ಎಸ್ಪಿ ನಿವಾಸ ಆವರಣದ ಮರಗಳ ಹನನ?

ಅನುಮತಿ ಪಡೆಯದೇ ಮರಗಳ ಕಟಾವು ಮಾಡಿದ ಆರೋಪ

Team Udayavani, Sep 14, 2021, 5:44 PM IST

ಎಸ್ಪಿ ನಿವಾಸ ಆವರಣದ ಮರಗಳ ಹನನ?

ಮಂಡ್ಯ: ಅರಣ್ಯ ಇಲಾಖೆ ಅನುಮತಿ ಪಡೆಯದೇ ಎಸ್ಪಿ ಡಾ.ಎಂ.ಅಶ್ವಿ‌ನಿ ಅವರು, ಸುಭಾಷ್‌ ನಗರದಲ್ಲಿರುವ ತಮ್ಮ ಅಧಿಕೃತ ನಿವಾಸದ
ಆವರಣದಲ್ಲಿದ್ದ ಮರಗಳನ್ನುಕತ್ತರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಸೋಮವಾರ ಮಧ್ಯಾಹ್ನ ರಸ್ತೆಯನ್ನು ಬಂದ್‌ ಮಾಡಿ ನಿವಾಸದ ಒಳ ಆವರಣದಲ್ಲಿದ್ದ 11 ಅಶೋಕ ಮರಗಳನ್ನು ಕತ್ತರಿಸಿದ್ದು, ಸಾರ್ವಜನಿಕರ
ಟೀಕೆಗೆ ಗುರಿಯಾಗಿದೆ. ತಮ್ಮ ಮಕ್ಕಳು ಆಟವಾಡುತ್ತಿದ್ದಾಗ ಒಂದು ಮರದ ಕೊಂಬೆ ಬಿದ್ದಿದ್ದರಿಂದ ಹಾಗೂ ಕಾಂಪೌಂಡ್‌ಗೆ ಹಾನಿಯಾಗಬಾರದು ಎಂಬ ಉದ್ದೇಶದಿಂದ ಸೋಮವಾರ ಯಂತ್ರದ ಮೂಲಕ ಮರಗಳನ್ನು ಕತ್ತರಿಸಲಾಗಿದೆ ಎಂದು ತಿಳಿದು ಬಂದಿದೆ.

ನೋಟಿಸ್‌ ನೀಡಲು ತೀರ್ಮಾನ: ಮರಗಳ ಕತ್ತರಿಸಲು ಅರಣ್ಯ ಇಲಾಖೆಯಿಂದ ಮಾಹಿತಿ ಪಡೆದಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ಸುದ್ದಿಗಾರರೊಂದಿಗೆ ಸಹಾಯಕ ಅರಣ್ಯ ಸಂರಕ್ಷಣಾಕಾರಿ ಶಶಿಧರ್‌ ಮಾತನಾಡಿ, ಎಸ್ಪಿಯವರು ನಮ್ಮಿಂದ ಯಾವುದೇ ರೀತಿಯ ಅನುಮತಿ ಪಡೆ ದಿಲ್ಲ. ಸರ್ಕಾರಿ ನಿವಾಸ ಆಗಿರುವುದರಿಂದ ಅನುಮತಿ ಪಡೆಯಬೇಕಾಗಿದೆ. ಈ ಬಗ್ಗೆ ನೋಟಿಸ್‌ ನೀಡಲಾಗುವುದು. ಉತ್ತರ ನೀಡದಿದ್ದರೆ ಪ್ರಕರಣ
ದಾಖಲಿಸಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ:ರಾಜ್ಯದಲ್ಲಿ ಐದು ಸಾವಿರ ಶಿಕ್ಷಕರ ನೇಮಕ : ಸಚಿವ ಬಿ.ಸಿ. ನಾಗೇಶ್ ಭರವಸೆ

ವಸತಿ ಗೃಹದ ಸುರಕ್ಷತೆಗಾಗಿ ಮರಗಳಿಗೆ ಟ್ರಿಮ್ಮಿಂಗ್‌: ಎಸ್ಪಿಸ್ಪಷ್ಟನೆ ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಎಸ್ಪಿ ಅಶ್ವಿ‌ನಿ, ವಸತಿ ಗೃಹದ
ಸುರಕ್ಷತೆಗಾಗಿ ಮರದ ರೆಂಬೆ-ಕೊಂಬೆಗಳ ಟ್ರಿಮ್ಮಿಂಗ್‌ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ. ಮರಗಳ ರೆಂಬೆ-ಕೊಂಬೆಗಳು ಬೆಳೆದು ವಿದ್ಯುತ್‌ ತಂತಿಗಳಿಗೆ ತಗಲುತ್ತಿದ್ದು, ಮಳೆಗಾಲವಿರುವುದರಿಂದ ತೊಂದರೆಯಾಗಲಿದೆ. ರೆಂಬೆ-ಕೊಂಬೆಗಳುಕಾಂಪೌಂಡ್‌ಗೆ ವಾಲಿದ್ದು, ಹಾನಿಯಾಗುವ ಸಾಧ್ಯತೆ ಇದೆ. ಆದ್ದರಿಂದ ವಸತಿ ಗೃಹಗಳ ಲೈನ್‌ ಅಧಿಕಾರಿ ಆರ್‌ಪಿಐ ಡಿಎಆರ್‌, ಚೆಸ್ಕಾಂ ಮತ್ತು ಅರಣ್ಯ ಇಲಾಖೆ ಅವರಿಗೆ ಲಿಖಿತ ಮನವಿಯನ್ನು ಸೋಮವಾರ ಸಲ್ಲಿಸಲಾಗಿದೆ. ಅದರಂತೆ ವಸತಿ ಗೃಹದ ಸುರಕ್ಷತೆಗಾಗಿ ಮರಗಳಿಗೆ ಟ್ರಿಮ್ಮಿಂಗ್‌ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

 

ಟಾಪ್ ನ್ಯೂಸ್

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.