Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
ಜಿಲೆಟಿನ್ ಸಿಡಿದ ಪರಿಣಾಮ ಯುವಕ ದೇಹ ಚಿದ್ರ
Team Udayavani, Dec 29, 2024, 2:14 PM IST
ಮಂಡ್ಯ: ಅಪ್ರಾಪ್ತರಿಬ್ಬರ ಪ್ರೇಮ ಪ್ರಕರಣದಲ್ಲಿ ಜಿಲೆಟಿನ್ ಸ್ಪೋಟಿಸಿಕೊಂಡು ಪ್ರೇಮಿಯೊಬ್ಬ ಮೃತಪಟ್ಟ ಘಟನೆ ಮಂಡ್ಯದ ನಾಗಮಂಗಲದ ಕಾಳೇನಹಳ್ಳಿಯಲ್ಲಿ ನಡೆದಿದೆ.
ನಾಗಮಂಗಲದ ಬಸವೇಶ್ವರ ನಗರದ ಯುವಕನ ಕಾಳೇನಹಳ್ಳಿಯ ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದ. ಕಳೆದ ವರ್ಷ ಇವರಿಬ್ಬರು ಮನೆ ತೊರೆದು ಓಡಿ ಹೋಗಿದ್ದರು. ಆ ವೇಳೆ ಯುವಕನ ವಿರುದ್ದ ಪೋಕ್ಸೋ ಕಾಯ್ದೆ ಪ್ರಕರಣ ದಾಖಲಾಗಿತ್ತು.
ರಾತ್ರಿ ಯುವತಿಯ ಮನೆ ಬಳಿ ಹೋಗಿದ್ದ ಯುವಕ, ಬಂಡೆಗಳನ್ನು ಸಿಡಿಸುವ ಜಿಲೆಟಿನ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿ, ಮೃತಪಟ್ಟಿದ್ದಾನೆ. ಜಿಲೆಟಿನ್ ಸಿಡಿದ ಪರಿಣಾಮ ಯುವಕ ದೇಹ ಚಿದ್ರ-ಚಿದ್ರವಾಗಿದೆ.
ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.