ಶಿಕ್ಷ‌ಣದ ಜೊತೆಗೆ ಸಂಸ್ಕಾರ, ಮಾನವೀಯ ಗುಣ ರೂಢಿಸಿಕೊಳ್ಳಿ

ಬಸವಣ್ಣ, ಶಿವಕುಮಾರ ಸ್ವಾಮೀಜಿ ಜಯಂತಿಯಲ್ಲಿ ಶ್ರೀಗುರುಸಿದ್ದೇಶ್ವರ ಸ್ವಾಮೀಜಿ ಸಲಹೆ

Team Udayavani, May 20, 2019, 1:56 PM IST

mandya-tdy-4..

ಪಾಂಡವಪುರ: ವಿದ್ಯಾರ್ಥಿಗಳು ಜೀವನದಲ್ಲಿ ಶಿಕ್ಷಣದ ಜೊತೆಗೆ ಸಂಸ್ಕಾರ, ಮಾನವೀಯ ಗುಣಗಳನ್ನು ಮೈಗೂಡಿಸಿ ಕೊಳ್ಳಬೇಕು, ಗುರು-ಹಿರಿಯರನ್ನು ಗೌರವಿಸಬೇಕು, ಜತೆಗೆ ಎಲ್ಲಾ ಧರ್ಮ ವನ್ನು ಸಮಾನವಾಗಿ ಸ್ವೀಕರಿಸ ಬೇಕು ಎಂದು ಬೇಬಿಬೆಟ್ಟದ ಶ್ರೀರಾಮ ಯೋಗೀ ಶ್ವರ ಮಠದ ಪೀಠಾಧ್ಯಕ್ಷ ಶ್ರೀಗುರು ಸಿದ್ದೇಶ್ವರ ಸ್ವಾಮೀಜಿ ಹೇಳಿದರು.

ತಾಲೂಕಿನ ಬೇಬಿಬೆಟ್ಟದ ಶ್ರೀರಾಮ ಯೋಗೀಶ್ವರ ಮಠದ ಆವರಣದಲ್ಲಿ ರಾಜ್ಯ ವೀರಶೈವ ಲಿಂಗಾಯತ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಬಸವಣ್ಣ ಹಾಗೂ ಶಿವಕುಮಾರಸ್ವಾಮೀಜಿಗಳ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದರು.

ಜಾತಿ ವ್ಯವಸ್ಥೆ ತೊಲಗಿಸಿದ ಬಸವಣ್ಣ: ಬಸವಣ್ಣನವರು ತಮ್ಮ ವಚನಗಳ ಮೂಲಕ ಅಂದಿನ ಸಮಾಜದಲ್ಲಿ ಬೇರೂರಿದ್ದ ಅಸ್ಪೃಶ್ಯತೆ, ಶೋಷಣೆ, ಜಾತಿ ವ್ಯವಸ್ಥೆಯ, ಸ್ತ್ರೀ ಸಾಮಾನ್ಯರಿಗೆ ಸೂಕ್ತ ಸ್ಥಾನಮಾನಗಳನ್ನು ಒದಗಿಸಿಕೊಟ್ಟ ಮಹಾನ್‌ ನಾಯಕರು. ಹಾಗಾಗಿ ಬಸವಣ್ಣನವರ ತತ್ವಸಿದ್ಧಾಂತಗಳನ್ನು ಇಂದಿನ ಯುವಜನಾಂಗ ಮೈಗೂಡಿಸಿ ಕೊಂಡು ಮುನ್ನಡೆಯಬೇಕು ಎಂದರು.

ನಾಡಿಗೆ ಸಿದ್ಧಗಂಗಾ ಶ್ರೀ ಕೊಡುಗೆ ಅಪಾರ: ಬಸವಣ್ಣನವರ ಮಾರ್ಗ ದಲ್ಲಿಯೇ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಗಳ ಸಹ ಸಾಗಿದರು. ಜೀವನ ದಲ್ಲಿ ಸರಳ ಸಜ್ಜನಿಕೆಯನ್ನು ಮೈಗೂಡಿಸಿ ಕೊಂಡಿದ್ದ ಶ್ರೀಗಳು ಸಿದ್ಧಗಂಗಾಮಠದ ಪೀಠಾಧ್ಯಕ್ಷರಾಗಿ ಸಮಾಜಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಲಕ್ಷಾಂತರ ಮಕ್ಕಳಿಗೆ ವಿದ್ಯಾದಾನ, ದಾಸೋಹಗಳನ್ನು ನಡೆಸಿ ನಮ್ಮ ನಾಡಿನ ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಅರಿವು ಮೂಡಿಸಿ ಮಹಾನ್‌ ಚೇತನ ಎಂದು ಬಣ್ಣಿಸಿದರು.

