ಅತ್ಯಾಚಾರ, ಕೊಲೆ ಪ್ರಕರಣ: ಬಂಧನ
ಒಡವೆ, ನಗದು ದೋಚಲು ಅನೈತಿಕ ಸಂಬಂಧವೇ ಕಾರಣ
Team Udayavani, Feb 9, 2021, 3:36 PM IST
ಮದ್ದೂರು: ಪಟ್ಟಣದ ವಿವಿ ನಗರದ ಮಹಿಳೆಯನ್ನು ಅತ್ಯಾಚಾರ ಎಸಗಿ, ಕೊಲೆ ಪ್ರಕರಣ ಭೇದಿಸಿರುವ ಮದ್ದೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಮನಗರ ತಾಲೂಕಿನ ಹೊಂಬೇ ಗೌಡನ ದೊಡ್ಡಿ ಗ್ರಾಮದ ಎಚ್.ಆರ್. ಮನುಕುಮಾರ್(23) ಹಾಗೂ ಸಿ. ರಮೇಶ್(29) ಬಂಧಿತ ಆರೋಪಿಗಳು.
ಹಣ ದೋಚಲು ಅನೈತಿಕ ಸಂಬಂಧ: ಮಹಿಳೆಯ ಬಳಿ ಇದ್ದ ಚಿನ್ನಾಭರಣ ಹಾಗೂ ಹಣ ದೋಚುವ ಉದ್ದೇಶದಿಂದ ಆರೋಪಿಗಳು ಮೃತ ಮಹಿಳೆ ಪೂರ್ಣಿಮಾ ಜತೆ ಅನೈತಿಕ ಸಂಬಂಧ ಬೆಳೆಸಿದ್ದಾರೆ. ಅದರಂತೆ ಫೆ.2ರಂದು ಆರೋಪಿಗಳು ಮೃತ ಮಹಿಳೆಯ ಮನೆಗೆ ಬಂದಿದ್ದಾರೆ. ಆಗ ಆರೋಪಿ ಮನುಕುಮಾರ್ ಮಹಿಳೆ ಜತೆ ದೈಹಿಕ ಸಂಪರ್ಕ ನಡೆಸಿ, ನಂತರ ಆಕೆಯ ಬಾಯಿಗೆ ಬಟ್ಟೆ ತುರುಕಿ, ಆಕೆಯ ಕೈಕಾಲುಗಳನ್ನು ಮಂಚಕ್ಕೆ ಕಟ್ಟಿ, ಮುಖಕ್ಕೆ, ಕುತ್ತಿಗೆ ಬೆಡ್‌ಶೀಟ್ ಹಾಗೂ ಸ್ವೇಟರ್ ನಿಂದ ಸುತ್ತಿ ಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ನಂತರ ಆಕೆಯ ಕೊರಳಲ್ಲಿದ್ದ ಚಿನ್ನದ ಮಾಂಗಲ್ಯ ಸಮೇತ ಚಿನ್ನದಂತಿದ್ದ ರೋಲ್‌ಗೋಲ್ಡ್ ಚಿನ್ನದ ಸರ, ಕೈಗಳಲ್ಲಿದ್ದ ರೋಲ್‌ಗೋಲ್ಡ್ 4 ಬಳೆ, ಮೊಬೈಲ್ ಹಾಗೂ 4500 ರೂ. ನಗದು ತೆಗೆದುಕೊಂಡು ಪರಾರಿಯಾಗಿದ್ದರು ಎಂದು ತನಿಖೆಯಿಂದ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಆಡುಮಲ್ಲೇಶ್ವರ ಕಿರು ಮೃಗಾಲಯ ಅಭಿವೃದ್ಧಿಗೆ ಕ್ರಮ
ಆರೋಪಿಗಳ ಪತ್ತೆಗೆ ತಂಡ ರಚನೆ: ಆರೋಪಿಗಳ ಪತ್ತೆಗೆ ಎಸ್‌ಪಿ ಕೆ.ಪರಶುರಾಮ, ಎಎಸ್‌ಪಿ ಧನಂಜಯ ಮಾರ್ಗದರ್ಶನದಲ್ಲಿ ಮಳವಳ್ಳಿ ಡಿವೈಎಸ್‌ಪಿ ನೇತೃತ್ವದಲ್ಲಿ ಮೂರು ಪ್ರತ್ಯೇಕ ತಂಡ ರಚಿಸಲಾಗಿತ್ತು. ಅದರಂತೆ ಸಿಪಿಐ ಕೆ.ಆರ್.ಪ್ರಸಾದ್ ನೇತೃತ್ವದ ತಂಡ ಭಾನುವಾರ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನದ ಮಾಂಗಲ್ಯ ಜತೆಗೆ ರೋಲ್‌ಗೋಲ್ಡ್ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಮೋಟಾರ್ ಸೈಕಲ್‌ನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದ ಎಲ್ಲ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಎಸ್‌ಪಿ ಪರಶುರಾಮ ಪ್ರಶಂಸಿಸಿ ನಗದು ಬಹುಮಾನ ಘೋಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.