ಕೇಂದ್ರ ಸರ್ಕಾರದಿಂದ ಸಿಬಿಐ ದುರುಪಯೋಗ: ಮಂಡ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ


Team Udayavani, Oct 6, 2020, 4:19 PM IST

ಕೇಂದ್ರ ಸರ್ಕಾರದಿಂದ ಸಿಬಿಐ ದುರುಪಯೋಗ: ಮಂಡ್ಯದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಮಂಡ್ಯ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತವಾಗಿದೆ. ಕೇಂದ್ರ ಸರ್ಕಾರ ಸಿಬಿಐಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಕಾವೇರಿ ಉದ್ಯಾನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಎದುರು ಧರಣಿ ಕುಳಿತು ಕೇಂದ್ರ ಹಾಗೂ ಉತ್ತರ ಪ್ರದೇಶದ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರ ಸಿಬಿಐಯನ್ನು ರಾಜಕೀಯ ದುರುಪಯೋಗಕ್ಕೆ ಬಳಸಿಕೊಂಡು ರಾಜ್ಯದಲ್ಲಿ ಉಪಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರಿಗೆ ಸೇರಿದ ಮನೆಗಳ ಮೇಲೆ ದಾಳಿ ನಡೆಸಿ ಜನರನ್ನು ದಿಕ್ಕು ತಪ್ಪಿಸುವ ಕೆಳಮಟ್ಟದ ರಾಜಕಾರಣ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಮಂಡ್ಯ: ಮಹಡಿಯಿಂದ ಕಾಲು ಜಾರಿ ಬಿದ್ದು ಮಗು ಸಾವು

ಇನ್ನಾದರೂ, ಸಿಬಿಐ ಎಂಬ ಅಸ್ತçದಿಂದ ಬಿಟ್ಟು ವಿಪಕ್ಷಗಳ ನಾಯಕರನ್ನು ಬೆದರಿಸುವ ತಂತ್ರ ಮಾಡದೆ ಮೌಲ್ಯಯುತ ರಾಜಕಾರಣ ಮಾಡಲಿ, ಇಂತಹ ಗೊಡ್ಡು ಬೆದರಿಕೆಗಳಿಗೆಲ್ಲ ಡಿ.ಕೆ.ಶಿವಕುಮಾರ್ ಅವರು ಬೆದರುವುದಿಲ್ಲ. ಅವರ ಜೊತೆ ಕಾಂಗ್ರೆಸ್ ಪಕ್ಷ ಇದೆ ಎಂದು ಕಿಡಿಕಾರಿದರು.

ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರಗಳು ಚುನಾವಣೆ ಸಂದರ್ಭಗಳಲ್ಲೇ ನಮ್ಮ ನಾಯಕರ ಮೇಲೆ ದಾಳಿ ನಡೆಸುವ ಮೂಲಕ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಚುನಾವಣೆಗಳಲ್ಲಿ ಗೆಲ್ಲಲಾಗದೆ ಈ ರೀತಿಯ ಹಿಂಬಾಗಿಲ ರಾಜಕಾರಣ ಮಾಡುತ್ತಿರುವುದು ಸರಿಯಲ್ಲ. ಇದಕ್ಕೆಲ್ಲ ಮುಂದಿನ ದಿನಗಳಲ್ಲಿ ಜನರೇ ತಕ್ಕಪಾಠ ಕಲಿಸಲಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಇಂಥ ಕೀಳು ಮಟ್ಟದ ರಾಜಕಾರಣ ಬಿಡಬೇಕು ಎಂದು ಆಗ್ರಹಿಸಿದರು.

ಆರೋಪಿಗಳ ಗಲ್ಲಿಗೇರಿಸಲು ಆಗ್ರಹ : ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿ ಅಮಾನುಷವಾಗಿ ಹತ್ಯೆಗೈದಿರುವ ಆರೋಪಿಗಳನ್ನು ಗಲ್ಲಿಗೇರಿಸುವ ಮೂಲಕ ಕಠಿಣ ಕಾನೂನನ್ನು ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.

ಉತ್ತರ ಪ್ರದೇಶದ ಉನ್ನವ್, ಕತುವಾ ಮತ್ತು ಹತ್ರಾಸ್‌ನಲ್ಲಿ ನಡೆದಿರುವ ಸರಣಿ ಅತ್ಯಾಚಾರಗಳನ್ನು ತಡೆಗಟ್ಟುವಲ್ಲಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಪರಾಧಗಳನ್ನು ಪೋಷಿಸುವ ಹಾಗೂ ರಕ್ಷಿಸುವ ಕೆಲಸವನ್ನು ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಮಾಡುತ್ತಿದ್ದು, ಕೂಡಲೇ ರಾಷ್ಟಪತಿಗಳು ಮಧ್ಯ ಪ್ರವೇಶಿಸಿ ಉತ್ತರ ಪ್ರದೇಶದ ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ:ಬೆಳೆಹಾನಿ ಪರಿಹಾರ ನೀಡಲು ಒತ್ತಾಯಿಸಿ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಖಂಡರಾದ ಎಚ್.ಕೆ.ರುದ್ರಪ್ಪ, ಎಂ.ಎಸ್.ಚಿದಂಬರ್, ಸುದರ್ಶನ್, ಸಿದ್ದರಾಮೇಗೌಡ, ಎಂ.ಡಿ.ಜಯರಾಂ, ಸಿ.ಎಂ.ದ್ಯಾವಪ್ಪ, ಹಾಲಹಳ್ಳಿ ಅಶೋಕ್, ಅಂಜನಾ ಶ್ರೀಕಾಂತ್, ನಾಗಮಣಿ, ಅನಿಲ್, ಶ್ರೀಧರ್, ರಶ್ಮಿ, ಪಲ್ಲವಿ, ವೀಣಾ, ಯಶೋಧ, ವಿಜಯಲಕ್ಷ್ಮಿ, ರಘುನಂದನ್, ಶುಭದಾಯಿನಿ, ಬಿ.ಪಿ.ಪ್ರಕಾಶ್,  ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿUS Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

US Election 2024: ಟ್ರಂಪ್‌,ಕಮಲಾ ಮಧ್ಯೆ ತೀವ್ರ ಪೈಪೋಟಿ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ

Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kanaka-Award

Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ

Dattapeeta

Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ

Edaneer-swmij

Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ

vidhana-Soudha

Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ

Constable-Hsn

Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್‌ ಬರ್ಬರ ಹ*ತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.