಎಸ್‌ ಬಿಜೆಪಿಯೊಂದಿಗೆ ವಿಲೀನಗೊಂಡಂತೆ ಭಾಸವಾಗಿತ್ತು. ಇದು ಜಿಲ್ಲೆಯಲ್ಲಿ ಬಿಜೆಪಿ ಬೆಳವಣಿಗೆಗೆ ಮುನ್ನುಡಿ ಬರೆದಂತಿತ್ತು.

ಬಿಜೆಪಿ ಮುಖಂಡರಿಂದ ಎರಡು ಸಭೆ: ಧ್ವಜ ವಿವಾದದ ಬಳಿಕ ಬಿಜೆಪಿ ಮುಖಂಡರು ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ಮೈತ್ರಿ ಟಿಕೆಟ್‌ ನಮ್ಮ ಪಕ್ಷಕ್ಕೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿ ಹಿರಿಯ ಮುಖಂಡ ಹಾಗೂ 2018ರ ಲೋಕಸಭೆ ಉಪಚುನಾವಣೆಯ ಪರಾಜಿತ ಅಭ್ಯರ್ಥಿ ಡಾ.ಸಿದ್ದರಾಮಯ್ಯ ನೇತೃತ್ವದಲ್ಲಿ ಟಿಕೆಟ್‌ಗಾಗಿ ಸಭೆ ನಡೆಸಲಾಗಿತ್ತು. ಅದಾದ ಬಳಿಕ ಪಾಂಡವಪುರದಲ್ಲಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಹಾಸನದ ಮಾಜಿ ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಎರಡೂ ಸಭೆಯಲ್ಲಿ ಬಿಜೆಪಿಗೆ ಕ್ಷೇತ್ರ ಉಳಿಸಿಕೊಳ್ಳಬೇಕು. ನಮ್ಮ ಪಕ್ಷದ ಆಕಾಂಕ್ಷಿತರಿಗೆ ಮೈತ್ರಿ ಟಿಕೆಟ್‌ ನೀಡಬೇಕು ಎಂದು ಒತ್ತಾಯ ಕೇಳಿ ಬಂದಿದೆ.

ಕಾಂಗ್ರೆಸ್‌ ಕದತಟ್ಟಿದ ಮಾಜಿ ಸಚಿವ ನಾರಾಯಣಗೌಡ: ಮೊದಲಿನಿಂದಲೂ ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಜೆಡಿಎಸ್‌ ವಿರೋಧಿ ಸಿಕೊಂಡು ಬರುತ್ತಲೇ ಇದ್ದರು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಜೆಡಿಎಸ್‌ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿತು. ಇದರಿಂದ ಮತ್ತಷ್ಟು ಕೆರಳಿದ ಕೆ.ಸಿ.ನಾರಾಯಣಗೌಡ ಮೈತ್ರಿ ವಿರೋಧಿಸಿದರು. ನಂತರ ಮಂಡ್ಯ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಬಾರದು. ಹಾಲಿ ಸಂಸದೆ ಸುಮಲತಾಅಂಬರೀಷ್‌ ಪರ ಬ್ಯಾಟ್‌ ಬೀಸಿದ್ದರು. ಒಂದು ವೇಳೆ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಟ್ಟರೆ ಮುಂದಿನ ನಿರ್ಧಾರ ತಿಳಿಸಲಾಗುವುದು ಎಂದು ಸ್ಪಷ್ಟವಾಗಿ ಹೇಳಿದ್ದರು. ಆದರೆ, ಬಹುತೇಕ ಮಂಡ್ಯ ಕ್ಷೇತ್ರ ಜೆಡಿಎಸ್‌ ತೆಕ್ಕೆಗೆ ಹೋಗುವುದು ಖಚಿತವಾಗುತ್ತಿದ್ದಂತೆ ನಾರಾಯಣ ಗೌಡ ಕಾಂಗ್ರೆಸ್‌ ಬಾಗಿಲು ಬಡಿದಿದ್ದಾರೆ. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೌಪ್ಯವಾಗಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಕಾಂಗ್ರೆಸ್‌ ಸೇರುವುದು ಖಚಿತ ಎಂದು ಆಪ್ತ ಮೂಲಗಳು ತಿಳಿಸಿವೆ.

