ಜಿಲ್ಲೆಯ ತಾಣಗಳಿಗೆ ಪ್ರವಾಸಿಗರ ಲಗ್ಗೆ

Team Udayavani, Nov 2, 2022, 4:42 PM IST

tdy-17

ಮಂಡ್ಯ: ದಸರಾ, ದೀಪಾವಳಿ ಹಾಗೂ ಕನ್ನಡ ರಾಜ್ಯೋತ್ಸವ ದಿನದಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಲಗ್ಗೆ ಇಡುತ್ತಿದ್ದು, ಕೆಆರ್‌ಎಸ್‌, ರಂಗನತಿಟ್ಟು ಹಾಗೂ ಗಗನಚುಕ್ಕಿ ಫಾಲ್ಸ್‌ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ. 2020 ಹಾಗೂ 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಬಂದ್‌ ಆಗಿದ್ದರಿಂದ ನಷ್ಟ ಉಂಟಾಗಿತ್ತು. ಆದರೆ, 2022ರಲ್ಲಿ ಯಾವುದೇ ಕೊರೊನಾ ಸೋಂಕಿನ ಭಯವಿಲ್ಲದ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಕೆಆರ್‌ಎಸ್‌ಗೆ ಒಂದು ಲಕ್ಷ ಮಂದಿ: ವಿಶ್ವ ಪ್ರಸಿದ್ಧವಾಗಿರುವ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯಕ್ಕೆ ದಸರಾ ಹಬ್ಬದ ಸಂದರ್ಭದಲ್ಲಿ ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ. ನಂತರ ದಿನಗಳಲ್ಲಿ 6ರಿಂದ 7 ಸಾವಿರ ಮಂದಿ ಆಗಮಿಸಿದ್ದಾರೆ. ಕಳೆದ 20 ದಿನಗಳಲ್ಲಿ ಸುಮಾರು ಲಕ್ಷಕ್ಕೂ ಹೆಚ್ಚು ಮಂದಿ ಕೆಆರ್‌ಎಸ್‌ ಜಲಾಶಯ, ಬೃಂದಾವನಕ್ಕೆ ಭೇಟಿ ನೀಡಿದ್ದಾರೆ.

ರಂಗನತಿಟ್ಟಿಗೂ ಭೇಟಿ: ದಸರಾ ವೇಳೆ ಪ್ರತಿದಿನ 5 ಸಾವಿರಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಶ್ರೀರಂಗಪಟ್ಟಣದ ರಂಗನತಿಟ್ಟು ಪಕ್ಷಿಧಾಮಕ್ಕೂ ಭೇಟಿ ನೀಡಿದ್ದಾರೆ. ಆದರೆ ಈ ವರ್ಷ ಹೆಚ್ಚು ಮಳೆಯಾಗುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರು ಹೆಚ್ಚಾದ ಸಂದರ್ಭಗಳಲ್ಲಿ ಪಕ್ಷಿಧಾಮದಲ್ಲಿ ಆಗಾಗ್ಗೆ ಬೋಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ಇದೇ ತಿಂಗಳ 12ರಿಂದ ಮತ್ತೆ ಬೋಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ನಂತರ ನಾಲ್ಕು ದಿನಗಳಿಂದ ಬೋಟಿಂಗ್‌ ಪುನಾರಂಭಿಸಲಾಗಿದೆ. ಇದರಿಂದ ಪ್ರತಿದಿನ 2500ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.

ಗಗನಚುಕ್ಕಿ ವೈಭವ ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು: ಮತ್ತೂಂದು ಆಕರ್ಷಣೀಯ ಸ್ಥಳವೆಂದರೆ ಮಳವಳ್ಳಿ ತಾಲೂಕಿನ ಗಗನಚುಕ್ಕಿ ಜಲಪಾತ. ಕಳೆದ ಇಪ್ಪತ್ತು ವರ್ಷಗಳಲ್ಲೇ ಪ್ರಸ್ತುತ ವರ್ಷ ಅತಿ ಹೆಚ್ಚು ದಾಖಲೆ ಮಳೆಯಾಗಿದೆ. ಇದರಿಂದ ಕೆಆರ್‌ಎಸ್‌ ಜಲಾಶಯಕ್ಕೆ ಅತಿ ಹೆಚ್ಚು ನೀರು ಹರಿದು ಬರುತ್ತಿದೆ. ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಯುತ್ತಿರುವುದರಿಂದ ಗಗನಚುಕ್ಕಿ ಫಾಲ್ಸ್‌ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೆಆರ್‌ಎಸ್‌ ಹಾಗೂ ರಂಗನತಿಟ್ಟು ಪಕ್ಷಿಧಾಮಕ್ಕೆ ಭೇಟಿ ನೀಡಿದವರು ಗಗನಚುಕ್ಕಿಗೂ ಭೇಟಿ ನೀಡಿ ಕಣ್ತುಂಬಿಕೊಳ್ಳುತ್ತಿದ್ದಾರೆ.

