ಮಂಡ್ಯ ಕೇಂದ್ರ ಸ್ಥಾನದಲ್ಲಿ ತೆನೆ ಹೊರುವವರು ಯಾರು?


Team Udayavani, Aug 23, 2022, 4:08 PM IST

ಮಂಡ್ಯ ಕೇಂದ್ರ ಸ್ಥಾನದಲ್ಲಿ ತೆನೆ ಹೊರುವವರು ಯಾರು?

ಮಂಡ್ಯ: ಜಿಲ್ಲೆಯ ಕೇಂದ್ರ ಸ್ಥಾನ ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾ ವಣೆಯ ಜೆಡಿಎಸ್‌ನ ಟಿಕೆಟ್‌ಗೆ ಪೈಪೋಟಿ ಹೆಚ್ಚಾ ಗಿದ್ದು, ಆಕಾಂಕ್ಷಿಗಳಲ್ಲಿ ಗೊಂದಲ, ಭಿನ್ನಮತಕ್ಕೂ ಕಾರಣವಾಗಿದೆ.

ಟಿಕೆಟ್‌ ಆಕಾಂಕ್ಷಿಗಳು ಈಗಾಗಲೇ ವರಿಷ್ಠರ ಸೂಚನೆಯಂತೆ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ವರಿಷ್ಠರು ಕೆಲವು ಆಕಾಂಕ್ಷಿಗಳಿಗೆ ಭರವಸೆ ನೀಡಿದ್ದು, ಅದರಂತೆ ಕ್ಷೇತ್ರದಲ್ಲಿ ನಿರಂತರವಾಗಿ ಸಾಮಾಜಿಕ ಚಟು ವಟಿಕೆಗಳಲ್ಲಿ ತೊಡಗಿ ಮತದಾರರಿಗೆ ಹತ್ತಿರವಾಗುವ ಪ್ರಯತ್ನದಲ್ಲಿದ್ದಾರೆ.

ಸಿದ್ಧರಾಗಿರುವ ಆಕಾಂಕ್ಷಿಗಳು: ಜೆಡಿಎಸ್‌ನ ಟಿಕೆಟ್‌ ಆಕಾಂಕ್ಷಿಗಳ ದಂಡೇ ಇದೆ. 3ನೇ ಬಾ ರಿ ಶಾಸಕರಾಗಿ ರುವ ಎಂ.ಶ್ರೀನಿವಾಸ್‌ ಮತ್ತೂಮ್ಮೆ ಟಿಕೆಟ್‌ ಬಯಸಿದ್ದಾರೆ. ಇದರೊಂದಿಗೆ ಅವರ ಅಳಿ ಯ ಎಚ್‌.ಎನ್‌. ಯೋಗೇಶ್‌, ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮ ಚಂದ್ರು, ಕೀಲಾರ ರಾಧಾಕೃಷ್ಣ, ಪಿಇಟಿ ಅಧ್ಯಕ್ಷ ಕೆ.ಎಸ್‌. ವಿಜಯಾನಂದ, ಜೆಡಿಎಸ್‌ ಮುಖಂಡ ಮುದ್ದನಘಟ್ಟ ಮಹಾಲಿಂಗೇಗೌಡರು ರೇಸ್‌ನಲ್ಲಿದ್ದಾರೆ.

ವರಿಷ್ಠರ ಭರವಸೆ: ಜೆಡಿಎಸ್‌ ವರಿಷ್ಠರು ಈಗಾಗಲೇ ಕೆಲವು ಆಕಾಂಕ್ಷಿಗಳಿಗೆ ಟಿಕೆಟ್‌ ಭರವಸೆ ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಆಕಾಂಕ್ಷಿಗಳು ಕ್ಷೇತ್ರದಲ್ಲಿ ಸಂಚರಿಸು ತ್ತಿದ್ದಾರೆ. ಮತದಾರರ ಓಲೈಕೆ ಮಾಡುವ ಪ್ರಯತ್ನದಲ್ಲಿದ್ದಾರೆ. ಅಲ್ಲದೆ, ಸಮಾಜ ಸೇವೆಯಲ್ಲಿ ತೊಡಗಿ ಜನರ ಅಭಿಪ್ರಾಯದ ಮೂಲಕ ವರಿಷ್ಠರ ಗಮನ ಸೆಳೆಯಲು ಮುಂದಾಗಿದ್ದಾರೆ.

