ಕಾಂಗ್ರೆಸ್‌ಗೆ ಭಿನ್ನಮತ; ಕಮಲಕ್ಕೆ ಬಂಡಾಯ


Team Udayavani, Apr 17, 2023, 2:49 PM IST

ಕಾಂಗ್ರೆಸ್‌ಗೆ ಭಿನ್ನಮತ; ಕಮಲಕ್ಕೆ ಬಂಡಾಯ

ಮಂಡ್ಯ: ಮದ್ದೂರು ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಸಹೋದರ ಪುತ್ರ ಎಸ್‌.ಗುರುಚರಣ್‌ಗೆ ಕಾಂಗ್ರೆಸ್‌ ಟಿಕೆಟ್‌ ಕೈತಪ್ಪಿದ್ದರಿಂದ ಬೆಂಬಲಿಗರ ಆಕ್ರೋಶ ಹೆಚ್ಚಾಗಿದೆ.

ಮತ್ತೂಂದೆಡೆ ನಾಗಮಂಗಲ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಸಿಗದೆ ಫೈಟರ್‌ ರವಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದಾರೆ. ಮದ್ದೂರಿನ ಕಾಂಗ್ರೆಸ್‌ ಟಿಕೆಟ್‌ ಕದಲೂರು ಉದಯ್‌ ಹೆಸರು ಘೋಷಣೆ ಮಾಡುತ್ತಿದ್ದಂತೆ ಇತ್ತ ಎಸ್‌.ಗುರುಚರಣ್‌ ಬೆಂಬಲಿಗರು ಆಕ್ರೋಶಗೊಂಡು ಪ್ರತಿಭಟನೆ ನಡೆಸಿದ್ದಾರೆ.

ಅಲ್ಲದೆ, ಭಾನುವಾರ ಕಾರ್ಯಕರ್ತರು, ಬೆಂಬಲಿಗರ ಸಭೆ ನಡೆಸಲಾಗಿದ್ದು, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವ ಬಗ್ಗೆ ಅಭಿಪ್ರಾಯ, ಒತ್ತಡಗಳು ಸಭೆಯಲ್ಲಿ ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಸಭೆ ನಡೆಸಿದ್ದ ನಾಯಕರು: ಮದ್ದೂರು ಕಾಂಗ್ರೆಸ್‌ ಟಿಕೆಟ್‌ಗಾಗಿ ಎಸ್‌.ಗುರುಚರಣ್‌ ಹಾಗೂ ಕದಲೂರು ಉದಯ್‌ ನಡುವೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಗುರುಚರಣ್‌ ಹಾಗೂ ಉದಯ್‌ ಸಮ್ಮುಖದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಮೂರ್‍ನಾಲ್ಕು ಬಾರಿ ಸಭೆ ನಡೆಸಿದ್ದರು. ಆದರೂ, ಒಮ್ಮತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದರಿಂದ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು.

ಎಸ್‌.ಎಂ.ಕೃಷ್ಣ ಪ್ರಭಾವ: ಮಾಜಿ ಸಿಎಂ ಎಸ್‌.ಎಂ. ಕೃಷ್ಣ ತನ್ನ ಸಹೋದರ ಶಂಕರ್‌ ಪುತ್ರ ಎಸ್‌. ಗುರುಚರಣ್‌ಗೆ ಟಿಕೆಟ್‌ ಕೊಡಿಸಲು ಸಾಕಷ್ಟು ಮೇಲೆ ಪ್ರಭಾವ ಬೀರಿದ್ದರು. ಇದರಿಂದ ಸಾಕಷ್ಟು ವಿಳಂಬವಾಗಿತ್ತು. ಮೊದಲ ಹಾಗೂ ಎರಡನೇ ಪಟ್ಟಿ ಯಲ್ಲೂ ಅಭ್ಯರ್ಥಿ ಹೆಸರು ಘೋಷಣೆ ಮಾಡಿರಲಿಲ್ಲ. ಮೊದಲಿನಿಂದಲೂ ಮದ್ದೂರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಹೊಂದಾಣಿಕೆ ರಾಜಕಾರಣ ಮಾಡಿದ್ದರಿಂದ ಕಳೆದ 15 ವರ್ಷಗಳಿಂದ ಕಾಂಗ್ರೆಸ್‌ ಗೆದ್ದೇ ಇಲ್ಲ. ಈ ಬಾರಿಯಾದರೂ ಕೈ ಅಭ್ಯರ್ಥಿ ಗೆಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಹೈಕಮಾಂಡ್‌ ನಾಯಕರು ಸಾಕಷ್ಟು ಅಳೆದು ತೂಗಿ ಉದಯ್‌ ಹೆಸರು ಘೋಷಿಸಿದೆ.

