Mandya: ಕೌಟುಂಬಿಕ ವಿಚಾರದ ಗಲಾಟೆ ಯುವಕನ ಕೊಲೆಯಲ್ಲಿ ಅಂತ್ಯ
Team Udayavani, Dec 15, 2023, 11:58 AM IST
ಮಂಡ್ಯ: ಕೌಟುಂಬಿಕ ವಿಚಾರವಾಗಿ ಮದ್ಯ ಸೇವಿಸುತ್ತಿದ್ದಾಗ ಶುರುವಾದ ಜಗಳ ಯುವಕನ ಹತ್ಯೆಯಲ್ಲಿ ಅಂತ್ಯವಾಗಿದೆ.
ಗುರುವಿಲಾಸ್ ಎಂಬ ಯುವಕನ ಕತ್ತು ಕುಯ್ದು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಮೈಷುಗರ್ ವೃತ್ತದಲ್ಲಿ ಗುರುವಾರ ರಾತ್ರಿ ನಡೆದಿದೆ.
ಮದ್ದೂರು ತಾಲೂಕಿನ ಕಡಿಲುವಾಗಿಲು ಗ್ರಾಮದ ಗುರು ವಿಲಾಸ್ (35) ಭೀಕರವಾಗಿ ಹತ್ಯೆಯಾದ ಯುವಕನಾಗಿದ್ದಾನೆ.
ಬಾರ್ ನಲ್ಲಿ ಮದ್ಯ ಕುಡಿದ ನಂತರ ಜೊತೆಯಲ್ಲಿ ಇದ್ದವರ ನಡುವೆ ಜಗಳ ನಡೆದಿದ್ದು, ಇದೇ ವೇಳೆ ಗುರುವಿಲಾಸ್ ಹತ್ಯೆ ನಡೆದಿದೆ.
ಮದ್ದೂರು ತಾಲೂಕು ಕಡಿಲುವಾಗಿಲು ಗ್ರಾಮದ ಗುರುಮೂರ್ತಿ ಹಾಗೂ ಜಯಮ್ಮ ದಂಪತಿಯ ಪುತ್ರ ಗುರು ವಿಲಾಸ್ ಟಾಟಾ ಏಸ್ ಚಾಲಕನಾಗಿದ್ದು, ಗೆಜ್ಜಲಗೆರೆಯ ಗಾರ್ಮೆಂಟ್ಸ್ ಗೆ ನೌಕರರನ್ನು ಕರೆದುಕೊಂಡು ಹೋಗುತ್ತಿದ್ದನು. ಈ ವೇಳೆ ಮಂಡ್ಯ ಸ್ವರ್ಣಸಂದ್ರದ ಮಾನಸ ಎಂಬುವರನ್ನು ಪ್ರೀತಿಸಿ ಕಳೆದ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದನು. ಇವರಿಗೆ ಹೆಣ್ಣು ಮಗು ಇತ್ತು.
ಇದನ್ನೂ ಓದಿ:Rajasthan: ಹುಟ್ಟುಹಬ್ಬದ ಶುಭದಿನದಂದೇ ಪ್ರಮಾಣ ವಚನ ಸ್ವೀಕರಿಸುತ್ತಿರುವ ಮೊದಲ ಸಿಎಂ
ಮದುವೆ ನಂತರ ಬೆಂಗಳೂರಿನಲ್ಲಿ ಸ್ವಂತ ಕಾರು ಚಾಲನೆ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು. ಆದರೆ ಗಂಡ–ಹೆಂಡತಿ ನಡುವೆ ಹೊಂದಾಣಿಕೆ ಇರಲಿಲ್ಲ. ಪತ್ನಿ ನಡವಳಿಕೆ ಮೇಲೆ ಅನುಮಾನಪಟ್ಟಿದ್ದರಿಂದ ಆಗಾಗ್ಗೆ ಕಲಹ ನಡೆಯುತ್ತಿತ್ತು. ಪತ್ನಿ ಮಾನಸ ಗಂಡನನ್ನು ತೊರೆದು ತವರು ಮನೆ ಸೇರಿಕೊಂಡಿದ್ದಳು.
ಗುರು ವಿಲಾಸ್ ಸಹ ಮಂಡ್ಯದ ಬಸವನಗುಡಿಯ ತಮ್ಮ ಅಕ್ಕನ ಮನೆಗೆ ಮರಳಿದ್ದನು.
ಗುರುವಾರ ಸಂಜೆ ಫ್ಯಾಕ್ಟರಿ ವೃತ್ತದಲ್ಲಿರುವ ಸಂತೃಪ್ತಿ ಫ್ಯಾಮಿಲಿ ರೆಸ್ಟೋರೆಂಟ್ ಪಕ್ಕದ ಸಿದ್ದಾರ್ಥ ಕೋಸ್ಟಲ್ ಬಾರ್ ಅಂಡ್ ರೆಸ್ಟೋರೆಂಟ್ ಗೆ ಹೋಗಿದ್ದು ಜೊತೆಯಲ್ಲಿ ಈತನ ಪರಿಚಿತರು ಇದ್ದರು. ರಾತ್ರಿ ತನಕ ಕುಡಿದಿದ್ದು ರಾತ್ರಿ 10ರ ವೇಳೆ ಜೊತೆಯಲ್ಲಿ ಇದ್ದವರ ನಡುವೆ ಜಗಳ ನಡೆದಿದ್ದು, ಜಗಳ ವಿಕೋಪಕ್ಕೆ ತಿರುಗಿದಾಗ ತಪ್ಪಿಸಿಕೊಳ್ಳಲು ಬಾರ್ ನಿಂದ ಹೊರ ಓಡಿದ್ದಾನೆ. ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಐಸಿಐಸಿಐ ಬ್ಯಾಂಕ್ ಬಳಿ ದೇಹದ ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿದಿದ್ದು ನಂತರ ಕತ್ತು ಕುಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.
ಪತ್ನಿಯ ವಿಚಾರವಾಗಿ ಸ್ವಗ್ರಾಮ ಕಡಿಲು ಬಾಗಿಲು ಗ್ರಾಮದಲ್ಲಿ ಇತ್ತೀಚಿಗೆ ಯುವಕನೊಬ್ಬನ ಮೇಲೆ ಗುರು ವಿಲಾಸ್ ಹಲ್ಲೆ ಮಾಡಿದ್ದನು ಎನ್ನಲಾಗಿದೆ. ಇದೇ ದ್ವೇಷದ ಹಿನ್ನಲೆಯಲ್ಲಿ ಕೌಟುಂಬಿಕ ವಿಚಾರಕ್ಕೆ ಜಗಳ ನಡೆದು ಹತ್ಯೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತವಾಗಿದೆ.
ಪೂರ್ವ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!
Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್
Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.