ಮಹದೇವಪುರ: ವಾರಕ್ಕೊಮ್ಮೆ ನೀರು ಪೂರೈಕೆ
ತಾಪಂ ಕಚೇರಿಗೆ ಮುತ್ತಿಗೆ ಹಾಕಿ ಇಒ ಶಿವಕುಮಾರ್‌ಗೆೆ ಗ್ರಾಮಸ್ಥರಿಂದ ತರಾಟೆ
Team Udayavani, Jun 6, 2019, 3:44 PM IST
ಶ್ರೀರಂಗಪಟ್ಟಣ: ತಾಲೂಕಿನ ಮಹದೇವಪುರ ಗ್ರಾಮಕ್ಕೆ ವಾರಕ್ಕೆ ಒಂದು ಬಾರಿ ನೀರು ಸರಬರಾಜು ಮಾಡುತ್ತಿರುವ ಹಿನ್ನೆಲೆಯಲ್ಲಿ ತಾಪಂ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ತಾಪಂ ಇಒ ಶಿವಕುಮಾರ್ ಅವರಿಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.
ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್‌ನಲ್ಲಿ ಗ್ರಾಮ ಬಹು ಗ್ರಾಮಗಳ ಕುಡಿಯುವ ನೀರು ಸರಬರಾಜು ಯೋಜನೆಗೆ 38 ಕೋಟಿ ರೂ. ಬಿಡುಗಡೆ ಎಂದು ಹೇಳಲಾಗಿದ್ದರೂ ಅದು ಇನ್ನು ಚಾಲನೆಗೆ ಬರುವ ಕನಸಾಗಿದೆ. ಅದರ ಜೊತೆಗೆ, ಈ ಹಿಂದೆ 2017-18ನೇ ಸಾಲಿನ ಎಸ್‌ಟಿಪಿ ಯೋಜನೆಯಡಿ ಮಹದೇವಪುರ ಗ್ರಾಪಂ ವ್ಯಾಪ್ತಿಗೆ 36.59 ಲಕ ್ಷರೂ. ಗಳನ್ನು ಈ ಹಿಂದಿನ ಸರ್ಕಾರ ಬಿಡುಗಡೆ ಮಾಡಿ ಶುದ್ಧ ಕುಡಿಯುವ ನೀರು ಘಟಕವನ್ನು ರಾಜಪರಮೇಶ್ವರಿ ಅಣೆಕಟ್ಟೆ ಮೂಲಕ ಜಾಕ್‌ವಾಲ್ ನಿರ್ಮಾಣ ಮಾಡಿ ನಾಲೆಯಿಂದ ಗ್ರಾಮಕ್ಕೆ ನೀರು ಸರಬರಾಜು ಮಾಡಲು ಪೈಪ್‌ಲೈನ್ ಅಳವಡಿಸಿ ನೀರು ಸರಬರಾಜಿನ ಕಾಮಗಾರಿ ನಡೆಸಿ ಅರ್ಧಕ್ಕೆ ನಿಂತು ಹೋಗಿದೆ.
ಅಧಿಕಾರಿಗಳ ವಿರುದ್ಧ ದೂರು: ಲೇ ಹಣವೂ ಬಿಡುಗಡೆಯಾಗಿದ್ದರೂ ಕಾಮಗಾರಿ ಪೂರ್ಣಗೊಳ್ಳದೆ ಸಂಬಂಧಿಸಿದ ಕುಡಿಯುವ ನೀರು ಸರಬರಾಜು ಇಲಾಖೆ ವಿಫಲವಾಗಿದ್ದು ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ಜಿಪಂ ಎಂಜಿನಿಯರ್‌ಗಳ ವಿರುದ್ಧ ಆರೋಪ ಮಾಡಿದರು. ತ್ವರಿತವಾಗಿ ಕಾಮಗಾರಿ ನಡೆಸದೆ ಅಧಿಕಾರಿಗಳು ಗ್ರಾಪಂ ಪಿಡಿಒ ವೈಮನಸ್ಯದಿಂದ ಗ್ರಾಮದಲ್ಲಿ ಕುಡಿಯುವ ನೀರಿಲ್ಲದೆ ಪರದಾಡಬೇಕಿದೆ ಎಂದು ಜಿಪಂ ಎಇಇ ಅವರಿಗೆ ದೂರು ನೀಡಿ ಗ್ರಾಮಕ್ಕೆ ನೀರು ಕೊಡಿ ಎಂದು ಕೇಳಿದರೆ ಪೊಲೀಸರಿಗೆ ದೂರು ಕೊಡುತ್ತೇನೆ ಎಂದು ಧಮ್ಕಿ ಹಾಕುತ್ತಾರೆ ಎಂದು ಅಧಿಕಾರಿಗಳ ವಿರುದ್ಧ ದೂರಿದರು.
ನೀರಿಗೆ ಪರದಾಟ:ಪ್ರತಿದಿನ ಗ್ರಾಮಸ್ಥರು ನದಿ ಹಾಗೂ ಕೊಳವೆ ಬಾವಿಗಳ ಮೂಲಕ ನೀರು ತರಲು ಸೈಕಲ್ ಹಾಗೂ ಬೈಕ್‌ಗಳಲ್ಲಿ ತೆಗೆದುಕೊಂಡು ಬಿಂದಿಗೆ ಕಟ್ಟಿಕೊಂಡು ನೀರು ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯಿತಿ ಸೇರಿದಂತೆ ಇತರ ಕಡೆಗಳಿಗೆ ದೂರು ನೀಡದರೂ ಕ್ರಮ ಕೈಗೊಂಡು ಗ್ರಾಮಕ್ಕೆ ನೀರು ಸರಬರಾಜು ಮಾಡಲು ಮುಂದಾಗದಿರುವುದಕ್ಕೆ ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿ ಕೂಡಲೇ ಸ್ಥಳಕ್ಕೆ ಜಿಪಂ ಎಇಇ ಅವರನ್ನು ಕರೆಸಬೇಕು ಎಂದು ತಾಪಂ ಇಒ ಶಿವಕುಮಾರ್ ಅವರಿಗೆ ಪಟ್ಟು ಹಿಡಿದರು.
ಈ ವೇಳೆ ಗ್ರಾಪಂ ಅಧ್ಯಕ್ಷ ಜಗದೀಶ್, ಗ್ರಾಪಂ ಸದಸ್ಯರಾದ ಎಂ.ವಿ.ಕೃಷ್ಣ, ನಟರಾಜು, ಮಾಜಿ ಸದಸ್ಯ ಗೋವಿಂದರಾಜು, ತಾಪಂ ಮಾಜಿ ಸದಸ್ಯ ತಮ್ಮೆಗೌಡ, ಶಿವಣ್ಣ ಗವಿಸಿದ್ದು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.