ಮಂಡ್ಯ: ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

7.25 ಲಕ್ಷ ರೂ. ಮೌಲ್ಯದ 26 ದ್ವಿಚಕ್ರ ವಾಹನಗಳ ವಶ

Team Udayavani, Jan 15, 2021, 7:35 PM IST

bike

ಮಂಡ್ಯ: ಮಂಡ್ಯ ಹಾಗೂ ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೂರ್ವ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಳವಳ್ಳಿ ತಾಲೂಕಿನ ಹಿಟ್ಟನಕೊಪ್ಪಲು ಗ್ರಾಮದ ಶರತ್(20), ಮಂಡ್ಯ ನಗರದ ಬೀಡಿಕಾರ್ಮಿಕರ ಕಾಲೋನಿಯ ನಿವಾಸಿ ಸಫೀವುಲ್ಲಾ ಆಲಿಯಾಸ್ ಬಾಬು(32) ಹಾಗೂ ಹೊಳಲು ಗ್ರಾಮದ ಸಂತೋಷ್ ಆಲಿಯಾಸ್ ಸಂತು(30) ಬಂಧಿತ ಆರೋಪಿಗಳು.

ಇವರ ವಿರುದ್ಧ ಕಿರುಗಾವಲು, ಬನ್ನೂರು ಹಾಗೂ ಟಿ.ನರಸೀಪುರ ಠಾಣೆಗಳಲ್ಲಿ ದ್ವಿಚಕ್ರ ವಾಹನಗಳ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಮೂವರು ಆರೋಪಿಗಳು ಸ್ಪ್ಲೆಂಡರ್ ಬೈಕ್‌ನಲ್ಲಿ ಜ.11ರಂದು ಮುಂಜಾನೆ 5 ಗಂಟೆ ಸಮಯದಲ್ಲಿ ನಗರದ ಸ್ವರ್ಣಸಂದ್ರದ ಸುರೇಶ್ ಪೆಟ್ರೋಲ್ ಬಂಕ್ ಬಳಿ ಬೆಂಗಳೂರು ಕಡೆಗೆ ಹೋಗುವ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದಾಗ ಗಸ್ತಿನಲ್ಲಿದ್ದ ಸಿಬ್ಬಂದಿಗಳಾದ ಲೋಕೇಶ್, ಗಿರಿಶ್ ಹಾಗೂ ಆನಂದ ಅವರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ದ್ವಿಚಕ್ರ ವಾಹನಗಳ ಕಳ್ಳತನ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಪರ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ ತಿಳಿಸಿದರು.

ಇದನ್ನೂ ಓದಿ: ನಾನು ಹಿಂದೂ-ಮುಸ್ಲಿಂ ಪರ, ದೇಶದ್ರೋಹಿಗಳ ಪರ ಅಲ್ಲ: ಸತೀಶಗೆ ಸಹೋದರ ರಮೇಶ್ ತಿರುಗೇಟು

ನಕಲಿ ಕೀ ಬಳಸಿ ಕಳ್ಳತನ:

ನಗರ ಸೇರಿದಂತೆ ವಿವಿಧೆಡೆ ಒಂಟಿಯಾಗಿ ನಿಂತಿದ್ದ ದ್ವಿಚಕ್ರ ವಾಹನಗಳನ್ನು ಟಾರ್ಗೆಟ್ ಮಾಡಿಕೊಂಡು ನಕಲಿ ಕೀ ಬಳಸಿ ಹಾಗೂ ಹ್ಯಾಂಡ್ ಬ್ರೇಕ್ ಮಾಡಿ ಕಳ್ಳತನ ಮಾಡುತ್ತಿದ್ದರು. ಬಂಧಿತರಿoದ 7.25 ಲಕ್ಷ ರೂ. ಮೌಲ್ಯದ 26 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಡಿವೈಎಸ್ಪಿ ನವೀನ್‌ಕುಮಾರ್, ಸಿಪಿಐ ಸಂತೋಷ್, ಪಿಎಸ್‌ಐ ಶರತ್‌ಕುಮಾರ್, ಎಎಸ್‌ಐ ಲಿಂಗರಾಜು, ಸಿಬ್ಬಂದಿಗಳಾದ ಉಮರ್ ಅಹಮದ್, ಕಬಡ್ಡಿ ಮಂಜುನಾಥ, ಮಹೇಶ್, ಶ್ರೀನಿವಾಸ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ ಪ್ರಶಂಸಿಸಿ ನಗದು ಬಹುಮಾನ ಘೋಷಿಸಿದ್ದಾರೆ.

ಇದನ್ನೂ ಓದಿ: ಸಚಿವ ಸಂಪುಟ ಅಸಮಾಧಾನ: ಮಾರ್ಗದಲ್ಲಿ ನಿಂತು ಅಪಸ್ವರ ತೆಗೆಯೋ ಅವಶ್ಯಕತೆ ಇಲ್ಲ ಎಂದ ನಳಿನ್

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.