Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ


Team Udayavani, Dec 22, 2024, 11:50 PM IST

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

ಮಂಡ್ಯ: ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಾಗೂ ಸುವರ್ಣ ಮಹೋತ್ಸವದ ನೆನಪಿನಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸುತ್ತಿರುವ ಉದಯವಾಣಿ ಪ್ರಧಾನ ಸಂಪಾದಕ ರವಿಶಂಕರ್‌ ಕೆ. ಭಟ್‌ ಸೇರಿದಂತೆ ವಿವಿಧ ಕ್ಷೇತ್ರಗಳ 46 ಮಂದಿ ಸಾಧಕರನ್ನು ಸಮ್ಮಾನಿಸಲಾಯಿತು.

ಕನ್ನಡ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಉದಯವಾಣಿ ಪ್ರಧಾನ ಸಂಪಾದಕ ರವಿಶಂಕರ್‌ ಕೆ. ಭಟ್‌, ವಿಜಯವಾಣಿ ಸಂಪಾದಕ ಕೆ.ಎನ್‌. ಚನ್ನೇಗೌಡ, ವಿಜಯಕರ್ನಾಟಕ ಸಂಪಾದಕ ಸುದರ್ಶನ ಚನ್ನಂಗಿಹಳ್ಳಿ, ಯುದ್ಧ ಮೆಡಲ್‌ ಪುರಸ್ಕೃತ ಲೆಫ್ಟಿನೆಂಟ್‌ ಜನರಲ್‌ ಬಗ್ಗವಳ್ಳಿ ಸೋಮಶೇಖರ ರಾಜು, ಯುವ ಸಶಕ್ತೀಕರಣ ಕ್ಷೇತ್ರದಿಂದ ಬಿ.ಎಸ್‌. ಅನುಪಮಾ ಸೇರಿದಂತೆ ಹಲವರಿಗೆ ಸಮ್ಮಾನ ಮಾಡಲಾಯಿತು.

ಕನ್ನಡದಲ್ಲಿರಲಿ ಕೋರ್ಟ್‌ ತೀರ್ಪು: ನ್ಯಾ| ಬಿ. ಶಿವಲಿಂಗೇಗೌಡ ಅಭಿಮತ
ನ್ಯಾಯಾಲಯದ ತೀರ್ಪಿನಲ್ಲಿ ಕನ್ನಡ ಅವಶ್ಯ. ಇದು ಭಾವನಾತ್ಮಕವಾದ ಸಂಗತಿ ಎಂದು ನ್ಯಾ| ಬಿ. ಶಿವಲಿಂಗೇಗೌಡ ಹೇಳಿದರು. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ -2022: ಪರಿಣಾಮಕಾರಿ ಅನುಷ್ಠಾನ ವಿಷಯದ ಗೋಷ್ಠಿಯಲ್ಲಿ ಮಾತನಾಡಿ, ನ್ಯಾಯಾಲಯದಲ್ಲಿ ಕನ್ನಡದಲ್ಲಿ ತೀರ್ಪು ನೀಡುವುದರಿಂದ ಕನ್ನಡಿಗ ಕಕ್ಷಿದಾರರಿಗೆ ಅನುಕೂಲವಾಗುತ್ತದೆ. ಇದಕ್ಕೆ ಪೂರಕವಾಗುವಂತೆ ಈಗಾಗಲೇ ಅನೇಕ ಕಾನೂನು ಪುಸ್ತಕಗಳನ್ನು ಕನ್ನಡಕ್ಕೆ ತರ್ಜುಮೆ ಮಾಡಲಾಗಿದೆ. ನ್ಯಾಯಾಂಗದಲ್ಲಿ ನೆಲದ ಭಾಷೆ ಇಲ್ಲವಾದರೆ, ಪ್ರಕರಣದ ವಿಚಾರಣೆ ಸಮರ್ಪಕವಾಗುವುದಿಲ್ಲ ಎಂದು ಹೇಳಿದರು.

ಗೆದ್ದು ಬೀಗಿದ ಡಿಜಿಟಲ್‌ ಕನ್ನಡ ಸಮ್ಮೇಳನ!
ಮಂಡ್ಯ: 87ನೇ ಸಾಹಿತ್ಯ ಸಮ್ಮೇಳನ ಸಾಮಾಜಿಕ ಜಾಲತಾಣಗಳಲ್ಲೂ ಸಾಕಷ್ಟು ಸದ್ದುಮಾಡಿದೆ. ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌, ವಾಟ್ಸ್‌ ಆ್ಯಪ್‌, ಎಕ್ಸ್‌ನಲ್ಲಿ ಸಾಹಿತ್ಯ ಸಮ್ಮೇಳನ ಕುರಿತ ಚರ್ಚೆಗಳು ವ್ಯಾಪಕವಾಗಿ ನಡೆದಿವೆ.

