ಮಂಡ್ಯ: ಬಿಜೆಪಿ ಲೋಕಾ ಅಭ್ಯರ್ಥಿ ಯದುವೀರ್?
Team Udayavani, Sep 8, 2018, 6:00 AM IST
ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ಯುವರಾಜ ಯದುವೀರ್ ಅವರನ್ನು ಕಣಕ್ಕಿಳಿಸುವ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.
ಆರು ತಿಂಗಳ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.ಯಡಿಯೂರಪ್ಪ ಅವರು ಮೈಸೂರು ಅರಮನೆಗೆ ಭೇಟಿ ನೀಡಿ, ಯದುವೀರ್ ಜೊತೆ ರಹಸ್ಯ ಮಾತುಕತೆ ನಡೆಸಿ ಹೋಗಿದ್ದರು. ಆ ವೇಳೆ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಯದುವೀರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಗುಪ್ತವಾಗಿ ಮಾತುಕತೆ ನಡೆಸಲಾಗಿದೆ ಎನ್ನಲಾಗುತ್ತಿದ್ದು, ಅದಕ್ಕೆ ಈಗ ರೆಕ್ಕೆ-ಪುಕ್ಕ ಮೂಡಲಾರಂಭಿಸಿದೆ. ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಬೇಕಾದರೆ ಒಂದೊಂದು ಸ್ಥಾನವೂ ಬಹಳ ಮುಖ್ಯ.
ಆ ನಿಟ್ಟಿನಲ್ಲಿ ಯದುವೀರ್ ಆಯ್ಕೆ ಸೂಕ್ತ ಹಾಗೂ ಸಮಯೋಚಿತ ಎಂದು ರಾಜ್ಯ, ರಾಷ್ಟ್ರ ನಾಯಕರಿಗೆ ಸಂದೇಶ ರವಾನಿಸಲಾಗಿದೆ. ಬಿಜೆಪಿ ಕೂಡ ಈಗಾಗಲೇ ಇಲ್ಲಿ ಹಲವಾರು ಅಭ್ಯರ್ಥಿಗಳನ್ನು ಕರೆ ತಂದು ನಿಲ್ಲಿಸಿದ್ದರೂ ಜೆಡಿಎಸ್, ಕಾಂಗ್ರೆಸ್ ಎದುರು ಗೆಲುವಿನ ಗುರಿ ಮುಟ್ಟಲಾಗಲೇ ಇಲ್ಲ. ಚಿತ್ರನಟ ಉಪೇಂದ್ರ ಅವರನ್ನು ಕರೆ ತರುವ ಪ್ರಯತ್ನ ಈಡೇರಲೇ ಇಲ್ಲ. ಹಾಗಾಗಿ, ಯದುವೀರ್ ಅವರನ್ನು ಕರೆ ತಂದಲ್ಲಿ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಿನಿಂದ ದುಡಿಯುವರೆಂಬ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!
Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್ ಗಂಭೀರ್ ಭಾರತಕ್ಕೆ
BJP: ಬಸನಗೌಡ ಪಾಟೀಲ್ ಯತ್ನಾಳ್ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ
Fraud Case: ಎಪಿಕೆ ಫೈಲ್ ಕಳುಹಿಸಿ 1.31 ಲ.ರೂ. ವಂಚನೆ
Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.