ಗೊಂದಲದಲ್ಲಿ ಆಕಾಂಕ್ಷಿತರು: ವರಿಷ್ಠರ ನಡೆಗಳಿಂದ ಆಕಾಂಕ್ಷಿಗಳು ಗೊಂದಲಕ್ಕೊಳಗಾಗುವಂತೆ ಮಾಡಿದೆ. ಈಗಾಗಲೇ ನನಗೆ ಟಿಕೆಟ್‌ ನೀಡುತ್ತೇವೆ ಎಂದು ಭರವಸೆ ನೀಡಲಾಗಿತ್ತು. ಆದರೆ, ಕಳೆದ ಆರು ತಿಂಗಳಿನಿಂದ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಯಿಂದ ಗೊಂದಲ ಉಂಟಾಗಿದೆ ಎಂದು ಕೀಲಾರ ರಾಧಾಕೃಷ್ಣ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆ ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಡಲು ಸಜ್ಜಾಗಿದ್ದಾರೆ. ಇತ್ತ ಶಾಸಕ ಎಂ.ಶ್ರೀನಿವಾಸ್‌ ಅಳಿಯ ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌ ತಮ್ಮ ಬೆಂಬಲಿಗರ ಮೂಲಕ ವರಿಷ್ಠರಿಗೆ ಒತ್ತಡ ಹಾಕುವ ಪ್ರಯತ್ನ ನಡೆಸಿದ್ದಾರೆ.

ಅದ್ದೂರಿ ಹುಟ್ಟುಹಬ್ಬಗಳಿಂದ ದೂರವಿದ್ದ ಪಿಇಟಿ ಅಧ್ಯಕ್ಷ ಕೆ.ಎಸ್‌.ವಿಜಯಾನಂದ ಈ ಬಾರಿ ಅದ್ದೂರಿ ಹುಟ್ಟುಹಬ್ಬ ಆಚರಿಸಿಕೊಂಡು ಟಿಕೆಟ್‌ ಆಕಾಂಕ್ಷಿ ಎಂಬ ಸಂದೇಶ ರವಾನಿಸಿದ್ದಾರೆ. ಇತ್ತ ಮನ್‌ ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು ಕ್ಷೇತ್ರ ಸುತ್ತು ತ್ತಾ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಕೀಲಾರ ರಾಧಾಕೃಷ್ಣ ತನ್ನದೇ ಆದ ಸ್ವಯಂ ಸೇವಕರ ಪಡೆ ಕಟ್ಟಿ ಜನರ ಬಳಿಗೆ ಹೋಗಲು ಸಜ್ಜಾಗುತ್ತಿದ್ದಾರೆ.

ಕಳೆದ ಬಾರಿಯೂ ಅಭ್ಯರ್ಥಿ ಆಯ್ಕೆಯಲ್ಲಿ ಕಗ್ಗಂಟ್ಟು : ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲೂ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಆಯ್ಕೆಯೂ ಕಗ್ಗಂಟಾಗಿತ್ತು. ಸಾಕಷ್ಟು ಮಂದಿ ಆಕಾಂಕ್ಷಿಗಳಿದ್ದರಿಂದ ಅಳೆದು ತೂಗಿ ಶಾಸಕ ಎಂ.ಶ್ರೀನಿವಾಸ್‌ರಿಗೆ ಮಣೆ ಹಾಕಲಾಗಿತ್ತು. ಆಕಾಂಕ್ಷಿಗಳಿಗೆ ಮುಂದಿನ ಬಾರಿ ಟಿಕೆಟ್‌ ನೀಡುವ ಭರವಸೆ ನೀಡಲಾಗಿತ್ತು. ಆಕಾಂಕ್ಷಿಗಳಾಗಿದ್ದ ಡಾ.ಕೃಷ್ಣ, ಅಶೋಕ್‌ಜಯರಾಂ ಜೆಡಿಎಸ್‌ ತೊರೆದು ಕೈ ಸೇರ್ಪಡೆಗೊಂಡರು. ಈಗ ಕೀಲಾರ ರಾಧಾಕೃಷ್ಣ ಕೂಡ ಕಾಂಗ್ರೆಸ್‌ ಸೇರುವ ಸಿದ್ಧತೆಯಲ್ಲಿದ್ದಾರೆ. ಆದರೆ, ಈ ಬಾರಿ ಅಭ್ಯರ್ಥಿ ಆಯ್ಕೆ ಕಳೆದ ಬಾರಿಗಿಂತ ಕಗ್ಗಂಟಾಗಿ ಪರಿಣಮಿಸಲಿದೆ.