ಧೈರ್ಯದಿಂದ ಸಮಸ್ಯೆ ಎದುರಿಸಿ: ಸುಂಕಾತೊಣ್ಣೂರು ಸರ್ಕಾರಿ ಶಾಲೆ ಮುಖ್ಯಶಿಕ್ಷಕ ಎನ್‌.ಮಹದೇವಪ್ಪ ಮಾತನಾಡಿ, ಇತ್ತೀಚಿನ ದಿನಮಾನಗಳಲ್ಲಿ ನಮ್ಮ ಸಮಾಜದಲ್ಲಿ ಕಚ್ಚಾಟ- ತಿಕ್ಕಾಟಗಳು, ಭಯೋತ್ಪಾದನೆಗಳಂತಹ ಜಾಗತಿಕ ಸಮಸ್ಯೆಗಳು ಹೆಚ್ಚಾಗಿರುವ ಪರಿಣಾಮ ಸಮಾಜ ದುಸ್ಥಿತಿಯತ್ತ ಮುನ್ನಡೆಯುತ್ತಿದೆ. ಇಂತಹ ಸಮಾಜದ ಹಲವಾರು ಸಮಸ್ಯೆಗಳನ್ನು ನಾವು ಎದುರಿಸಬೇಕಾಗಿದೆ. ಜೀವನದಲ್ಲಿ ಎದುರಾಗುವ ಯಾವುದೇ ಸಮಸ್ಯೆಗಳನ್ನು ಎದುರಿಸಿಗಟ್ಟಿಯಾಗಿ ನಿಲ್ಲಲು ನಮಗೆ ಶಿಕ್ಷಣ ಅತ್ಯವಶ್ಯಕವಾಗಿದೆ ಎಂದರು.

ವೀರಶೈವ ಮುಖಂಡ ಎಸ್‌.ಎ.ಮಲ್ಲೇಶ್‌ ಮಾತನಾಡಿ, ಬಸವಣ್ಣ ನವರು 12ನೇ ಶತಮಾನದಲ್ಲಿಯೇ ಸಮಾಜದಲ್ಲಿ ಮೌಡ್ಯಚಾರಣೆ, ಕಂದಾ ಚಾರಗಳ ವಿರುದ್ಧ ಹೋರಾಡಿದ್ದರು. ಸಮಾಜದ ಸುಧಾರಣೆಗೆ ಶ್ರಮಿಸಿದ ಬಸವಣ್ಣನವರ ತತ್ವಸಿದ್ಧಾಂತಗಳನ್ನು ನಾವೆಲ್ಲರೂ ಚಾಚುತಪ್ಪದೆ ಪಾಲಿಸಬೇಕು ಎಂದು ಹೇಳಿದರು.

ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಾದರಮ್ಯಾ, ಕೆ.ಎಸ್‌.ಜಯಂತ್‌, ಚಂದನ್‌, ಸಿ.ಎನ್‌.ವರ್ಷಿಣಿ, ಡಿ.ಬಿ. ಸುಷ್ಮಿತಾ, ಭುವನ, ಡಿ.ಆರ್‌.ಮಂಜು, ಎಂ.ಪುಣ್ಯಶ್ರೀ, ಟಿ.ಸಿ. ಭೂಮಿಕಾ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಡಿ.ಎಂ.ಶಾಲಿನಿ, ಡಿ.ಎಂ. ಶಶಾಂಕ್‌, ಡಿ.ಆರ್‌.ಮಂಜು, ಬಿ.ಎಂ.ಶಾಲಿನಿ, ಡಿ.ಎಸ್‌. ಆದಿತ್ಯ, ಎನ್‌.ನಮ್ರತಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರಾದ ಸಿದ್ದಪ್ಪ ಮತ್ತು ಕೆಂಪು ಅವರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

police crime

Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

Maha Kumbh 2025: ನಾಗಾ ಸಾಧುಗಳಿಗೂ…ಅಘೋರಿಗಳಿಗೂ ಇರುವ ವ್ಯತ್ಯಾಸವೇನು? ಆಹಾರ ಪದ್ಧತಿ ಹೇಗೆ

1-dee

Maha Kumbh; 7 ಕೋಟಿ ರುದ್ರಾಕ್ಷಿಗಳಿಂದ 12 ಜ್ಯೋತಿರ್ ಲಿಂಗಗಳ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

KJ-Goerge

Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್‌ ಖರೀದಿಗೆ ನಿರ್ಧಾರ: ಜಾರ್ಜ್‌

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Randeep-surgewala

ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ

rohit

BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು

kohli

Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ

MB-Patil-Mi

ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್‌

puttige-8-

Puthige Matha: ವಿಶ್ವ ಗೀತಾ ಪರ್ಯಾಯಕ್ಕೆ‌ ಇಂದಿಗೆ ವರ್ಷ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.