ಮಂಡ್ಯ: ಪಕ್ಷೇತರರಾಗಿ 5 ರೂ. ಡಾಕ್ಟರ್ ಕಣಕ್ಕೆ
Team Udayavani, Apr 23, 2018, 6:25 AM IST
ಮಂಡ್ಯ: ಐದು ರೂ. ಡಾಕ್ಟರ್ ಎಂದೇ ಪ್ರಸಿದ್ಧರಾಗಿರುವ ಡಾ.ಎಸ್.ಸಿ. ಶಂಕರೇಗೌಡರು ಮಂಡ್ಯ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಸೋಮವಾರ (ಎ.23) ಬೆಳಗ್ಗೆ 11ಕ್ಕೆ ತಮ್ಮ ಅಭಿಮಾನಿಗಳು ಹಾಗೂ ಬೆಂಬಲಿಗರೊಂದಿಗೆ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಜೆಡಿಎಸ್‌ನಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ಎಸ್.ಸಿ.ಶಂಕರೇಗೌಡರಿಗೆ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ಸೇರಿ ವಿಧಾನಸಭಾ ಕಣಕ್ಕಿಳಿಯಲು ತೀರ್ಮಾನಿಸಿದ್ದರು. ಅಲ್ಲಿಯೂ ಬಿ ಫಾರಂ ಸಿಗದಿದ್ದರಿಂದ ಅಂತಿಮವಾಗಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ.
ಸೇವೆ ಮೂಲಕವೇ ಅಪಾರ ಜನಪ್ರಿಯತೆ ಗಳಿಸಿದ್ದ ಡಾ| ಶಂಕರೇಗೌಡರು 2011ರಲ್ಲಿ ನಡೆದ ಜಿಪಂ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ದುದ್ದ ಜಿಪಂ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಜಿಪಂ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.
ಪ್ರಸಕ್ತ ಚುನಾವಣೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‌ಗಾಗಿ ತೀವ್ರ ಪೈಪೋಟಿ ನಡೆಸಿದರು. ಬಿಜೆಪಿ ಸೇರುವಂತೆ ಮೊದಲು ಶಂಕರೇಗೌಡರಿಗೆ ಆಹ್ವಾನ ಬಂದಿದ್ದರೂ ಜೆಡಿಎಸ್ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಕೊನೆಯವರೆಗೂ ಕಾದುನೋಡುವ ತಂತ್ರ ಅನುಸರಿಸಿದ್ದರು. ಅಂತಿಮವಾಗಿ ಜೆಡಿಎಸ್ ಟಿಕೆಟ್ ಮಾಜಿ ಶಾಸಕ ಎಂ.ಶ್ರೀನಿವಾಸ್‌ರ ಪಾಲಾಯಿತು. ಆ ವೇಳೆಗೆ ಬಿಜೆಪಿ ಸೇರಿದ್ದ ಎನ್.ತಮ್ಮಣ್ಣ ಬಿಜೆಪಿ ಟಿಕೆಟ್ ಗಿಟ್ಟಿಸಿ ಕೊಳ್ಳುವಲ್ಲಿ ಯಶಸ್ವಿಯಾದರು. ಎರಡೂ ಪಕ್ಷಗಳಿಂದ ಟಿಕೆಟ್ ವಂಚಿತ ರಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
MUST WATCH
ಹೊಸ ಸೇರ್ಪಡೆ
Mangaluru: ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Koratagere: ಕಾರು-ಬೈಕ್ ಭೀಕರ ಅಪಘಾತ: ಓರ್ವ ಸವಾರ ಸ್ಥಳದಲ್ಲೇ ಸಾವು
Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್ ಮಾಡಿದ ಯಶ್ ʼಟಾಕ್ಸಿಕ್ʼ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.