ಟಿಕೆಟ್‌ ಖಚಿತತೆ ಮೇಲೆ ಕೈ ಸೇರಿದ್ದ ಉದಯ್‌: ಕದಲೂರು ಉದಯ್‌ ಕ್ಷೇತ್ರಕ್ಕೆ ಎಂಟ್ರಿಯಾಗಿದ್ದಾಗಿ ನಿಂದಲೂ ಬಿಜೆಪಿ ಸೇರುತ್ತಾರೆ ಎಂಬ ಚರ್ಚೆಗಳು ಬಲವಾಗಿ ನಡೆದಿದ್ದವು. ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಪತನಗೊಳಿಸಿ, ಬಿಜೆಪಿ ಸರ್ಕಾರ ರಚನೆಗೆ ಉದಯ್‌ ಪ್ರಮುಖ ಕಾರಣರಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ನಂತರ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ಚರ್ಚೆಗಳು ನಡೆದವು. ಅದಾದ ಬಳಿಕ ಡಿ.ಕೆ.ಶಿವಕುಮಾರ್‌ ಸೂಚನೆ ಮೇರೆಗೆ ಟಿಕೆಟ್‌ ಸಿಗುವ ಭರವಸೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಅದರಂತೆ ಡಿ.ಕೆ.ಶಿವಕುಮಾರ್‌ ಉದಯ್‌ ಹೆಸರು ಘೋಷಣೆ ಮಾಡಿದ್ದಾರೆ.

ಹೈಕಮಾಂಡ್‌ ನಾಯಕರಿಗೆ ತಲೆನೋವು: ಮಂಡ್ಯ, ಮದ್ದೂರಿನಲ್ಲಿ ಉಂಟಾಗಿರುವ ಭಿನ್ನಮತದ ಕಾವು ರಾಜ್ಯ ನಾಯಕರಿಗೆ ತಲೆನೋವು ತಂದಿದೆ. ಮಂಡ್ಯದಲ್ಲಿ ಘೋಷಿತ ಅಭ್ಯರ್ಥಿ ರವಿಕುಮಾರ್‌ಗೌಡ ಗಣಿಗ ಬದಲಾವಣೆಗೆ ಪಟ್ಟು ಹಿಡಿದಿದ್ದರೆ, ಇದೀಗ ಮದ್ದೂರಿನಲ್ಲೂ ಗುರುಚರಣ್‌ಗೆ ಟಿಕೆಟ್‌ ನೀಡಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಮಂಡ್ಯದಲ್ಲಿ ಸ್ವಲ್ಪ ತಣ್ಣಗಾಗಿದ್ದರೂ ಮದ್ದೂರಿನಲ್ಲಿ ಭಿನ್ನಮತ ಹೊತ್ತಿ ಉರಿಯುತ್ತಿದೆ. ಇದನ್ನು ಬಗೆಹರಿಸುವ ಜವಾಬ್ದಾರಿ ಹೈಕಮಾಂಡ್‌ ನಾಯಕರ ಹೆಗಲ ಮೇಲಿದೆ.

ಪಕ್ಷೇತರ ಅಭ್ಯರ್ಥಿಯಾಗಿ ಫೈಟರ್‌ ರವಿ: ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟುತ್ತಿದೆ. ವಿವಿಧ ಸಾಮಾಜಿಕ ಕಾರ್ಯಗಳ ಮೂಲಕ ಗಮನಸೆಳೆದಿದ್ದ ಫೈಟರ್‌ ರವಿ ಆಲಿಯಾಸ್‌ ಮಲ್ಲಿಕಾರ್ಜುನ್‌ ಟಿಕೆಟ್‌ ಸಿಗುವ ಭರವಸೆ ಹಿನ್ನೆಲೆಯಲ್ಲಿ ಬಿಜೆಪಿ ಸೇರಿದ್ದರು. ಆದರೆ, ರಾಜಕೀಯ ಸ್ಥಿತ್ಯಂತರಗಳಿಂದ ಬಿಜೆಪಿ ಮಾಜಿ ಸಂಸದ ಎಲ್‌. ಆರ್‌.ಶಿವರಾಮೇಗೌಡ ಪತ್ನಿ ಸುಧಾ ಶಿವರಾಮೇಗೌಡರಿಗೆ ನೀಡಿದೆ. ಇದರಿಂದ ಬೇಸತ್ತಿರುವ ಫೈಟರ್‌ ರವಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ನಿರ್ಧರಿಸಿದ್ದಾರೆ. ಮೊದಲೇ ನಾಗಮಂಗಲ ಕ್ಷೇತ್ರದಲ್ಲಿ ಬಿಜೆಪಿಯ ಸ್ಪರ್ಧೆ ಅಷ್ಟಕ್ಕಷ್ಟೇ ಎಂಬಂತಾಗಿತ್ತು. ಇದೀಗ ಸುಧಾ ಶಿವರಾಮೇಗೌಡರಿಗೆ ಟಿಕೆಟ್‌ ನೀಡಿರುವುದರಿಂದ ಸ್ವಲ್ಪಮಟ್ಟಿಗೆ ಮತ ಹೆಚ್ಚಿಸಬಹುದು. ಆದರೆ, ಫೈಟರ್‌ ರವಿ ಸ್ಪರ್ಧೆಯಿಂದ ಬಿಜೆಪಿಗೆ ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಎಚ್‌.ಶಿವರಾಜು

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.