ಸಮ್ಮೇಳನದ ಫೇಸ್‌ಬುಕ್‌ ಪುಟದಲ್ಲಿ ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಲೈಕ್‌, ಕಾಮೆಂಟ್‌ ಮಾಡಿದ್ದಾರೆ. ಖುದ್ದು ಭೇಟಿ ನೀಡಲಾಗದವರು, ಅಲ್ಲಿಂದಲೇ ಫೋಟೋ ಮತ್ತು ವೀಡಿಯೋಗಳನ್ನು ನೋಡಿ ಖುಷಿಪಟ್ಟಿದ್ದಾರೆ. ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಕಸಾಪ ವತಿಯಿಂದ ನಿರ್ಮಿಸಲಾಗಿರುವ ಫೇಸ್‌ಬುಕ್‌ ಗ್ರೂಪ್‌ನಲ್ಲಿ 30 ಸಾವಿರ ಮಂದಿ ಸಬ್‌ಸೆð„ಬರ್‌ ಆಗಿದ್ದು, 31 ಸಾವಿರ ಮಂದಿ ಈ ಪೇಜ್‌ ಲೈಕ್‌ ಮಾಡಿದ್ದಾರೆ. ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಇನ್ನು ಮಂಡ್ಯ ಸಾಹಿತ್ಯ ಸಮ್ಮೇಳನದ ಹ್ಯಾಶ್‌ಟ್ಯಾಗ್‌ನಲ್ಲಿ ಸಾವಿರಾರು ಪೋಸ್ಟ್‌ಗಳು ಹರಿದಾಡಿವೆ.

ಮೊದಲ ಬಾರಿಗೆ ಪೊಲೀಸ್‌ ಬ್ಯಾಂಡ್‌
ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನದ ಇತಿಹಾಸದಲ್ಲೇ ಮೊಟ್ಟಮೊದಲ ಬಾರಿಗೆ ಕರ್ನಾಟಕ ರಾಜ್ಯ ಪೊಲೀಸ್‌ ಬ್ಯಾಂಡ್‌ ಪಾಲ್ಗೊಳ್ಳುವ ಮೂಲಕ ಮಂಡ್ಯದ ಸಮ್ಮೇಳನ ಚರಿತ್ರೆ ನಿರ್ಮಿಸಿತು.

ರವಿವಾರ ನಡೆದ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ರಾಜ್ಯದ ಪೊಲೀಸ್‌ ತಂಡ 10 ಕನ್ನಡ ಗೀತೆಗಳನ್ನು ವಾದ್ಯ ಸಂಗೀತ ಪ್ರಸ್ತುತಪಡಿಸಿ, ಸಂಗೀತ ರಸಿಕರ ಮನ ರಂಜಿಸಿತು. ಮೈಸೂರು ದಸರಾ ಹೊರತುಪಡಿಸಿ ಇದೇ ಮೊದಲ ಬಾರಿಗೆ ಕರ್ನಾಟಕ ಪೊಲೀಸ್‌ ಬ್ಯಾಂಡ್‌ನ‌ವರು ಸಾಹಿತ್ಯ ಸಮ್ಮೇಳನದಲ್ಲಿ ಕಾರ್ಯಕ್ರಮ ನೀಡಿದ್ದಾರೆ.

700ಕ್ಕೂ ಹೆಚ್ಚು ಮಂದಿಗೆ
ಆರೋಗ್ಯ ತಪಾಸಣೆ
ಸಮ್ಮೇಳದ ಮೂರು ದಿನಗಳಲ್ಲಿ 700ಕ್ಕೂ ಅಧಿಕ ಜನ ಆರೋಗ್ಯದ ಸಮಸ್ಯೆ ಕಾರಣಕ್ಕೆ ಸಮ್ಮೇಳನದಲ್ಲಿನ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಚಿಕಿತ್ಸೆ ಪಡೆದಿದ್ದಾರೆ. ಬಂದವರಿಗೆಲ್ಲ ಉಚಿತವಾಗಿ ಚಿಕಿತ್ಸೆ ನೀಡಲಾಗಿದೆ. ಬಹುತೇಕರಿಗೆ ಹೃದಯ ಸಂಬಂಧಿ ಕಾಯಿಲೆ ಕಂಡು ಬಂದಿದ್ದು, ಕೆಲವರನ್ನು ಆಸ್ಪತ್ರೆಗೂ ಕಳಿಸಿಕೊಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಮೋಹನ್‌ ಮಾಹಿತಿ ನೀಡಿದ್ದಾರೆ.