ರಾಷ್ಟ್ರ ಮಟ್ಟದಲ್ಲಿ ಪ್ರಭಾವ ಬಳಸಲು ಮುಂದಾದ ಸುಮಲತಾ: ಜೆಡಿಎಸ್‌ ರಾಜಕೀಯ ವೈರಿಯಾಗಿರುವ ಸಂಸದೆ ಸುಮಲತಾ ಬಿಜೆಪಿಯಿಂದ ಸ್ಪ ರ್ಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ರಾಜ್ಯ ನಾಯಕರು ಸರಿಯಾಗಿ ಸ್ಪಂದಿಸದ ಹಿನ್ನೆಲೆಯಲ್ಲಿ ರಾಷ್ಟ್ರಮಟ್ಟದಲ್ಲೇ ತಮ್ಮ ಪ್ರಭಾವ ಬಳಸಲು ಮುಂದಾಗಿದ್ದಾರೆ. ಅದಕ್ಕಾಗಿ ಬಿಜೆಪಿ ನಾಯಕರನ್ನು ಭೇಟಿ ಮಾಡುವ ಮೂಲಕ ಟಿಕೆಟ್‌ ಲಾಬಿಗೆ ಮುಂದಾಗಿದ್ದಾರೆ. ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಭೇಟಿಯಾಗಿ ಮಂಡ್ಯ ಕ್ಷೇತ್ರದ ರಾಜಕೀಯ ಚರ್ಚೆ ನಡೆಸುವುದರ ಜೊತೆಗೆ ಸ್ಪರ್ಧೆಗೆ ಟಿಕೆಟ್‌ ನೀಡುವಂತೆ ಒತ್ತಾಯ ಮಾಡಿದ್ದಾರೆ. ಆದರೆ, ಬಿಜೆಪಿ ಮೂಲಗಳ ಪ್ರಕಾರ ಟಿಕೆಟ್‌ ನೀಡಲು ಸಾಧ್ಯವಿಲ್ಲ. ಮುಂದೆ ವಿಧಾನ ಪರಿಷತ್‌ ಸದಸ್ಯ ಅಥವಾ ರಾಜ್ಯಸಭಾ ಸ್ಥಾನ ನೀಡಲಾಗುವುದು ಎಂದು ಭರವಸೆ ನೀಡುವ ಮೂಲಕ ಸಮಾಧಾನ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ. ಒಂದು ವೇಳೆ ಸುಮಲತಾ ಒಪ್ಪಿಕೊಳ್ಳದಿದ್ದರೆ ಪಕ್ಷೇತರ ಸ್ಪರ್ಧೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂದು ತಿಳಿದು ಬಂದಿದೆ.

ಜಿಲ್ಲೆಯ ಬಿಜೆಪಿ ನಾಯಕರ ಒಗ್ಗೂಡಿಸಿದ ಸ್ಪರ್ಧಾಕಾಂಕ್ಷಿ ಡಾ.ಸಿದ್ದರಾಮಯ್ಯ : ಲೋಕಸಭಾ ಚುನಾವಣೆಗೆ ಜಿಲ್ಲೆಯ ಬಿಜೆಪಿ ಹಿರಿಯ ಮುಖಂಡ ಡಾ.ಸಿದ್ದರಾಮಯ್ಯ ಸ್ಪರ್ಧೆಗೆ ಮುಂದಾಗಿದ್ದಾರೆ. ಜಿಲ್ಲಾ, ರಾಜ್ಯ ಮಟ್ಟದಲ್ಲೂ ಟಿಕೆಟ್‌ಗಾಗಿ ಲಾಬಿ ನಡೆಸಲು ಮುಂದಾಗಿರುವ ಇವರು, ಜಿಲ್ಲಾ ಮಟ್ಟದ ಮುಖಂಡರು, ಕಾರ್ಯಕರ್ತರ ಸಭೆ ನಡೆಸುವ ಮೂಲಕ ಒಗ್ಗಟ್ಟು ಪ್ರದರ್ಶಿಸುತ್ತಿದ್ದಾರೆ. ಒಗ್ಗಟ್ಟಿನ ಮೂಲಕ ಜಿಲ್ಲಾ ಹಾಗೂ ರಾಜ್ಯಮಟ್ಟದ ನಾಯಕರ ಮೂಲಕ ಟಿಕೆಟ್‌ ಪಡೆ ಯ ಲು ಕಸರತ್ತು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ನಡೆಸಿದ ಸಭೆಗೆ ಬಹುತೇಕ ಜಿಲ್ಲಾ ನಾಯಕರು ಭಾಗವಹಿಸಿ ಡಾ.ಸಿದ್ದರಾಮಯ್ಯ ಅವರಿಗೆ ಟಿಕೆಟ್‌ ನೀಡುವಂತೆ ಆಗ್ರಹಿಸಿದ್ದಾರೆ.

ವೆಂಕಟರಮಣೇಗೌಡ ಹೆಸರು ಘೋಷಣೆಯೊಂದೇ ಬಾಕಿ: ಕಾಂಗ್ರೆಸ್‌ ಅಭ್ಯರ್ಥಿಯಾಗಿ ಉದ್ಯಮಿ ಹಾಗೂ ಬಿಲ್ಡರ್‌ ಆಗಿರುವ ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಹೆಸರು ಅಂತಿಮವಾಗಿದೆ. ಜಿಲ್ಲೆಯ ಆಕಾಂಕ್ಷಿತರ ಪಟ್ಟಿಯಲ್ಲಿ ವೆಂಕಟರಮಣೇಗೌಡ ಅವರ ಒಂದೇ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಾಗಿದ್ದು, ಅಂತಿಮ ಘೋಷಣೆ ಬಾಕಿ ಉಳಿದಿದೆ. ಇದರಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ಕಣಕ್ಕಿಳಿಯುವುದು ಖಚಿತ ಎಂದು ಪಕ್ಷದ ಮೂಲಗಳು ತಿಳಿಸಿವೆ.

