Mandya; ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸಾರಿಗೆ ಬಸ್; ಹಲವರಿಗೆ ಗಾಯ
Team Udayavani, Jun 29, 2024, 2:38 PM IST
ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ಸೊಂದು ಹಳ್ಳಕ್ಕೆ ನುಗ್ಗಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಗೇಟ್ ಬಳಿಯ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಸರ್ವೀಸ್ ರಸ್ತೆಗೆ ನುಗ್ಗಿದ ಬಸ್ ಕಾರು ಸೇರಿದಂತೆ ಮೂರ್ನಾಲ್ಕು ಬೈಕ್ ಗಳಿಗೆ ಡಿಕ್ಕಿ ಹೊಡೆದು ನಂತರ ಹಳ್ಳಕ್ಕೆ ಉರುಳಿದೆ.
ಡಿವೈಡರ್ ಹಾರಿದ ಬಸ್ ಸರ್ವೀಸ್ ರಸ್ತೆಯಲ್ಲಿ ಹೋಗುತ್ತಿದ್ದ ಕಾರು, ಬೈಕ್ ಗಳಿಗೆ ಡಿಕ್ಕಿ ಹೊಡೆದು ಹಳ್ಳಕ್ಕೆ ಬಿದ್ದಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.
ಬಸ್ ನಲ್ಲಿದ್ದ 25 ಮಂದಿ ಪೈಕಿ ಎಂಟು ಮಂದಿ ಗಾಯಗೊಂಡಿದ್ದಾರೆ. ಚಾಲಕನ ಕಾಲು ಮುರಿದಿದ್ದು, ಒಂದು ಕಾರು, 4ಕ್ಕೂ ಹೆಚ್ಚು ಬೈಕ್ ಜಖಂಗೊಂಡಿವೆ. ಬಸ್ ಗುದ್ದಿದ ರಭಸಕ್ಕೆ ಬಸ್ ಜೊತೆ ಹಳ್ಳಕ್ಕೆ ಬೈಕೊಂದು ಸಹ ಬಿದ್ದಿದೆ.
ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಗೆ ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ
ಜೀವ ರಕ್ಷಕ ಕ್ರಿಟಿಕಲ್ ಕೇರ್ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ
Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.