16 ದಿನದಿಂದ ಧರಣಿ ಕುಳಿತರೂ ಕೇಳ್ಳೋರಿಲ್ಲ


Team Udayavani, Sep 25, 2019, 4:21 PM IST

mandya-tdy-2

ಮದ್ದೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾವೇರಿ ನೀರಾವರಿ ನಿಗಮದ ಕಚೇರಿ ಬಳಿ 16 ದಿನಗಳಿಂದ ನೀರು ಗಂಟೆಗಳು ಧರಣಿ ಕುಳಿತು ಪ್ರತಿಭಟಿಸಿದರೂ ಸಮಸ್ಯೆ ಕೇಳ್ಳೋರಿಲ್ಲ ಎಂದು ಅಧಿಕಾರಿಗಳು, ಜನಪ್ರತಿನಿಧಿಗಳ ಕ್ರಮಕ್ಕೆ ರೊಚ್ಚಿಗೆದ್ದ ಪ್ರತಿಭಟನಾಕಾರರು ವಿಷದ ಬಾಟಲ್‌ ನೊಂದಿಗೆ ಧರಣಿ ಮುಂದುವರಿಸಿದ್ದಾರೆ.

ಸಮಸ್ಯೆಗೆ ಸ್ಪಂದಿಸದಿದ್ದರೆ ವಿಷ ಸೇವನೆ: 16 ದಿನಗಳಿಂದಲೂ ನಿರಂತರ ಪ್ರತಿಭಟನೆ ಕುಳಿತಿದ್ದೇವೆ. ನೀರುಗಂಟಿಗಳ ಸಮಸ್ಯೆ ಆಲಿಸಲು ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕಾಗಮಿಸುತ್ತಿಲ್ಲ. ಇನ್ನು ಜನಪ್ರತಿನಿಧಿಗಳ ಕುರಿತು ಹೇಳುವುದೇ ಬೇಡ. ಅವರಿಗೆ ಅಧಿಕಾರ ದಾಹ. ಕುರ್ಚಿ ಉಳಿಸಿಕೊಳ್ಳುವ ಹೋರಾಟಗಳ ಮಧ್ಯೆ ನೌಕರರು, ಬಡವರು, ಜನಸಾಮಾನ್ಯ ಸಮಸ್ಯೆಗಳನ್ನು ಆಲಿಸುವ, ಈಡೇರಿಸುವ ಸಮಯವೇ ಅವರಿಗಿರಲ್ಲ. ಆದ್ದರಿಂದಲೇ ನಾವೇ ಒಂದು ನಿರ್ಧಾರಕ್ಕೆ ಬಂದು ಉಪವಾಸ ಸತ್ಯಾಗ್ರಹ ಕೈಗೊಳ್ಳುತ್ತೇವೆ. ಅಹೋರಾತ್ರಿ ಧರಣಿಗೂ ಮುಂದಾಗಿದ್ದೇವೆ. ಇನ್ನೆರಡು ದಿನಗಳಲ್ಲಿ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ವಿಷ ಕುಡಿದು ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕಳೆದ ಆರು ತಿಂಗಳಿಂದವೇತನ ವಿತರಿಸದ ಹಿನ್ನೆಲೆ ಯಲ್ಲಿ ನೌಕರರ ಜೀವನ ನಿರ್ವಹಣೆ ಕಷ್ಟಕರವಾಗಿದೆ ಎಂದಿದ್ದಾರೆ.

ವೇತನ ಇಲ್ಲದೆ ಬದುಕು ದುಸ್ತರ: ಕರ್ತವ್ಯ ನಿರತ 47 ಮಂದಿ ನೀರುಗಂಟಿಗಳಿಗೆ ವೇತನ ಬಿಡುಗಡೆ, ಇಎಸ್‌ಐ ಮತ್ತು ಪಿಎಫ್ ಹಾಗೂ ಮೂಲ ಸೌಲಭ್ಯ ನೀಡದೆ ಇಲಾಖೆ ಅಧಿಕಾರಿಗಳು ವಂಚಿಸುತ್ತಿದ್ದಾರೆ. ಕಳೆದ ಆರು ತಿಂಗಳಿಂದ ವೇತನ ವಿತರಿಸದ ಹಿನ್ನೆಲೆಯಲ್ಲಿ ನೌಕರರ ಜೀವನ ನಿರ್ವಹಣೆ ಕಷ್ಟವಾಗಿದೆ. ಕುಟುಂಬ ಪೋಷಣೆ, ಮಕ್ಕಳ ವಿದ್ಯಾಭ್ಯಾಸ, ಹಿರಿಯರ ಆಸ್ಪತ್ರೆ ವೆಚ್ಚಗಳಿಗೆ ಹಣವಿಲ್ಲದೆ ಪರದಾಡುವಂತಾಗಿದೆ ಎಂದು ದೂರಿದರು.

ಮೂಲ ಸೌಲಭ್ಯ ಕಲ್ಪಿಸಿ: ಮಳವಳ್ಳಿ ಮತ್ತು ಬನ್ನೂರು ವಿಭಾಗದ ನೀರುಗಂಟಿಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗಿದೆ. ಅದೇ ಮಾದರಿಯಲ್ಲಿ ಇಲ್ಲಿನ ಕಾವೇರಿ ನೀರಾವರಿ ನಿಗಮದ ನೀರುಗಂಟಿಗಳಿಗೂ ಮೂಲ ಸೌಲಭ್ಯ ಕಲ್ಪಿಸಿಕೊಡುವಂತೆ ಮನವಿ ಮಾಡುತ್ತಿದ್ದೇವೆಯೋ ಹೊರತು, ನಾವೇನೂ ಈಡೇರಿಸ ಲಾಗದ್ದೇನೂ ಅಲ್ಲ. ಸಣ್ಣ ಸಮಸ್ಯೆಗಳಿಗೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುವ ಮೂಲಕ ನೀರುಗಂಟಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಜಿಲ್ಲಾ ಹಾಗೂ ತಾಲೂಕು ಆಡಳಿತ ಅಗತ್ಯ ಕ್ರಮ ವಹಿಸದಿದ್ದಲ್ಲಿ ಮುಂದಾಗುವ ಅನಾಹುತಕ್ಕೆ ಇಲಾಖೆ ಅಧಿಕಾರಿಗಳೇ ನೇರ ಹೊಣೆಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿ ಪ್ರತಿಭಟನೆ ಮುಂದುವರಿಸಿದರು. ಪ್ರತಿಭಟನೆಯಲ್ಲಿ ನೀರುಗಂಟಿಗಳಾದ ರವಿ, ಜಗದೀಶ್‌, ಶಂಕರ್‌ರಾವ್‌, ಕೆ.ಸುರೇಶ್‌, ಪುಟ್ಟೇಗೌಡ, ಬಸವರಾಜು, ನರಸಿಂಹಯ್ಯ, ರಘು, ರಮೇಶ್‌, ಅಲಮೇಲಮ್ಮ, ನಾಗೇಶ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

1-IFFI

IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ

1-ree

IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!

isrel netanyahu

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

arest

Kumbla: ಯುವಕನನ್ನು ಅಪಹರಿಸಿ ಕೊಲೆಗೆ ಯತ್ನ; ಬಂಧನ

crime

Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

road-mishap

Udupi: ಪಿಕಪ್‌ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.