ಮಂಡ್ಯ: ಮೊಬೈಲ್ ಕ್ಲಿನಿಕ್‌ಗೆ ಚಾಲನೆ
Team Udayavani, May 9, 2020, 2:17 PM IST
ಸಾಂದರ್ಭಿಕ ಚಿತ್ರ
ಮಂಡ್ಯ: ಕೋವಿಡ್-19 ಮೊಬೈಲ್ ಫಿವರ್ ಕ್ಲಿನಿಕ್‌ಗೆ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಧಿಕೃತ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೊಬೈಲ್ ಕ್ಲಿನಿಕ್ ಹಾಗೂ ಕೋವಿಡ್-19 ಸ್ವಾಬ್ ಟೆಸ್ಟಿಂಗ್ ಸೆಂಟರ್ ಕೂಡ ಆರಂಭವಾಗಿದ್ದು, ಇದರಿಂದ ಸಾರ್ವಜನಿಕರಿಗೆ ಉಪಯುಕ್ತವಾಗಲಿದೆ.
ಜಿಲ್ಲೆಯಲ್ಲಿ ಇದುವರೆಗೂ 4500 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಹೋಬಳಿ ಮಟ್ಟದಲ್ಲಿ ಪರೀಕ್ಷೆ ಮಾಡಲು ಆಸ್ಪತ್ರೆಗಳಿಗೆ ಪರೀಕ್ಷೆಗಾಗಿ ಕರೆತರುವ ಬದಲು ಅವರಿರುವ ಸ್ಥಳದಲ್ಲೇ ಪರೀಕ್ಷೆ ಮಾಡುವುದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ. ಪ್ರತಿ ಹಂತದಲ್ಲೂ ಇದನ್ನು ಸ್ಯಾನಿಟೈಸರ್ ಮಾಡುವ ಸೂಚನೆ ನೀಡಲಾಗಿದೆ ಎಂದರು.
ಈಗಿರುವ 28 ಕೋವಿಡ್ ರೋಗಿಗಳಲ್ಲಿ ಇದುವರೆಗೂ 11 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮತ್ತಿಬ್ಬರು ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಸದ್ಯದಲ್ಲೇ ಬಿಡುಗಡೆಯಾಗುವರು ಎಂದರು. ಡಿಎಚ್‌ಒ ಡಾ.ಮಂಚೇಗೌಡ, ಐಸಿಎಂಆರ್ ನಿರ್ದೇಶನದಂತೆ ಮೊಬೈಲ್ ಫಿವರ್ ಕ್ಲಿನಿ ಕ್‌ನ್ನು ಸಿದ್ಧಪಡಿಸಿದ್ದು, ಹಳ್ಳಿ ಹಳ್ಳಿಗಳಿಗೆ ತೆರಳಿ, ಸ್ವಾಬ್ ಪರೀಕ್ಷೆ ಮಾಡಲಾಗುತ್ತದೆ ಎಂದರು.
ಜಿಲ್ಲಾಧಿಕಾರಿಗಳು ಸ್ವಾಬ್ ಟೆಸ್ಟಿಂಗ್ ಹಾಗೂ ಮೊಬೈಲ್ ಬಸ್‌ನಲ್ಲಿರುವ ಸ್ಯಾನಿಟೈಸರ್ ಹಾಗೂ ಇನ್ನಿತರ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಡಾ.ಬಾಲಕೃಷ್ಣ ಸೇರಿದಂತೆ ಕೆಎಸ್‌ಆರ್ ಟಿಸಿ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.