ವೆಂಕಟರಮಣೇಗೌಡ ಗೌರಿಬಿದನೂರು ಶಾಸಕ ಪುಟ್ಟಸ್ವಾಮಿಗೌಡ ಅವರ ಸಹೋದರ ಆಗಿದ್ದು, ಶಾಸಕ ಶರತ್‌ಬಚ್ಚೇಗೌಡರಿಗೆ ಚಿಕ್ಕಮಾವ. ರಾಜಕೀಯದಲ್ಲಿ ಗುರುತಿಸಿಕೊಳ್ಳದಿದ್ದರೂ ರಾಜಕೀಯ ನಂಟು ಹೊಂದಿದ್ದಾರೆ. ಅಲ್ಲದೆ, ಸಚಿವ ಚಲುವರಾಯಸ್ವಾಮಿ ಆಪ್ತ ಬಳಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಜಿಲ್ಲೆಯ ಕಾಂಗ್ರೆಸ್‌ ನಾಯಕರು ಮೈತ್ರಿ ಅಭ್ಯರ್ಥಿ ಸೋಲಿಸಲು ವೆಂಕಟರಮಣೇಗೌಡ(ಸ್ಟಾರ್‌ ಚಂದ್ರು) ಅವರನ್ನು ಕಣಕ್ಕಿಳಿಸುವ ಮೂಲಕ ರಾಜಕೀಯ ರಣತಂತ್ರ ಹೆಣೆದಿದ್ದಾರೆ.

ಮೈತ್ರಿ ಅಭ್ಯರ್ಥಿಯಾಗಿ ಪುಟ್ಟರಾಜು: ನಿಖಿಲ್‌ ಸಾರಥ್ಯ?: ಜೆಡಿಎಸ್‌ ತನ್ನ ಮೈತ್ರಿ ಪಕ್ಷ ಬಿಜೆಪಿಯಲ್ಲಾಗುತ್ತಿರುವ ಬೆಳವಣಿಗೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ನಡುವೆ ಜೆಡಿಎಸ್‌ನಿಂದ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ ಸಿ.ಎಸ್‌.ಪುಟ್ಟರಾಜು ಹೆಸರು ಅಂತಿಮಗೊಂಡಿದೆ. ಶೀಘ್ರದಲ್ಲಿಯೇ ಘೋಷಣೆಯಾಗಲಿದ್ದು, ನಿಖಿಲ್‌ ಸಾರಥ್ಯದಲ್ಲಿ ಚುನಾವಣೆ ನಡೆಯಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಜಿಲ್ಲೆಯ ಜೆಡಿಎಸ್‌ ನಾಯಕರಲ್ಲಿ ಒಗ್ಗಟ್ಟಿನ ಕೊರತೆ ಹಾಗೂ ಸಣ್ಣಪುಟ್ಟ ಭಿನ್ನಾಭಿಪ್ರಾಯವನ್ನು ಖುದ್ದು ವರಿಷ್ಠರೇ ಸರಿಪಡಿಸುವ ಹಿನ್ನೆಲೆಯಲ್ಲಿ ನಿಖೀಲ್‌ಗೆ ಸಾರಥ್ಯ ನೀಡಿದ್ದಾರೆ. ಅದಕ್ಕಾಗಿ ನಿಖಿಲ್‌ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಿದ್ದಾರೆ. ಈ ಚುನಾವಣೆ ಜೆಡಿಎಸ್‌ಗೂ ಪ್ರತಿಷ್ಠೆಯಾಗಿರುವುದರಿಂದ ಗಂಭೀರವಾಗಿ ಪರಿಗಣಿಸಿರುವ ದಳಪತಿಗಳು ಕಾಂಗ್ರೆಸ್‌ ಸೋಲಿಸಲು ರಾಜಕೀಯ ರಣತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ಮುಂದಾಗಿದ್ದಾರೆ. ಜಿಲ್ಲೆಯ ಎಲ್ಲ ಮಾಜಿ ಶಾಸಕರು, ಮುಖಂಡರನ್ನು ಒಂದೇ ವೇದಿಕೆಗೆ ಕರೆ ತರುವ ಮೂಲಕ ಒಗ್ಗಟ್ಟು ಪ್ರದರ್ಶಿಸಿ ಜೆಡಿಎಸ್‌ ಭದ್ರಕೋಟೆ ಎಂಬುದನ್ನು ಮತ್ತೂಮ್ಮೆ ಸಾಬೀತುಪಡಿಸಲು ಕಸರತ್ತು ಆರಂಭಿಸಿದ್ದಾರೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.