ಕಬ್ಬಿನ ದರ ನಿಗದಿ ಆಗ್ರಹಿಸಿ ಮಂಡ್ಯ ಬಂದ್: ವ್ಯಾಪಕ ಬೆಂಬಲ, ಚಿತ್ರ ಪ್ರದರ್ಶನವೂ ರದ್ದು
Team Udayavani, Dec 19, 2022, 1:24 PM IST
ಮಂಡ್ಯ: ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ಧ ಮಂಡ್ಯ ನಗರ ಬಂದ್ ಆಚರಿಸಲಾಯಿತು.
ರೈತ ಸಂಘ ಕರೆ ನೀಡಿದ್ದ ಜಿಲ್ಲಾ ಕೇಂದ್ರ ಮಂಡ್ಯ ನಗರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು, ಪ್ರಮುಖ ವಾಣಿಜ್ಯ ಪ್ರದೇಶದಲ್ಲಿ ವರ್ತಕರು ಅಂಗಡಿ ಮುಂಗಟುಗಳನ್ನು ಬಾಗಿಲು ಮುಚ್ಚಿ ಬಂದ್ ಬೆಂಬಲಿಸಿದರು, ಪೇಟೆ ಬೀದಿ, ವಿ. ವಿ ರಸ್ತೆ, ಗುತ್ತಲು ರಸ್ತೆ, ಆರ್.ಪಿ ರಸ್ತೆ, ಡಾ.ಬಿ.ಆರ್ ಅಂಬೇಡ್ಕರ್ ರಸ್ತೆ (ನೂರಡಿ ರಸ್ತೆ), ಬನ್ನೂರು ರಸ್ತೆ, ಹೊಸಳ್ಳಿ ರಸ್ತೆ, ವಿನೋಬಾ ರಸ್ತೆ ಹಾಗೂ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಬಹುತೇಕ ಅಂಗಡಿಗಳು ಬಾಗಿಲು ಮುಚ್ಚಿದ್ದವು. ಬೆಳಂ ಬೆಳಗ್ಗೆ ವ್ಯಾಪಾರ ಮಾಡುತ್ತಿದ್ದ ಅಂಗಡಿಗಳನ್ನು ಪ್ರತಿಭಟನಾಕಾರರು ಬಾಗಿಲು ಮುಚ್ಚಿಸಿದರು, ಇದರಿಂದ ಹೋಟೆಲ್ ವ್ಯಾಪಾರಕ್ಕೆ ಅಡೆತಡೆ ಉಂಟಾಯಿತು.
ಚಿತ್ರ ಪ್ರದರ್ಶನ ರದ್ದು: ಚಲನಚಿತ್ರ ಮಂದಿರಗಳಲ್ಲಿ ಬೆಳಗಿನ ಪ್ರದರ್ಶನ ರದ್ದು ಮಾಡಲಾಗಿತ್ತು, ಹೆದ್ದಾರಿಯಲ್ಲಿನ ಪೆಟ್ರೋಲ್ ಬಂಕ್ ಗಳು ಕೆಲ ತಾಸು ವ್ಯಾಪಾರ ಸ್ಥಗಿತ ಮಾಡಿದ್ದವು. ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ವಿರಳವಾಗಿತ್ತು. ಸರ್ಕಾರಿ ಬಸ್ ಗಳ ಸಂಚಾರದಲ್ಲಿ ವ್ಯತಯ ಉಂಟಾಗಿತ್ತು. ಹೆದ್ದಾರಿಯಲ್ಲಿ ಸಂಚರಿಸುವ ಸರ್ಕಾರಿ ಬಸ್ ಗಳು ಕೆಎಸ್ಆರ್ ಟಿಸಿ ನಿಲ್ದಾಣಕ್ಕೆ ಬಾರದ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರಿಗೆ ತೆರಳುವ ಪ್ರಯಾಣಿಕರು ಬಸ್ ಸಿಗದೆ ಪರದಾಡಿದರು. ರೈತರು ಹೆದ್ದಾರಿ ತಡೆದಿದ್ದರಿಂದ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಿದವು.
ಕಾಲೇಜು ವಿದ್ಯಾರ್ಥಿ- ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ರೈತರ ಹೋರಾಟ ಬೆಂಬಲಿಸಿದರು. ಕೇಂದ್ರ- ರಾಜ್ಯಸರ್ಕಾರಿ ಕಚೇರಿ. ಬ್ಯಾಂಕ್ ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು, ಬಂದ್ ಹಿನ್ನಲೆಯಲ್ಲಿ ವಾಹನ ಸಂಚಾರ ವ್ಯವಸ್ಥೆಯಲ್ಲಿ ಅಸ್ತವ್ಯಸ್ತ ಉಂಟಾಗಿದ್ದರಿಂದ ಮಕ್ಕಳು ನಿಗದಿತ ಸಮಯಕ್ಕೆ ಶಾಲೆ ತಲುಪಲು ಸಾಧ್ಯವಾಗಲಿಲ್ಲ. ಇನ್ನುಳಿದಂತೆ ಶಾಲೆಗಳಲ್ಲಿ ಪಾಠ ಪ್ರವಚನಕ್ಕೆ ತೊಂದರೆಯಾಗಲಿಲ್ಲ.
ಇದನ್ನೂ ಓದಿ:ಪಂದ್ಯ ಸೋತರೂ ವಿಶ್ವದ ಹೃದಯ ಗೆದ್ದ ಕಿಲಿಯನ್ ಎಂಬಪ್ಪೆ ಎಂಬ ಮೋಡಿಗಾರ
ರೈತರ ಸಂಘದ ಜೊತೆ ದನಿಗೂಡಿಸಿದ ದಲಿತ. ಪ್ರಗತಿಪರ, ಕನ್ನಡಪರ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬೃಹತ್ ಹೋರಾಟ ನಡೆಸಿ ಸರ್ಕಾರದ ವಿರುದ್ಧ ದಿಕ್ಕಾರದ ಘೋಷಣೆ ಕೂಗಿ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.