ಪ್ರಕರಣ ಇತ್ಯರ್ಥದಿಂದ ಹಣ, ಸಮಯ ಉಳಿತಾಯ
Team Udayavani, Jul 16, 2021, 8:55 PM IST
ಮಂಡ್ಯ: ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವಪ್ರಕರಣಗಳನ್ನು ಶೀಘ್ರವಾಗಿ ಪರಿಹಾರಪಡೆದುಕೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಆ.14ರಂದು ಮೆಗಾ ಲೋಕಅದಾಲತ್ ಆಯೋಜಿಸಲಾಗಿದೆ ಎಂದು ಪ್ರಧಾನಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಬಿ.ವಸ್ತ್ರದಮಠ ತಿಳಿಸಿದರು.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನುರಾಷ್ಟ್ರೀಯ ಲೋಕ ಅದಾಲತ್ ಮೂಲಕ ಶೀಘ್ರಬಗೆಹರಿಸಿಕೊಂಡು ಹಣ, ಸಮಯ ಉಳಿತಾಯದಜತೆಗೆ ನೆಮ್ಮದಿಯ ಜೀವನ ನಡೆಸಬಹುದಾಗಿದೆ ಎಂದು ಗುರುವಾರ ನಗರದ ಮಧ್ಯಸ್ಥಿಕೆ ಕೇಂದ್ರದ ಸಭಾಂಗಣದಲ್ಲಿಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಕರಣ ಇಳಿಕೆ ಸಾಧ್ಯತೆ: ಕೊರೊನಾ ತಡೆ ಕುರಿತುಸಾರ್ವಜನಿಕರಲ್ಲಿ ಅರಿವು ಮೂಡಿಸುವಕಾರ್ಯವನ್ನು ಕೂಡ ಕೈಗೊಳ್ಳಲಾಗಿದೆ.ಸಾರ್ವಜನಿಕರು ಅದಾಲತ್ ಮುಖಾಂತರ ತಮ್ಮಪ್ರಕರಣಗಳಿಗೆ ಪರಿಹಾರ ಕಂಡುಕೊಂಡಾಗ ಮಾತ್ರಪ್ರಕರಣಗಳ ಸಂಖ್ಯೆ ಇಳಿಕೆಯಾಗಲಿದೆ ಎಂದರು.ಸದ್ಬಳಕೆಗೆ ಸಲಹೆ: ಜಿಲ್ಲೆಯಲ್ಲಿ ಒಟ್ಟು 83,351ಪ್ರಕರಣಗಳಿದ್ದು, ಅದರಲ್ಲಿ 39484 ಸಿವಿಲ್,43,867 ಕ್ರಿಮಿನಲ್, 5076 ಮೋಟಾರ್ ವಾಹನ,13207 ಚೆಕ್ ಬೌನ್ಸ್, 1971 ರಾಜಿಆಗಬಹುದಾದಂಥ ಪ್ರಕರಣಗಳಿವೆ.ನ್ಯಾಯಾಲಯಗಳಲ್ಲಿ ಪ್ರಕರಣ ಇಳಿಕೆಯಾದಷ್ಟುಶಾಂತಿಯುತ ರಾಷ್ಟ್ರ ನಿರ್ಮಾಣವಾಗಬಲ್ಲದು.ಸಾರ್ವಜನಿಕರು ಅದಾಲತ್ ಪ್ರಯೋಜನಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ನ್ಯಾಯಾಲಯದಲ್ಲಿ ಬಾಕಿ ಇರುವಪ್ರಕರಣಗಳೆಂದರೆ, ರಾಜಿಯಾಗಬಲ್ಲ ಅಪರಾಧಿಕ,ಚೆಕ್ ಅಮಾನ್ಯ, ಆರ್ಥಿಕ ವಸೂಲಾತಿ, ಮೋಟಾರುಅಪಘಾತ ಪರಿಹಾರ ನ್ಯಾಯಾಧೀಕರಣ,ಉದ್ಯೋಗದಲ್ಲಿಪುನರ್‌ಸ್ಥಾಪಿಸಲ್ಪಡುವ,ಜಮೀನುವಿವಾದ, ಕಾರ್ಮಿಕ ವಿವಾದಗಳು ಹಾಗೂಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದಕ್ಷೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು,ವೈವಾಹಿಕಕುಟುಂಬ ನ್ಯಾಯಾಲಯದಲ್ಲಿ ಇತ್ಯರ್ಥಪಡೆಯಬಹುದು ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ08232-229345 ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರಗಳು ಅಥವಾ ತಾಲೂಕು ಕಾನೂನು ಸೇವಾಸಮಿತಿ ಸದಸ್ಯ ಕಾರ್ಯದರ್ಶಿಯವರನ್ನುಸಂಪರ್ಕಿಸಬಹುದು ಎಂದು ತಿಳಿಸಿದರು.ಗೋಷ್ಠಿಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರದಸದಸ್ಯಕಾರ್ಯದರ್ಶಿ ನಳಿನಿಕುಮಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.