ಸಮ್ಮೇಳನ ಸಮಾರೋಪಕ್ಕೆ
ಸಿಎಂ, ಡಿಸಿಎಂ ಗೈರು
ಮಂಡ್ಯ: ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಂದರ್ಭ ಜೆಡಿಎಸ್‌ನ ಜನಪ್ರತಿನಿಧಿಗಳು ಗೈರಾಗಿದ್ದರೆ, ಸಮಾರೋಪ ಸಮಾರಂಭದಲ್ಲಿ ಉಪಸ್ಥಿತಿ ವಹಿಸಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಗೈರು ಹಾಜರಾಗಿದ್ದರು.

ಸಮ್ಮೇಳನದ ಉದ್ಘಾಟನೆ ಸಮಾರಂಭಕ್ಕೆ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಗೈರಾಗಿದ್ದರು. ಸಿದ್ದರಾಮಯ್ಯ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ್ದರು. ಆದರೆ ಸಮಾರೋಪಕ್ಕೆ ಹಾಜರಾಗಿಲ್ಲ.

ಡಾ| ರಾಜ್‌ಕುಮಾರ್‌ ಯಶೋಗಾಥೆ 10 ಭಾಷೆಗಳಿಗೆ ಭಾಷಾಂತರ!
ಮಂಡ್ಯ: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಮೇರು ನಟ ಡಾ| ರಾಜ್‌ಕುಮಾರ್‌ ಜೀವನಾಧಾರಿತ ಪುಸ್ತಕಗಳಿಗೆ ಬೇಡಿಕೆ ಹೆಚ್ಚಿತ್ತು. ಡಾ| ರಾಜ್‌ ಅವರ ಬಗ್ಗೆ ಹಲವಾರು ಪುಸ್ತಕಗಳು ಹೊರಬಂದಿದ್ದು, ಅವರ ರಂಗಭೂಮಿ, ಸಿನೆಮಾ ಹಾಗೂ ಜೀವನಾಧಾರಿತ ಕಥಾ ಹಂದರ ಹೊಂದಿರುವ ಮಹಾ ಸಂಶೋಧನಾ ಪ್ರಬಂಧವೊಂದು ಕನ್ನಡ ಸೇರಿದಂತೆ ಜಗತ್ತಿನ ವಿವಿಧ 10 ಭಾಷೆಗಳಿಗೆ ಭಾಷಾಂತರಗೊಳ್ಳಲು ಸಿದ್ಧವಾಗುತ್ತಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಮೂಲದ ವಾಸಿ ಡಾ| ಡಿ. ಗುರುಮೂರ್ತಿ ಹಾರೋಹಳ್ಳಿ ಈ ಸಾಹಸಕ್ಕೆ ಮುಂದಾಗಿದ್ದಾರೆ. 7 ವರ್ಷಗಳ ಕಾಲ ನಿರಂತರ ಅಧ್ಯಯನ ನಡೆಸಿ 2023ರಲ್ಲಿ ಮೈಸೂರು ವಿಶ್ವವಿದ್ಯಾ ನಿಲಯಕ್ಕೆ ಸಲ್ಲಿಸಿದ “ಡಾ| ರಾಜ್‌ಕುಮಾರ್‌ ದಿ ಲೆಜೆಂಡ್‌ ಪುಸ್ತಕ’ ಈಗ ಕನ್ನಡದಲ್ಲಿ ಹಲವು ಸಂಚಿಕೆಗಳ ರೂಪದಲ್ಲಿ ಓದುಗರಿಗೆ ಲಭ್ಯವಿದ್ದು. ಇದರೊಟ್ಟಿಗೆ ಇಂಗ್ಲಿಷ್‌, ಹಿಂದಿ, ತೆಲುಗು, ಮಲೆಯಾಳಂ, ತಮಿಳು, ಬಂಗಾಲಿ, ಫ್ರೆಂಚ್‌, ಸ್ಪಾನಿಷ್‌, ಚೀನದ ಮ್ಯಾಂಡರೀನ್‌ ಭಾಷೆಯಲ್ಲಿಯೂ ಭಾಷಾಂತರಕ್ಕೆ ಸಿದ್ಧವಾಗುತ್ತಿದೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.