ಬಲಮುರಿ, ಎಡಮುರಿಗೂ ಭೇಟಿ: ಶ್ರೀರಂಗಪಟ್ಟಣದಲ್ಲೇ ಇರುವ ಎಡಮುರಿ, ಬಲಮುರಿ ಪ್ರವಾಸಿ ತಾಣಗಳಿಗೂ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಅದರಲ್ಲೂ ಶನಿವಾರ, ಭಾನುವಾರ ಹಾಗೂ ವಿಶೇಷ ಹಬ್ಬದ ದಿನಗಳಲ್ಲಿ ಹೆಚ್ಚು ಮಂದಿ ಭೇಟಿ ನೀಡುತ್ತಿದ್ದಾರೆ. ಪ್ರವಾಸಿ ತಾಣಗಳಲ್ಲಿ ಭರ್ಜರಿ ವ್ಯಾಪಾರ : ಕೆಆರ್‌ಎಸ್‌ ಜಲಾಶಯದ ಅಕ್ಕಪಕ್ಕದ ಹೋಟೆಲ್‌, ಸಣ್ಣಪುಟ್ಟ ಅಂಗಡಿ, ಬೀದಿ ಬದಿ ವ್ಯಾಪಾರಿಗಳಿಗೆ ಭರ್ಜರಿ ವ್ಯಾಪಾರವಾಗುತ್ತಿದೆ.

ದಸರಾ ಸಂದರ್ಭದಲ್ಲಿ ಅತಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದರಿಂದ ಹೋಟೆಲ್‌, ಬೀದಿಬದಿ ವ್ಯಾಪಾರಿಗಳು, ಸಣ್ಣಪುಟ್ಟ ಅಂಗಡಿ ಸೇರಿ ವಿವಿಧ ವರ್ತಕರಿಗೆ ಉತ್ತಮ ವ್ಯಾಪಾರ ನಡೆದಿದೆ. ಗಗನಚುಕ್ಕಿಯಲ್ಲೂ ಹೋಟೆಲ್‌, ಬೀದಿಬದಿ ವ್ಯಾಪಾರಸ್ಥರಿಗೆ ವ್ಯಾಪಾರ ಜೋರಾಗಿದೆ.

ದಸರಾ ವೇಳೆ ಅತಿ ಹೆಚ್ಚು ಪ್ರವಾಸಿಗರು ಕೆಆರ್‌ಎಸ್‌ ಜಲಾಶಯಕ್ಕೆ ಭೇಟಿ ನೀಡಿದ್ದಾರೆ. ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದರು. ನಂತರ ಪ್ರತಿ ದಿನ 6ರಿಂದ 7 ಸಾವಿರ ಮಂದಿ ಭೇಟಿ ನೀಡಿದ್ದಾರೆ. ಇದುವರೆಗೂ ಒಂದೂವರೆ ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದಾರೆ. – ಫಾರೂಕ್‌ ಅಬು, ಎಇಇ, ಕಾವೇರಿ ನೀರಾವರಿ ನಿಗಮ, ಕೆಆರ್‌ಎಸ್‌ ವಿಭಾಗ

ಅ.12ರಿಂದ ನದಿಯಲ್ಲಿ ನೀರು ಹೆಚ್ಚಾಗಿದ್ದರಿಂದ ಬೋಟಿಂಗ್‌ ಸ್ಥಗಿತಗೊಳಿಸಲಾಗಿತ್ತು. ಈಗ ಮತ್ತೆ ನೀರು ಕಡಿಮೆಯಾಗಿರುವುದರಿಂದ ಬೋಟಿಂಗ್‌ ನಡೆಯುತ್ತಿದೆ. ಪ್ರತಿದಿನ 2500ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. – ಪುಟ್ಟಮಾದೇಗೌಡ, ಉಪವಲಯ ಅರಣ್ಯಾ ಧಿಕಾರಿ, ರಂಗನತಿಟ್ಟು ಪಕ್ಷಿಧಾಮ

ಟಾಪ್ ನ್ಯೂಸ್

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.