ಶೀಳನೆರೆ ಗ್ರಾಮದಲಿ ಡಿಸಿ ವಾಸ್ತವ್ಯಕ್ಕೆ ಸಿದ್ದತೆ
15 ದಿನದಿಂದ ಗ್ರಾಮದಲ್ಲಿ ಬೀಡುಬಿಟ್ಟಿರುವ ತಾಲೂಕು ಆಡಳಿತ ! ಅಧಿಕಾರಿಗಳ ಸ್ಪಂದನೆಯಿಂದ ಗ್ರಾಮಸ್ಥರಲ್ಲಿ ಸಂತಸ
Team Udayavani, Feb 18, 2021, 4:44 PM IST
ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಗ್ರಾಮದಲ್ಲಿ ಫೆ.20ರಂದು ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ ಹೂಡಲಿದ್ದು, ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆಗಳು ನಡೆಯುತ್ತಿವೆ.
ಗ್ರಾಮದ ವೃದ್ಧರು, ಮಹಿಳೆಯರು, ಅಂಗವಿಕಲರು, ವಿಧವಾ ವೇತನ ಫಲಾನುಭವಿಗಳು ಪ್ರತಿ ತಿಂಗಳು ಮಾಶಾಸನ ಪಡೆಯಲು ತಾಲೂಕುಹಾಗೂ ಜಿಲ್ಲಾ ಕೇಂದ್ರಕ್ಕೆ ಅಲೆದಾಡಬೇಕಾಗಿತ್ತು. ಆದರೆ, ಸರ್ಕಾರದ ನಿರ್ಧಾರದಿಂದಾಗಿ ಜಿಲ್ಲಾಡಳಿತವೇ ಗ್ರಾಮಕ್ಕೆ ಬರುವಂತಾಗಿದೆ.
ರಾಜ್ಯ ಸರ್ಕಾರ ಅಭಿವೃದ್ಧಿಯಲ್ಲಿ ಹಿಂದುಳಿದ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ಜಿಲ್ಲಾಧಿಕಾರಿ, ತಹಶೀಲ್ದಾರ್‌ಗಳು ಗ್ರಾಮ ವಾಸ್ತವ್ಯ ಹೂಡುವ ಮೂಲಕ ಗ್ರಾಮದಲ್ಲಿನ ಸಮಸ್ಯೆಗಳನ್ನು ಬಗೆ ಹರಿಸಬೇಕು. ಗ್ರಾಮ ಸ್ಥರಿಗೆ ಸಿಗಬೇಕಾದ ಸೌಲ ಭ್ಯಗಳನ್ನು ಸ್ಥಳ ದಲ್ಲಿಯೇ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದೆ.
ಗ್ರಾಮದಲ್ಲಿ ಬೀಡುಬಿಟ್ಟಿರುವ ಅಧಿ ಕಾರಿಗಳು: ಈಗಾಗಲೇ ಕಳೆದ 15 ದಿನಗಳಿಂದ ತಾಲೂಕು ಆಡಳಿತವೇ ಗ್ರಾಮ ದಲ್ಲಿದ್ದು, ಗ್ರಾಮಗಳ ಜನರ ಸಮಸ್ಯೆಗಳಿಗೆ ಸ್ಪಂದಿ ಸುತ್ತಿದೆ. ತಾಲೂಕಿನ ಕಂದಾಯ ಅಧಿಕಾರಿಗಳು ಗ್ರಾಮಕ್ಕೆ ಪ್ರತಿನಿತ್ಯ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆಗಳನ್ನು ಬಗೆಹರಿ ಸುವ ನಿಟ್ಟಿನಲ್ಲಿ ಕಾರ್ಯೋ ನ್ಮುಖರಾಗಿ ದ್ದಾರೆ.
ಸಮಸ್ಯೆ ಆಲಿಸುತ್ತಿರುವ ಅಧಿಕಾರಿಗಳು: ಗ್ರಾಮಕ್ಕೆ ಪ್ರತಿ ನಿತ್ಯ ಭೇಟಿ ನೀಡು ತ್ತಿರುವ ಅಧಿಕಾರಿಗಳು ಗ್ರಾಮದ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಗ್ರಾಮಸ್ಥರು ಯಾ ವುದೇ ಸಮಸ್ಯೆ ಬಗ್ಗೆ ಮನವಿ ಆಲಿಸಿ, ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ವಹಿÓಲಾ ಗುತ್ತಿದೆ. ಸಮರ್ಪಕ ಮಾಶಾಸನ ವಿತರಣೆ: ಗ್ರಾಮದಲ್ಲಿರುವ ವೃದ್ಧರು, ಅಂಗವಿಕಲರು, ವಿಧವಾ ವೇತನ, ಮಾಶಾಸನ ಸೇರಿದಂತೆ ವಿವಿಧ ವೇತನಗಳನ್ನು ಸ್ಥಳದಲ್ಲಿಯೇ ನೀಡಲಾಗುತ್ತಿದೆ. ಇದುವರೆಗೂ ಸರಿಯಾಗಿ ವಿತರಣೆಯಾಗದಿದ್ದ ಫಲಾನುಭವಿಗಳಿಗೆ ಸಮರ್ಪಕವಾಗಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ. ಅಲ್ಲದೆ, ಹೊಸ ಫಲಾನುಭವಿಗಳಿಗೆ ಅನುಮತಿ ಪತ್ರಗಳನ್ನು ವಿತರಿಸಲಾಗುತ್ತಿದೆ.
ಇದರ ಜತೆಗೆ ಆಧಾರ್ ತಿದ್ದುಪಡಿ, ಪೌತಿಖಾತೆ, ಆರ್‌ಟಿಸಿ ತಿದ್ದುಪಡಿ, ಸ್ಮಾರ್ಟ್ ಕಾರ್ಡ್ ವಿತರಣೆ, ಹೆಲ್ತ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಮೂಲ ಸೌಕರ್ಯಕ್ಕೆ ಆದ್ಯತೆ: ಗ್ರಾಮದಲ್ಲಿ 3913 ಜನಸಂಖ್ಯೆ ಇದೆ. ಅತಿ ಹೆಚ್ಚು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಗ್ರಾಪಂ ಹಾಗೂ ತಾಲೂಕು ಆಡಳಿತ ಆಗಬೇಕಾಗಿರುವ ಮೂಲ ಸೌಕರ್ಯಗಳಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಈಗಾಗಲೇ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ವಿದ್ಯುತ್, ಕಾಂಕ್ರೀಟ್ ರಸ್ತೆ, ಚರಂಡಿಗಳ ನಿರ್ಮಾಣ ಮಾಡಲಾಗಿದೆ. ಪಶು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಕೆರೆ ಹೂಳೆತ್ತುವುದು, ಕೃಷಿ ಹೊಂಡ ನಿರ್ಮಾಣ ಸೇರಿದಂತೆ ನರೇಗಾ ಯೋಜನೆ ಸಮರ್ಪಕವಾಗಿ ಜಾರಿ ಮಾಡಲಾಗುತ್ತಿದೆ. ಆದರೂ, ಇನ್ನೂ ಅಭಿವೃದ್ಧಿ ಕೆಲಸಗಳು ಬಾಕಿ ಇವೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣ, ಸಮುದಾಯ ಶೌಚಾಲಯ ನಿರ್ಮಾಣ ಅಗತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.