ಇಕ್ಕಟ್ಟಿನಲ್ಲಿ ಸಿಲುಕಿದ ಶಾಸಕ ಎಂ.ಶ್ರೀನಿವಾಸ್‌ :ಹಾಲಿ ಶಾಸಕ ಎಂ.ಶ್ರೀನಿವಾಸ್‌ ಕೂಡ ಟಿಕೆಟ್‌ ಆಕಾಂಕ್ಷಿಯಾಗಿದ್ದಾರೆ. ಆದರೆ, ಒಂದು ವೇಳೆ ಟಿಕೆಟ್‌ ಕೈತಪ್ಪಿದರೆ ತಮ್ಮ ಅಳಿಯ ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌, ಆಪ್ತ ಕೆ.ಎಸ್‌. ವಿಜಯಾನಂದ ಇಬ್ಬರಲ್ಲಿ ಯಾರಿಗೆ ಬೆಂಬಲ ನೀಡಲಿದ್ದಾರೆ ಎಂಬ ಪ್ರಶ್ನೆ ಮೂಡಿದೆ. ಇದು ಶಾಸಕ ಎಂ.ಶ್ರೀನಿವಾಸ್‌ಗೂ ತಲೆ ನೋವಾಗಿ ಪರಿಣಮಿಸಿದೆ. ಎಚ್‌.ಎನ್‌.ಯೋಗೇಶ್‌ ಹಾಗೂ ಕೆ.ಎಸ್‌.ವಿಜಯಾನಂದ ಇಬ್ಬರೂ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.

ಮುನ್ನಲೆಯಲ್ಲಿರುವ ಟಿಕೆಟ್‌ ಆಕಾಂಕ್ಷಿಗಳು : ಜೆಡಿಎಸ್‌ನಲ್ಲಿ ಸದ್ಯಕ್ಕೆ ನಾಲ್ವರು ಆಕಾಂಕ್ಷಿಗಳು ಮುನ್ನಲೆಯಲ್ಲಿದ್ದಾರೆ. ಶಾಸಕ ಎಂ.ಶ್ರೀನಿವಾಸ್‌, ಮನ್‌ಮುಲ್‌ ಅಧ್ಯಕ್ಷ ಬಿ.ಆರ್‌.ರಾಮಚಂದ್ರು, ಜಿಪಂ ಮಾಜಿ ಸದಸ್ಯ ಎಚ್‌.ಎನ್‌.ಯೋಗೇಶ್‌ ಹಾಗೂ ಪಿಇಟಿ ಅಧ್ಯಕ್ಷ ಕೆ.ಎಸ್‌. ವಿಜಯಾನಂದ ಹೆಸರು ಬಲವಾಗಿ ಕೇಳಿ ಬರುತ್ತಿವೆ. ಆದರೆ ಜೆಡಿಎಸ್‌ ವರಿಷ್ಠರು ಯಾರಿಗೆ ಟಿಕೆಟ್‌ ನೀಡಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

 

– ಎಚ್‌.ಶಿವರಾಜು

ಟಾಪ್ ನ್ಯೂಸ್

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Mang-Airport

Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್‌ ವಾರಸುದಾರರಿಗೆ ಹಸ್ತಾಂತರ

Mandya_SAHITYA

ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.